Homeಮುಖಪುಟರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ.

- Advertisement -
- Advertisement -

ಲಖಿಂಪುರ್‌ ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ವರುಣ್ ಗಾಂಧಿ ನಂತರ, ಇದೀಗ ಮತ್ತೊಬ್ಬ ಬಿಜೆಪಿ ನಾಯಕ ಘಟನೆಯ ಬಗ್ಗೆ ಮಾತನಾಡಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾಗಿರುವ ಸ್ವತಂತ್ರ ದೇವ್ ಸಿಂಗ್ ಅವರು, “ರಾಜಕೀಯ ನಾಯಕರಾಗಿರುವುದು ಎಂದರೆ, ಫಾರ್ಚುನರ್ ಕಾರಿನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ” ಎಂದು ಭಾನುವಾರ ಹೇಳಿದ್ದಾರೆ.

ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹತ್ಯಾಕಾಂಡದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ್ದ ವರುಣ್ ಗಾಂಧಿ ಅವರನ್ನು ಪಕ್ಷವು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯಿಂದ ಹೊರಕಾಕಿತ್ತು. ಅದಾಗಿಯು ಮತ್ತೊಬ್ಬ ಬಿಜೆಪಿ ನಾಯಕ ಲಿಖಿಂಪುರ್‌ ಘಟನೆ ಬಗ್ಗೆ ಮಾತನಾಡಿ, ಅಚ್ಚರಿ ಮೂಡಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಸ್ವತಂತ್ರ ಸಿಂಗ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಅಧಿವೇಶನದಲ್ಲಿ, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

“ಚುನಾವಣೆಗಳನ್ನು ನಡವಳಿಕೆಯ ಆಧಾರದ ಮೇಲೆ ಗೆಲ್ಲಬೇಕು. ರಾಜಕೀಯವು ನಿಮ್ಮ ಸಮಾಜಕ್ಕೆ, ನಿಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದಾಗಿದೆ. ಇದರಲ್ಲಿ ಯಾವುದೇ ಜಾತಿ ಮತ್ತು ಧರ್ಮವಿಲ್ಲ. ರಾಜಕೀಯ ನಾಯಕರಾಗುವುದೆಂದರೆ ಲೂಟಿ ಮಾಡುವುದಲ್ಲ ಹಾಗೂ ಫಾರ್ಚೂನರ್‌ನಿಂದ ಯಾರನ್ನಾದರೂ ಅಡಿಗೆ ಹಾಕುವುದಲ್ಲ. ನಾವು ಬಡವರ ಸೇವೆಗಾಗಿ ಪಕ್ಷದಲ್ಲಿ ಈ ಇದ್ದೇವೆ. ರಾಜಕೀಯವೆಂದರೆ ಅರೆಕಾಲಿಕ ಕೆಲಸವಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್‌: 2 ನೇ FIR ನಲ್ಲಿ ರೈತರ ಮೇಲೆಯೇ ಆರೋಪ; ರೈತರ ಸಾವಿನ ಬಗ್ಗೆ ಉಲ್ಲೇಖವಿಲ್ಲ!

ತನ್ನ ಭಾಷಣದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಶ್ಲಾಘಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ದಶಕದಿಂದ ರಾಷ್ಟ್ರವನ್ನು ಲೂಟಿ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಅವರು ಕಾರು ಹರಿಸಿ ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಬಂಧನವು ಆಗಿದೆ. ಇದರ ಮಧ್ಯೆ ಸ್ವತಂತ್ರ ಸಿಂಗ್ ಅವರ ಹೇಳಿಕೆ ಹೊರ ಬಿದ್ದಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗಾಗಿ ತಯಾರಿ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಲಖಿಂಪುರ್‌: ಪತ್ರಕರ್ತ ಮತ್ತು ರೈತರ ಕುಟುಂಬಗಳಿಗೆ 50 ಲಕ್ಷ ರೂ ನೀಡುವುದಾಗಿ ಘೋಷಿಸಿದ ಛತ್ತೀಸ್‌ಗಡ, ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...