Homeಮುಖಪುಟದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಖಿಂಪುರ್‌ ಖೇರಿಯಂತಹ ಘಟನೆ ನಡೆಯುತ್ತಲೇ ಇರುತ್ತವೆ: ನಿರ್ಮಲಾ ಸೀತಾರಾಮನ್

- Advertisement -
- Advertisement -

ಲಖಿಂಪುರ್‌ ಖೇರಿಯಲ್ಲಿ ನಡೆದಂತಹ ಘಟನೆ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಲೆ ಇರುತ್ತವೆ. ಅದನ್ನು ಕೂಡಾ ಎಲ್ಲರೂ ಪ್ರಶ್ನಿಸಬೇಕು ಎಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಪ್ರಸ್ತುತ ಅಮೆರಿಕಾ ಪ್ರವಾಸದಲ್ಲಿರುವ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡುತ್ತಿದ್ದರು.

ಲಖಿಂಪುರ್‌ ಖೇರಿಯಲ್ಲಿ ನಡೆದ ಘಟನೆ ಖಂಡನೀಯವಾಗಿದ್ದು, ಅದನ್ನು ಸಮರ್ಥಿಸುವುದಿಲ್ಲ. ಭಾರತದ ಇತರ ಭಾಗಗಳಲ್ಲಿಯೂ ಸಹಜವಾಗಿ ನಡೆಯುವ ಇಂತಹ ಘಟನೆಗಳ ಬಗ್ಗೆ ಯಾಕೆ ಚರ್ಚೆ ಆಗುತ್ತಿಲ್ಲ ಎಂದು ಕೇಳಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಅದನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಕುರಿತು ರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವರ ವಜಾಗೆ ಕಾಂಗ್ರೆಸ್ ಆಗ್ರಹ

ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರ ಹತ್ಯೆ ಮತ್ತು ಒಕ್ಕೂಟ ಸರ್ಕಾರದ ಸಚಿವರ ಪುತ್ರ ಆಶಿಶ್ ಮಿಶ್ರಾ ಬಂಧನದ ಕುರಿತು ಅವರಿಗೆ ಪ್ರಶ್ನೆಗಳನ್ನು ಕೇಳಲಾಗಿತ್ತು. “ಘಟನೆಯ ಬಗ್ಗೆ ಪ್ರಧಾನ ಮಂತ್ರಿಯಾಗಲಿ, ಇತರ ಮಂತ್ರಿಯಾಗಲಿ ಯಾಕೆ ಮಾತನಾಡುತ್ತಿಲ್ಲ ಮತ್ತು ಘಟನೆಯ ಬಗ್ಗೆ ಪ್ರಶ್ನಿಸಿದಾಗ ಸಮರ್ಥನೆ ನೀಡುವಂತೆ ಪ್ರತಿಕ್ರಿಯೆ ಯಾಕೆ ನೀಡಲಾಗುತ್ತದೆ” ಎಂದು ಅವರನ್ನು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿದ ನಿರ್ಮಲಾ ಅವರು, “ಖಂಡಿತವಾಗಿ ಅಲ್ಲ…ನೀವು ಕೇಳಿರುವ ಈ ಘಟನೆ ಖಂಡಿತ ಸಂಪೂರ್ಣ ಖಂಡನೀಯವಾಗಿದೆ, ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೆ ಹೇಳುತ್ತಾರೆ. ಅದೇ ರೀತಿ ಬೇರೆಡೆ ಕೂಡಾ ಇದೇ ರೀತಿಯ ಘಟನೆ ನಡೆಯುತ್ತದೆ, ಇದು ನನ್ನ ಕಾಳಜಿ” ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ರೀತಿಯ ಸಮಸ್ಯೆಗಳು ದೇಶದ ಅನೇಕ ಭಾಗಗಳಲ್ಲಿ ಸಮಾನವಾಗಿ ನಡೆಯುತ್ತಿದೆ. ನೀವು, ಇತರರು ಹಾಗೂ ಡಾ.ಅಮರ್ತ್ಯ ಸೇನ್‌ ಅವರು ಸೇರಿದಂತೆ ಭಾರತವನ್ನು ತಿಳಿದಿರುವ ಅನೇಕರಿಗೆ ಹೇಳಲು ಬಯಸುವುದು, ಇಂತಹ ಘಟನೆಗಳು ಪ್ರತಿ ಭಾರಿ ಸಂಭವಿಸಿದಾಗ ಪ್ರಶ್ನೆಗಳನ್ನು ಕೇಳಬೇಕು. ಕೇವಲ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಮಾತ್ರವೆ ನಡೆದಾಗ ಮತ್ತು ಅದರಲ್ಲಿ ನನ್ನ ಕ್ಯಾಬಿನೆಟ್ ಸಹೋದ್ಯೋಗಿಯ ಮಗನೊಬ್ಬ ಇದ್ದಾನೆಂಬುದನ್ನು ಊಹಿಸಿ ಪ್ರಶ್ನಿಸುವುದಲ್ಲ. ಘಟನೆಯ ಬಗ್ಗೆ ಸರಿಯಾದ ವಿಚಾರಣೆ ನಡೆಸಿ ನ್ಯಾಯವನ್ನು ಎತ್ತಿಹಿಡಿಯುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯು ಸಾವರ್ಕರ್‌ರನ್ನು ಶೀಘ್ರದಲ್ಲೇ ರಾಷ್ಟ್ರಪಿತ ಎಂದು ಘೋಷಿಸಲಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

“ಇದು ಕೇವಲ ನನ್ನ ಪಕ್ಷ ಅಥವಾ ನನ್ನ ಪ್ರಧಾನ ಮಂತ್ರಿಯ ಬಗ್ಗೆ ಸಮರ್ಥಿಸುವುದಲ್ಲ. ಇದು ಭಾರತವನ್ನು ಸಮರ್ಥಿಸುವುದು. ನಾನು ಭಾರತಕ್ಕಾಗಿ ಮಾತನಾಡುತ್ತೇನೆ, ಬಡವರ ನ್ಯಾಯಕ್ಕಾಗಿ ಮಾತನಾಡುತ್ತೇನೆ. ನನ್ನನ್ನು ಗೇಲಿ ಮಾಡಲಾಗುವುದಿಲ್ಲ, ಒಂದು ವೇಳೆ ಗೇಲಿ ಮಾಡುತ್ತಿದ್ದರೆ, ನಾನು ಎದ್ದು ನಿಂತು ‘ಕ್ಷಮಿಸಿ, ಸತ್ಯಗಳ ಬಗ್ಗೆ ಮಾತನಾಡೋಣ’ ಎಂದು ಸಮರ್ಥಿಸಿಕೊಳ್ಳುತ್ತೇನೆ. ಇದು ನಿಮಗೆ ನನ್ನ ಉತ್ತರ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 3 ರಂದು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರ್‌ ಖೇರಿಗೆ ನೀಡಿದ ಭೇಟಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದ ರೈತರ ಮೇಲೆ ಕಾರುಗಳನ್ನು ಹರಿಸಲಾಗಿತ್ತು. ಈ ಕಾರಿನಲ್ಲಿ ಒಕ್ಕೂಟ ಸರ್ಕಾರದ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಇದ್ದರು ಎಂದು ರೈತರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ಎಸ್‌ಐಟಿಯಿಂದ ಆರೋಪಿ ಕಾರು ಚಾಲಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...