Homeಮುಖಪುಟರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ರಾಮ, ಕೃಷ್ಣ, ಭಗವದ್ಗೀತೆಗೆ ಪಾರಂಪರಿಕ ಸ್ಥಾನಮಾನ ನೀಡಿ: ಜಸ್ಟೀಸ್‌ ಯಾದವ್‌‌

ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್‌ ಯಾದವ್‌ ಈ ಹಿಂದೆ, "ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು" ಎಂದಿದ್ದರು.

- Advertisement -
- Advertisement -

ಅಲಹಾಬಾದ್‌‌ ಹೈಕೋರ್ಟ್ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ಮತ್ತೊಂದು ವಿವಾದಾತ್ಮಕ ನಿಲುವನ್ನು ತಾಳಿದ್ದಾರೆ.

2021ರ ಸೆಪ್ಟೆಂಬರ್‌‌ನಲ್ಲಿ “ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹಕ್ಕು ಎಂದು ಪರಿಗಣಿಸಬೇಕು” ಎಂದು ಶೇಖರ್‌ಕುಮಾರ್‌ ಯಾದವ್ ಹೇಳಿದ್ದರು.

“ಗೋವು ತನ್ನ ಮುಪ್ಪಿನಲ್ಲೂ ಸಮಾಜಕ್ಕೆ ಉಪಕಾರಿಯಾಗಿದೆ. ಅದರ ಮೂತ್ರವನ್ನು ಕೃಷಿ ಹಾಗೂ ಔಷಧ ತಯಾರಿಕೆಯಲ್ಲಿ ಬಳಸುತ್ತಾರೆ. ಗೋವನ್ನು ತಾಯಿಯೆಂದು ಗೌರವಿಸಲಾಗುತ್ತದೆ. ಗೋವು ಆಕ್ಸಿಜನ್‌ ಹೊರಗೆ ಬಿಡುವ ಏಕೈಕ ಪ್ರಾಣಿ ಎಂದು ವಿಜ್ಞಾನಿಗಳು ಹೇಳಿದ್ದಾರೆ” ಎಂಬುದಾಗಿ ಯಾದವ್‌ ಅವರು ಹೇಳಿದ್ದು ಟೀಕೆಗೆ ಒಳಗಾಗಿತ್ತು. ಇವರ ಹೇಳಿಕೆಗೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟೀಕೆಗಳು ವ್ಯಕ್ತವಾಗಿದ್ದವು. ಈಗ ಧಾರ್ಮಿಕ ನಂಬಿಕೆಯ ಹೆಸರಲ್ಲಿ ಮತ್ತೊಂದು ವಿವಾದಾತ್ಮಕ ನಿಲುವು ತಾಳಿದ್ದಾರೆ.

ರಾಮ, ಕೃಷ್ಣನ ಕುರಿತು ಫೇಸ್‌ಬುಕ್‌ನಲ್ಲಿ ಅಶ್ಲೀಲವಾಗಿ ಟೀಕಿಸಿದ್ದ ವ್ಯಕ್ತಿಗೆ ಜಾಮೀನು ನೀಡುವಾಗ ಜಸ್ಟೀಸ್‌ ಯಾದವ್‌ ಅವರು, “ದೇವರಾದ ರಾಮ, ಕೃಷ್ಣ, ರಾಮಾಯಣ, ಭಗವದ್ಗೀತೆ, ವಾಲ್ಮೀಕಿ, ವೇದ ವ್ಯಾಸ ಎಲ್ಲರಿಗೂ ಪಾರಂಪರಿಕ ಸ್ಥಾನಮಾನ ನೀಡಲು ಪಾರ್ಲಿಮೆಂಟ್‌ ಕಾನೂನು ರಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿರಿ: ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

“ಆರೋಪಿಯ ಹೇಳಿಕೆ ದೇಶದ ಬಹುಸಂಖ್ಯಾತರ ನಂಬಿಕೆಗೆ ಗಾಯಗೊಳಿಸಿದೆ, ಸಮಾಜದಲ್ಲಿ ಶಾಂತಿಯನ್ನು ಕದಡಿದೆ, ಮುಗ್ಧಜನರ ಮೇಲೆ ಅದರ ಭಾರ ಹೊರಿಸಲಾಗಿದೆ” ಎಂದು ನ್ಯಾಯಮೂರ್ತಿಯವರು ವಿಶ್ಲೇಷಿಸಿದ್ದಾರೆ. “ಈ ಪ್ರಕರಣದಲ್ಲಿ ನ್ಯಾಯಾಲಯ ಮೃದು ನಿಲುವು ತಾಳಿದರೆ, ದೇಶದ ಸೌಹಾರ್ದತೆ ಕದಡುವ ಈ ಥರದ ವ್ಯಕ್ತಿಗಳಿಗೆ ನೈತಿಕ ಬಲ ಬಂದುಬಿಡುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ ಆರೋಪಿಗೆ ಜಾಮೀನನ್ನು ನ್ಯಾಯಮೂರ್ತಿ ನೀಡಿದ್ದಾರೆ. “ವಿಚಾರಣಾಧೀನ ಕೈದಿಯಾಗಿ ಆರೋಪಿಯು 10 ತಿಂಗಳಿನಿಂದ ಜೈಲಿನಲ್ಲಿದ್ದು, ಮುಂದಿನ ದಿನಗಳಲ್ಲಿ ಈ ವಿಚಾರಣೆ ಕೊನೆಗೊಳ್ಳುವ ಸಾಧ್ಯತೆಯಿಲ್ಲ” ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಬಾಬ್ರಿ ಮಸೀದಿ-ರಾಮ ಜನ್ಮಭೂಮಿ ಪ್ರಕರಣದಲ್ಲಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಯಾದವ್, “ಸುಪ್ರೀಂ ಕೋರ್ಟ್ ಭಗವಾನ್ ರಾಮನನ್ನು ನಂಬುವವರ ಪರವಾಗಿ ತೀರ್ಪು ನೀಡಿದೆ” ಎಂದು ಹೇಳಿದರು. ನ್ಯಾಯಮೂರ್ತಿ ಯಾದವ್ ಅವರು, “ರಾಮ ಪ್ರತಿ ನಾಗರಿಕನ ಹೃದಯದಲ್ಲಿ ನೆಲೆಸಿದ್ದಾನೆ, ಆತ ದೇಶದ ಆತ್ಮ, ಸಾಂಸ್ಕೃತಿಕ ಗುರುತು ಮತ್ತು ಆತನಿಲ್ಲದೆ ಭಾರತ ಅಪೂರ್ಣವಾಗಿದೆ” ಎಂದು ಅಭಿಪ್ರಾಯ ತಾಳಿದ್ದಾರೆ.

