Homeಮುಖಪುಟರಾಹುಲ್ ಗಾಂಧಿ ಭೇಟಿ ಬಳಿಕ ರಾಜೀನಾಮೆ ಹಿಂಪಡೆಯಲಿರುವ ನವಜೋತ್ ಸಿಂಗ್ ಸಿಧು

ರಾಹುಲ್ ಗಾಂಧಿ ಭೇಟಿ ಬಳಿಕ ರಾಜೀನಾಮೆ ಹಿಂಪಡೆಯಲಿರುವ ನವಜೋತ್ ಸಿಂಗ್ ಸಿಧು

- Advertisement -
- Advertisement -

ಕಳೆದೆ ಮೂರು ತಿಂಗಳುಗಳಿಂದ ಪಂಜಾಬ್ ರಾಜ್ಯದ ರಾಜಕೀಯ ಬೆಳವಣಿಗೆಗಳ ಕೇಂದ್ರ ಬಿಂದುವಾಗಿರುವ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು, ರಾಹುಲ್ ಗಾಂಧಿ ಭೇಟಿ ನಂತರ ತಮ್ಮ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಹುದ್ದೆಗೆ ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ.

ಸೆಪ್ಟಂಬರ್ 28 ರಂದು ಸಿಧು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರದ್ದರು. “ರಾಜಿಯು ಮನುಷ್ಯನೊಬ್ಬನ ವ್ಯಕ್ತಿತ್ವವನ್ನು ನಾಶಗೊಳಿಸುತ್ತದೆ. ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮುಂದಕ್ಕೂ ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ” ಎಂದು ನವಜೋತ್ ಸಿಧು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದರು.

ನಾನು ಎಲ್ಲ ಕಾಳಜಿಗಳನ್ನು ಪಕ್ಷದ ಹೈಕಮಾಂಡ್‌ನೊಂದಿಗೆ, ರಾಹುಲ್ ಗಾಂಧಿಯವರೊಂದಿಗೆ ಹಂಚಿಕೊಂಡಿದ್ದೇನೆ. ಪಂಜಾಬ್ ಅಭಿವೃದ್ದಿಯ ವಿಚಾರದಲ್ಲಿ ಪಕ್ಷದ ಅಧ್ಯಕ್ಷರು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರ ಮೇಲೆ ಸಂಪೂರ್ಣ ಭರವಸೆಯಿದ್ದು, ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿದ್ದೇನೆ. ಅವರ ಆದೇಶಗಳನ್ನು ಪಾಲಿಸುತ್ತೇನೆ. ಎಲ್ಲಾ ಸಮಸ್ಯೆಗಳು ಬಗೆಹರಿದಿವೆ ಎಂದು ನವಜೋತ್ ಸಿಂಗ್ ಸಿಧು ಗುರುವಾರದ ಸಭೆ ಬಳಿಕೆ ಹೇಳಿದ್ದರು.

ಪಕ್ಷದ ಮುಖ್ಯಸ್ಥ ಹರೀಶ್ ರಾವತ್ ಮಾತನಾಡಿ ” ಸಿಧು ತಮ್ಮ ಕಾಳಜಿಗಳನ್ನು ರಾಹುಲ್ ಗಾಂಧಿ ಅವರೊಂದಿಗೆ ಹಂಚಿಕೊಂಡಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಅವರು ತಮ್ಮ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯಲು ಒಪ್ಪಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮರಳಿದ್ದಾರೆ” ಎಂದಿದ್ದಾರೆ.


ಇದನ್ನೂ ಓದಿ: ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್, ಪ್ರಿಯಾಂಕ ಜೊತೆಗಿರುವೆ: ನವಜೋತ್ ಸಿಂಗ್ ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...