Homeಸಿನಿಮಾಕ್ರೀಡೆಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

- Advertisement -
- Advertisement -

ಹಲವು ವರ್ಷಗಳಿಂದ ಭಾರತ ಪುರುಷರ ಕ್ರಿಕೆಟ್ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಬೇಕೆಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್‌ರವರನ್ನು ಕೇಳಿಕೊಳ್ಳಲಾಗುತ್ತಿತ್ತು. ಪ್ರತಿ ಬಾರಿಯೂ ನಿರಾಕರಿಸುತ್ತಿದ್ದ ಅವರು ಈಗ ಅದಕ್ಕೆ ಒಪ್ಪಿದ್ದು, ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿದ್ದಾರೆ ಎನ್ನಲಾಗಿದೆ.

ಈ ವರ್ಷದ ಟಿ-20 ವಿಶ್ವಕಪ್​ನೊಂದಿಗೆ ಪ್ರಸ್ತುತ ಕೋಚ್​ ಆಗಿರುವ ರವಿಶಾಸ್ತ್ರಿ ಅವರ ಒಪ್ಪಂದ ಅಂತ್ಯವಾಗಲಿದೆ. ಹಾಗಾಗಿ ಹೊಸ ಕೋಚ್ ಹುಡುಕಾಟದಲ್ಲಿರುವ ಬಿಸಿಸಿಐ ಅಧಿಕಾರಿಗಳು ದುಬೈನಲ್ಲಿ ರಾಹುಲ್ ದ್ರಾವಿಡ್ ನಡುವೆ ಮಾತುಕತೆ ನಡೆಸಿದ್ದಾರೆ. ರಾಹುಲ್ ಕೋಚ್ ಪ್ರಸ್ತಾಪಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ನವೆಂಬರ್ 14ಕ್ಕೆ ಮುಕ್ತಾಯವಾಗಲಿರುವ ಟಿ-20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅದಕ್ಕಾಗಿ ಅರ್ಜಿ ಹಾಕುವುದು ಮತ್ತು ಸಂದರ್ಶನದ ಔಪಚಾರಿಕ ಪ್ರಕ್ರಿಯೆಗಳು ನಡೆಯಲಿವೆ.

2016 ರಲ್ಲಿ ಅನಿಲ್ ಕುಂಬ್ಳೆ ಕೋಚ್ ಆಗುವ ಮುನ್ನ ಮತ್ತು 2017ರಲ್ಲಿ ರವಿಶಾಸ್ತ್ರಿ ಕೋಚ್ ಆಗುವ ಮುನ್ನ ಬಿಸಿಸಿಐನ ಮೊದಲ ಆಯ್ಕೆ ರಾಹುಲ್ ದ್ರಾವಿಡ್ ಆಗಿತ್ತು. ಆದರೆ ಅದನ್ನು ರಾಹುಲ್ ದ್ರಾವಿಡ್ ನಯವಾಗಿಯೇ ತಿರಸ್ಕರಿದ್ದರು ಮತ್ತು ಅಂಡರ್​ 19 ರಾಷ್ಟ್ರೀಯ (Under-19 Team) ತಂಡದ ಕೋಚ್​ ಆಗಿ, NCA ಮುಖ್ಯಸ್ಥರಾಗಿ ಮುಂದುವರೆದಿದ್ದರು. ಈಗ ಅವರು ಒಪ್ಪಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ರಾಹುಲ್ ದ್ರಾವಿಡ್‌ ಒಪ್ಪದಿದ್ದ ಪಕ್ಷದಲ್ಲಿ ಕೋಚ್‌ಗಾಗಿ ಶ್ರೀಲಂಕಾದ ಮಹೇಲ ಜಯವರ್ಧನೆ ಮತ್ತು ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಕೂಡ ಬಿಸಿಸಿಐನ ಇತರ ಆಯ್ಕೆಗಳಾಗಿದ್ದವು ಎನ್ನಲಾಗಿದೆ. ಸದ್ಯಕ್ಕೆ ರಾಹುಲ್ ದ್ರಾವಿಡ್ ಒಪ್ಪಿರುವುದರಿಂದ ಈ ಸಮಸ್ಯೆ ಬಗೆಹರಿದಿದೆ ಎನ್ನಲಾಗಿದೆ.

ಮುಂದಿನ ಎರಡು ವರ್ಷಗಳು ಭಾರತ ಕ್ರಿಕೆಟ್ ತಂಡದ ಪಾಲಿಗೆ ಮಹತ್ವದ ದಿನಗಳಾಗಲಿವೆ. 2022 ರಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. 2023ರಲ್ಲಿ ಏಕದಿನ ವಿಶ್ವಕಪ್ ಮತ್ತು ವಿಶ್ಟ ಟೆಸ್ಟ್ ಚಾಂಪಿಯನ್‌ಶಿಫ್ ನಡೆಯಲಿದೆ.


ಇದನ್ನೂ ಓದಿ: ವಿಮೋಚನೆಯ ಆಟವಾಗಿದ್ದ ಕ್ರಿಕೆಟ್ ಕೇವಲ ಬ್ಯಾಟ್ಸ್‌ಮನ್‌ಗಳ ಆಟವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...