ಭಾರತೀಯ ಸಂವಿಧಾನವು ಆಸ್ತಿಕರು ಮತ್ತು ನಾಸ್ತಿಕರಿಗೆ ಸಮಾನವಾದ ಹಕ್ಕುಗಳನ್ನು ನೀಡುತ್ತದೆ ಎಂಬುದನ್ನು ಗುರುತಿಸಿದ ನ್ಯಾಯಮೂರ್ತಿ ಯಾದವ್, ದೇವರುಗಳ ಅಶ್ಲೀಲ ಚಿತ್ರಗಳನ್ನು ಮಾಡಿ ಮತ್ತು ಅವುಗಳನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೂಲಕ ಈ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಭಾರತದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪಾರಂಪರಿಕ ಪಾಠಗಳನ್ನು ಸೇರಿಸಬೇಕೆಂದು ನ್ಯಾಯಮೂರ್ತಿ ಯಾದವ್ ಒತ್ತಾಯಿಸಿದ್ದಾರೆ.

ವಕೀಲರ ವಲಯದಿಂದ ಆಯ್ಕೆಯಾಗಿ ನ್ಯಾಯಾಧೀಶರಾದ ಯಾದವ್ ಅವರು, ಹೆಚ್ಚುವರಿ ನ್ಯಾಯಾಧೀಶರಾಗಿ ಡಿಸೆಂಬರ್ 12, 2019 ರಂದು ನೇಮಕವಾದರು. ಈ ವರ್ಷ ಮಾರ್ಚ್ 26ರಂದು ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ಅವರು ಏಪ್ರಿಲ್ 15, 2026 ರಂದು ನಿವೃತ್ತರಾಗುತ್ತಾರೆ ಎಂದು ‘ದಿ ವೈರ್‌’ ಸುದ್ದಿ ಜಾಲತಾಣ ವರದಿ ಮಾಡಿದೆ.

2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಆರ್‌.ದಾವೆ ಅವರು ಸಾರ್ವಜನಿಕವಾಗಿ ಮಾತನಾಡುತ್ತಾ, ಶಾಲೆಯಲ್ಲಿ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಭಗವದ್ಗೀತೆ ಮತ್ತು ಮಹಾಭಾರತವನ್ನು ಕಡ್ಡಾಯವಾಗಿ ಬೋಧಿಸಬೇಕೆಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಅಂದಿನ ಪ್ರೆಸ್ ಕೌನ್ಸಿಲ್‌ನ ಆಗಿನ ಅಧ್ಯಕ್ಷರಾಗಿದ್ದ ಜಸ್ಟೀಸ್‌ ಮಾರ್ಕಂಡೇಯ ಕಟ್ಜು ಅವರು ಕಟುವಾಗಿ ಟೀಕಿಸಿದ್ದರು. “ಇದು ಭಾರತದ ಜಾತ್ಯತೀತ ನಿಲುವಿಗೆ ವಿರುದ್ಧವಾಗಿದೆ” ಎಂದು ಖಂಡಿಸಿದ್ದರು.

ಬಾರ್‌ ಅಂಡ್‌ ಬೆಂಚ್‌‌ ಕೂಡ ಅಲಹಾಬಾದ್ ಹೈಕೋರ್ಟ್‌‌ನ ನಿವೃತ್ತ ನ್ಯಾಯಮೂರ್ತಿ ಗೋವಿಂದ್ ಮಾಥುರ್‌ ಅವರ ಟೀಕೆಯನ್ನು ಉಲ್ಲೇಖಿಸಿ ಜಸ್ಟೀಸ್ ಯಾದವ್‌ ನಿಲುವನ್ನು ಟೀಕಿಸಿದೆ. “ಯಾದವ್‌ ಅವರು ತಮ್ಮ ಐಡಿಯಾಲಜಿ, ನಂಬಿಕೆ, ತತ್ವಶಾಸ್ತ್ರವನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಲು ನ್ಯಾಯಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಾಮೀನು ನೀಡಬೇಕಾದಾಗ ಪ್ರಕರಣವನ್ನು ಕೈಗೆತ್ತುಕೊಳ್ಳಲು ವಿಳಂಬ ಮಾಡಿದ್ದಾರೆ. ಹಿಂದಿಯಲ್ಲಿನ ಆದೇಶವನ್ನು ಇಂಗ್ಲಿಷ್ ಅನುವಾದವಿಲ್ಲದೆ ಅಪ್‌ಲೋಡ್ ಮಾಡಲಾಗಿದೆ”  ಎಂದು ಮಾಥುರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ‘ಆಮ್ಲಜನಕವನ್ನು ಹೊರಬಿಡುವ ಏಕೈಕ ಪ್ರಾಣಿ ದನ’- ಅಲಹಾಬಾದ್‌ ಹೈಕೋರ್ಟ್ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...