Homeಚಳವಳಿರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ರೈತರನ್ನು ಬೆಂಬಲಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಭಾಷಣ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ವಿರೋಧಿಸಿ ಬಹಿರಂಗವಾಗಿಯೇ ರೈತರನ್ನು ಬೆಂಬಲಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವಿಡಿಯೊವನ್ನು ಶೇರ್‌ ಮಾಡುವ ಮೂಲಕ ಮತ್ತೊಮ್ಮೆ ರೈತರನ್ನು ಬೆಂಬಲಿಸಿದ್ದಾರೆ.

1980ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ರೈತರ ಹೋರಾಟವನ್ನು ಬೆಂಬಲಿಸಿ ಮಾಡಿದ್ದ ಭಾಷಣದ ಚಿಕ್ಕ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ವಿಶಾಲ ಹೃದಯದ ಬುದ್ಧಿವಂತ ನಾಯಕನ ಮಾತುಗಳು …” ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. 42 ಸೆಕೆಂಡ್‌ಗಳ ವಿಡಿಯೊದಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸದಂತೆ ಅಂದಿನ ಇಂದಿರಾಗಾಂಧಿ ಸರ್ಕಾರಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಎಚ್ಚರಿಕೆ ನೀಡಿರುವುದು ಮತ್ತು ರೈತರಿಗೆ ತಮ್ಮ ಬೆಂಬಲವನ್ನು ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಗೊಬ್ಬರ ಕೇಳಿದ ರೈತರ ಮೇಲೆ ಲಾಠಿ ಬೀಸಿದ ಪೊಲೀಸರು – ತೀವ್ರ ಖಂಡನೆ

 

ದೇಶದ ರೈತರು ಮೋದಿ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ 10 ತಿಂಗಳಿನಿಂದ ಆಂದೋಲನ ನಡೆಸುತ್ತಿದ್ದಾರೆ. ವರುಣ್ ಗಾಂಧಿ ಈಗ ವಾಜಪೇಯಿ ಅವರ ಭಾಷಣದ ವಿಡಿಯೋ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹತ್ಯಾಕಾಂಡ ಘಟನೆಗಳನ್ನು ಖಂಡಿಸಿ ಬಿಜೆಪಿ ಸಂಸದ ಪದೇ ಪದೇ ಟ್ವೀಟ್ ಮಾಡುತ್ತಿದ್ದರು. ಈ ಕಾರಣದಿಂದ ಅವರನ್ನು  80 ಸದಸ್ಯರೊಂದಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಕೈಬಿಡಲಾಗಿದೆ ಎನ್ನುವ ವದಂತಿಗಳು ಹರಡಿದ್ದು, ಬಿಜೆಪಿಯು ಆರೋಪವನ್ನು ತಳ್ಳಿ ಹಾಕಿದೆ.

ಈ ಹಿಂದೆ ಘಟನೆಯ ಸ್ಪಷ್ಟ ಮತ್ತು ದೀರ್ಘ ವಿಡಿಯೊವನ್ನು ಟ್ವೀಟ್ ಮಾಡಿದ್ದ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದರು.


ಇದನ್ನೂ ಓದಿ: ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...