Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...