Homeಚಳವಳಿಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಈ ಚುನಾವಣೆಯಲ್ಲಿ ಮಹಿಳೆಯರಿಗೆ ಸಿಕ್ಕಿದ್ದೆಷ್ಟು? ಮಮತಾ ಮತ್ತು ನವೀನ್ ಪಟ್ನಾಯಕ್ ಮಾದರಿ ಮೆಚ್ಚುವಂತದ್ದು..

ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೇಶದ ಅರ್ಧದಷ್ಟಿರುವ ಮಹಿಳೆಯರಲ್ಲಿ/ಮಹಿಳಾ ಮತದಾರರಲ್ಲಿ ಈ ಚುನಾವಣೆಯಲ್ಲಿ ಅವರಿಗೆ ಸಿಕ್ಕಿದ್ದೆಷ್ಟು? ಈ ಪ್ರಶ್ನೆಗೆ ಉತ್ತರ ಹುಡುಕಿದರೆ ತೀವ್ರ ನಿರಾಶೆ ಆವರಿಸುತ್ತದೆ. ಆದರೂ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಒಡಿಸ್ಸಾದಲ್ಲಿ ನವೀನ್ ಪಟ್ನಾಯಕ್‍ರವರ ಮಾದರಿ ಮೆಚ್ಚುವಂತಾದ್ದಾಗಿದೆ.

ಮೊದಲಿಗೆ ಒಡಿಸ್ಸಾದ ಮುಖ್ಯಮಂತ್ರಿ ನವೀನ ಪಟ್ನಾಯಕ್‍ರವರು 33% ಟಿಕೆಟ್‍ಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಘೋಷಿಸಿದರು. ಅಂತೆಯೇ ಅಲ್ಲಿನ 21 ಲೋಕಸಭಾ ಕ್ಷೇತ್ರಗಳಲ್ಲಿ 7 ಸ್ಥಾನಗಳನ್ನು ಮಹಿಳೆಯರಿಗೆ ಟಿಕೆಟ್ ನೀಡಿದರು. 7ರಲ್ಲಿ 5 ಜನ ಮಹಿಳೆಯರು ವಿಜಯ ಸಾಧಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು 41% ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವ ಮೂಲಕ ಪುರುಷರ ಹುಬ್ಬೇರುವಂತೆ ಮಾಡಿದ್ದರು. ಅಂದರೆ ಬಂಗಾಳದ 42 ಸ್ಥಾನಗಳಲ್ಲಿ 17 ಸ್ಥಾನಗಳನ್ನು ಮಹಿಳೆಯರಿಗೆ ನೀಡಿ ಚುನಾವಣೆ ಎದುರಿಸಿದರು. 17ರಲ್ಲಿ 09 ಕ್ಷೇತ್ರಗಳಲ್ಲಿ ಮಹಿಳೆರು ಜಯ ಸಾಧಿಸಿದ್ದಾರೆ.

ಒಟ್ಟು ಅಲ್ಲಿ ಮಮತಾ ನೇತೃತ್ವದ ಟಿಎಂಸಿಗೆ 18 ಸಂಸದರಿದ್ದರೆ ಅದರಲ್ಲಿ ಅರ್ಧದಷ್ಟು ಅಂದರೆ 09 ಮಹಿಳಾ ಸಂಸದರಿರುವುದು ಸಂತಸದ ಸಂಗತಿ. ಮಹಿಳೆಯರಿಗೆ ಟಿಕೆಟ್ ನೀಡಿದರೆ ಗೆಲ್ಲುವುದಿಲ್ಲ ಎನ್ನುವುದನ್ನು ಈ ಮಹಿಳೆಯರು ಸುಳ್ಳು ಮಾಡಿದ್ದಾರೆ.

ಇವೆರೆಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಇದಕ್ಕಾಗಿ ನಾವು ಮುಕ್ತಕಂಠದಿಂದ ಶ್ಲಾಘಿಸಬೇಕಿದೆ. ರಾಷ್ಟ್ರೀಯ ಪಕ್ಷಗಳ ಮಾಡಲಾಗದ ಈ ಅಭೂತಪೂರ್ವ ಸಾಧನೆಯನ್ನು ಸ್ಥಳೀಯ ನಾಯಕರು ಮಾಡಿ ತೋರಿಸಿದ್ದಾರೆ. ಇವರ ನಡೆ ಮಾದರಿಯಾಗಿದ್ದು ಉಳಿದ ರಾಜ್ಯಗಳು ಇವರನ್ನು ಅನುಸರಿಸಬೇಕಿದೆ.

ಇನ್ನುಳಿದಂತೆ ಈ ಲೋಕಸಭಾ ಚುನಾವನೆಯಲ್ಲಿ ಒಟ್ಟು 8049 ಅಭ್ಯರ್ಥಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿದ್ದುದು ಕೇವಲ 750 ಮಾತ್ರ. ಅಂದರೆ 9.21% ಮಾತ್ರ. ಇನ್ನು 750ರಲ್ಲಿ ಗೆದ್ದವರ ಸಂಖ್ಯೆ 72 ಮಾತ್ರ. ಅಂದರೆ 9.6% ಮಾತ್ರ. ಇನ್ನು 542 ಕ್ಷೇತ್ರಗಳಲ್ಲಿ 72 ಮಹಿಳೆಯರು ಗೆಲುವು ಸಾಧಿಸಿದ್ದಾರೆ. ಅಂದರೆ 13.28% ಮಹಿಳೆಯರು ಸಂಸತ್ ಪ್ರವೇಶಿಸಿದ್ದಾರೆ ಅಷ್ಟೇ.

50% ಅಥವಾ ಕನಿಷ್ಠ 33% ಮಹಿಳಾ ಮೀಸಲಾತಿ ಯಾಕೆ ಜಾರಿಗೆ ಬರಬೇಕು ಎಂಬುದನ್ನು ಈ ಮೇಲಿನ ಅಂಶಗಳು ತಿಳಿಸುತ್ತವೆ. ಇದಕ್ಕಾಗಿ ಈ ಹೋರಾಟವನ್ನು ತೀವ್ರಗೊಳಿಸಬೇಕಿದೆ. ಇದೇ ಸಂದರ್ಭದಲ್ಲಿ ತಾವು ಅಧಿಕಾರಕ್ಕೆ ಬಂದರೆ ರಾಜಕೀಯ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ರಾಹುಲ್ ಗಾಂಧಿ ಹೇಳಿದ್ದನ್ನು ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...