Homeಚಳವಳಿರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

- Advertisement -
- Advertisement -

ಲಖಿಂಪುರ್ ಖೇರಿ ಹತ್ಯಾಕಾಂಡ ವಿರೋಧಿಸಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಕರೆ ನೀಡಿದ್ದ ಮಹಾರಾಷ್ಟ್ರ ಬಂದ್ ಹಿನ್ನೆಲೆಯಲ್ಲಿ ಕೆಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದ ಬಳಿಕ ಮುಂಬೈನಾದ್ಯಂತ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪುಣೆಯ ಎಪಿಎಂಸಿ ಮತ್ತು ನಾಸಿಕ್‌ನ ಈರುಳ್ಳಿ ವ್ಯಾಪಾರ ಮಾರುಕಟ್ಟೆ ಸೇರಿದಂತೆ ರಾಜ್ಯಾದ್ಯಂತ ಹಲವಾರು ಅಂಗಡಿಗಳು ಮತ್ತು ಸಂಸ್ಥೆಗಳು ಒಟ್ಟಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದವು. ಸುಮಾರು 3 ಗಂಟೆ ಬಳಿಕ ಮೊಬೈಲ್ ರಿಪೇರಿಗಾಗಿ ಕೆಲವು ಸಣ್ಣ ಅಂಗಡಿಗಳು, ಬಟ್ಟೆ ಅಂಗಡಿಗಳು ಮತ್ತು ಸಣ್ಣ ಸಣ್ಣ ಹೋಟೆಲ್‌ಗಳು  ಭಾಗಶಃ ತೆರೆಯಲ್ಪಟ್ಟಿವೆ.

ಧಾರಾವಿ, ಮಂಕುರ್ಡ್, ಶಿವಾಜಿ ನಗರ, ಚಾರ್ಕೋಪ್, ಓಶಿವರಾ, ದಿಯೊನಾರ್ ಮತ್ತು ಇನಾರ್ಬಿಟ್ ಮಾಲ್‌ ಬಳಿ ನಿನ್ನೆ ಮಧ್ಯರಾತ್ರಿಯಿಂದ ಇಂದು ಬೆಳಿಗ್ಗೆವರಗೆ ಎಂಟು ಸರ್ಕಾರಿ ಮತ್ತು ಒಂದು ಗುತ್ತಿಗೆ ಪಡೆದ ಬಸ್ ಸೇರಿ ಒಟ್ಟು 9 ಬಸ್‌ಗಳು ಧ್ವಂಸವಾಗಿವೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಲಿಖಿಂಪುರ್‌: ಪ್ರಧಾನ ಆರೋಪಿ ಆಶಿಶ್‌ ಮಿಶ್ರಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ಶಿವಸೇನಾ ಕಾರ್ಯಕರ್ತರು ಮುಂಬೈನಾದ್ಯಂತ ಮತ್ತು ಮಹಾರಾಷ್ಟ್ರದ ಅಹ್ಮದ್ ನಗರ, ಔರಂಗಾಬಾದ್, ಕೊಲ್ಹಾಪುರ, ಸೊಲ್ಲಾಪುರ ಮತ್ತು ನಾಗ್ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Maharashtra bandh live: 8 BEST buses vandalised, local train services unaffected till now | Hindustan Times

ಎನ್‌ಸಿಪಿ ನಾಯಕ ಮತ್ತು ಸಚಿವ ನವಾಬ್ ಮಲಿಕ್ ಮುಂಬೈನಲ್ಲಿ ಪಕ್ಷದ ನಾಯಕರ ಜೊತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಕಾರ್ಯಕರ್ತರಿಗೆ ಕಲ್ಲು ತೂರಾಟ ಮತ್ತು ಹಿಂಸಾಚಾರದಲ್ಲಿ ತೊಡಗಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

PC: indianexpress

ಇನ್ನು ಮಹಾರಾಷ್ಟ್ರ ಬಂದ್ 100% ಯಶಸ್ವಿಯಾಗಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ತಿಳಿಸಿದ್ದಾರೆ. ಜನರು ತಾವಾಗಿಯೇ ಬಮದು ಹೃದಯಪೂರ್ವಕವಾಗಿ ಬಂದ್‌ನಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ. ಕಲ್ಲು ತೂರಾಟ, ಹಿಂಸಾಚಾರದ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸಿರುವ ಅವರು, “ಪ್ರಪಂಚದಾದ್ಯಂತ ಪ್ರತಿಭಟನೆಯ ಸಮಯದಲ್ಲಿ ಇಂತಹ ಸಣ್ಣ ಘಟನೆಗಳು ನಡೆಯುತ್ತವೆ” ಎಂದಿದ್ದಾರೆ.

ಬಿಜೆಪಿ ನಾಯಕ, ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಹೈಕೋರ್ಟ್‌ಗೆ ಬಂದ್ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. “ಈ ಹಿಂದೆ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ ಇಂತಹ ಬಂದ್‌ಗಳನ್ನು ನಿಷೇಧಿಸಿ, ಶಿವಸೇನೆಗೆ ದಂಡ ವಿಧಿಸಿತ್ತು. ಈಗಲೂ ಹೈಕೋರ್ಟ್ ಬಂದ್ ಬಗ್ಗೆ ಗಮನ ಹರಿಸಬೇಕು” ಎಂದಿದ್ದಾರೆ.

ಅಕ್ಟೋಬರ್‌ 03 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ಮುಗಿಸಿ ಹಿಂತಿರುಗುತ್ತಿದ್ದ ರೈತರ ಮೇಲೆ, ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಮಿಶ್ರಾ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ರಾಜಕಾರಣಿ ಎಂದರೆ ಫಾರ್ಚೂನರ್‌ ಕಾರನ್ನು ಯಾರ ಮೇಲಾದರೂ ಹರಿಸುವುದಲ್ಲ: ಯುಪಿ ಬಿಜೆಪಿ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...