Homeಕರ್ನಾಟಕ‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

- Advertisement -
- Advertisement -

ಬಿಜೆಪಿಯಲ್ಲಿ ಶಾಸಕರೊಬ್ಬರು ಬಂಡಾಯದ ಮುನ್ಸೂಚೆನೆ ನೀಡಿದ್ದು, ರಾಜೀನಾಮೆಯ ಬೆದರಿಕೆಯನ್ನು ಒಡ್ಡಿದ್ದಾರೆ. “ಪಕ್ಷ ನನಗೆ ದ್ರೋಹ ಮಾಡುತ್ತಿದೆ ಎಂದು ಅನಿಸುತ್ತಿದೆ. ಪಕ್ಷವು ನನ್ನನ್ನು ಗುರುತಿಸಿ ಒಳ್ಳೆಯ ಹುದ್ದೆಯನ್ನು ಕೊಟ್ಟರೆ ಸರಿ, ಇಲ್ಲವೆಂದರೆ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ನಮಗೂ ಗೊತ್ತಿದೆ” ಎಂದು ತುರುವೆಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ ಗುರುವಾರ ಹೇಳಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಪಕ್ಷ ನನಗೆ ದ್ರೋಹ ಮಾಡುತ್ತಿದೆ ಎಂದು ಅನಿಸುವ ಮಟ್ಟಿಗೆ ಬಂದಿದೆ. ಪಕ್ಷವು ನನ್ನನ್ನು ಗುರುತಿಸಿ ಸ್ಥಾನ ಕೊಟ್ಟರೆ ಸರಿ. ಇಲ್ಲವೆಂದರೆ ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂದು ನಮಗೂ ಗೊತ್ತಿದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ನಾವು ಕೇಳುವವರೆಗೂ ಕೇಳಿದ್ದೇವೆ. ರಾಜ್ಯಾಧ್ಯಕ್ಷರಿಗೆ, ಮುಖ್ಯಮಂತ್ರಿಗೆ ಕೇಳಿದ್ದೇವೆ. ಅವರು ಕಡೆಗಣಿಸಿದರೆ ಯಾವುದೆ ಕಾರಣಕ್ಕೂ ನಾವು ಪಕ್ಷದಲ್ಲಿ ಇರಲ್ಲ ಎಂದು ಜಯರಾಮ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ಸ್ಥಾನವನ್ನು ಕೊಡಲಿಲ್ಲ ಎಂದರೆ, ಈ ರಾಜಕೀಯವನ್ನೇ ಮುಗಿಸುತ್ತೇವೆ. ನಮ್ಮ ತಾಳ್ಮೆಗೂ ಮಿತಿ ಇರುತ್ತದೆ. ಈ ತಿಂಗಳ ಕೊನೆಗೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಈ ತಿಂಗಳ ಕೊನೆಯವರೆಗೂ ನೋಡುತ್ತೇವೆ. ಸಚಿವ ಸ್ಥಾನ ಎಲ್ಲಾ ನಾವು ಕೇಳಿಲ್ಲ. ಕಡಿಮೆಯೆಂದರೂ, ಒಳ್ಳೆಯ ಹುದ್ದೆ, ನಿಗಮ ಕೊಡಿ ಎಂದು ಕೇಳಿದ್ದೇವೆ. ಅವರು ಕೊಟ್ಟರೆ ಕೊಡಲಿ, ಇಲ್ಲವೆಂದರೆ ಬೇರೆ ರೀತಿಯ ನಿರ್ಣಯ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

“ಮತದಾರರು ನೀಡಿರುವ ಓಟಿಗೆ ತೃಪ್ತಿಯಾಗುವಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಕೊಟ್ಟರೆ ಕೊಡಲಿ, ಕೊಡಲಿಲ್ಲ ಎಂದರೆ ಬೇಡ. ನಾನು ಹಾಗೆಯೆ ಕೆಲಸ ಮಾಡುತ್ತೆನೆ” ಎಂದು ಅವರು ಶಾಸಕ ಮಸಾಲೆ ಜಯರಾಮ ಬಂಡಾಯದ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...