Homeಸಿನಿಮಾಕ್ರೀಡೆಕ್ರಿಕೆಟಿಗ ಚಾಹಲ್ ವಿರುದ್ಧ ಜಾತಿ ನಿಂದನೆ: ಯುವರಾಜ್ ಸಿಂಗ್‌ ಬಂಧನ, ಬಿಡುಗಡೆ

ಕ್ರಿಕೆಟಿಗ ಚಾಹಲ್ ವಿರುದ್ಧ ಜಾತಿ ನಿಂದನೆ: ಯುವರಾಜ್ ಸಿಂಗ್‌ ಬಂಧನ, ಬಿಡುಗಡೆ

- Advertisement -
- Advertisement -

ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಕ್ರಿಕೆಟಿಗ ಯಜುವೇಂದ್ರ ಚಾಹಲ್ ವಿರುದ್ಧ ಇನ್‌ಸ್ಟಾಗ್ರಾಮ್ ಲೈವ್ ವಿಡಿಯೋದಲ್ಲಿ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪವಿದೆ.

ಕಳೆದ ವರ್ಷ ಜೂನ್‌ನಲ್ಲಿ ಯುವರಾಜ್ ಸಿಂಗ್ ತಮ್ಮ ಸಹ ಆಟಗಾರ ರೋಹಿತ್ ಶರ್ಮಾ ಅವರ ಇನ್‌ಸ್ಟಾಗ್ರಾಮ್ ಲೈವ್ ವೀಡಿಯೊದಲ್ಲಿ ಈ ಹಿಂದೆ ತಮ್ಮೊಂದಿಗೆ ಆಡಿದ ಯಜುವೇಂದ್ರ ಚಾಹಲ್ ಎಂಬ ದಲಿತ ಕ್ರಿಕೆಟಿಗನನ್ನು ’ಭಂಗಿ’ (ಮಾನವ ಮಲ ಬಾಚಿ ಹೊತ್ತು ಸಾಗಿಸುವ ಕೆಲಸ ಮಾಡುವ ದಲಿತ ಜಾತಿ) ಎಂದು ಕರೆಯುತ್ತಾರೆ. ಟೀಕೆ ಎದುರಾದಾಗ ಈ ಜಾತಿಸೂಚಕದ ಸಾಧಕ ಬಾಧಕಗಳು ತನಗೆ ತಿಳಿದೇ ಇರಲಿಲ್ಲ ಎಂದು ವಾದಿಸುತ್ತಾರೆ.

ಟೀಕೆಗಳ ಬಳಿಕ “ಉದ್ದೇಶಪೂರ್ವಕವಲ್ಲದ ಪದ ಬಳಕೆಗೆ” ಈ ಮೊದಲು ಕ್ಷಮೆ ಕೇಳಿದ್ದರು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ ಎಂದಿದ್ದರು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕಾವದ ಆಕ್ರೋಶ ಹೊರಹೊಮ್ಮಿತ್ತು.

ಇದನ್ನೂ ಓದಿ: ವಂದನಾ ಜಾತಿ ನಿಂದನೆ ಪ್ರಕರಣ; ಘಟನೆ ನಾಚಿಕೆಗೇಡು ಎಂದ ಹಾಕಿ ತಂಡದ ನಾಯಕಿ

“ನ್ಯಾಯಾಲಯದ ಆದೇಶದಂತೆ, ಯುವರಾಜ್ ಸಿಂಗ್ ಅವರನ್ನು ಶನಿವಾರ ಬಂಧಿಸಲಾಯಿತು.ನಂತರ  ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ನಿತಿಕಾ ಗಹ್ಲೌತ್ ಹೇಳಿಕೆಯನ್ನು ಎನ್‌ಡಿಟಿವಿ ಉಲ್ಲೇಖಿಸಿದೆ.

ಫೆಬ್ರವರಿಯಲ್ಲಿ ಹರಿಯಾಣದ ದಲಿತ ಹೋರಾಟಗಾರ ರಜತ್ ಕಲ್ಸನ್ ನೀಡಿದ ದೂರಿನ ಮೇರೆಗೆ ಮಾಜಿ ಕ್ರಿಕೆಟಿಗನ ವಿರುದ್ಧ ದೂರು ದಾಖಲಾಗಿತ್ತು. ತಾರತಮ್ಯವನ್ನು ನಿಷೇಧಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಅವರನನ್ನು ಬಂಧಿಸಿ ಮತ್ತು ದೂರು ದಾಖಲಿಸಿಕೊಳ್ಳಲು ಒತ್ತಾಯಿಸಲಾಗಿತ್ತು.  ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ದಲಿತ ಹೋರಾಟಗಾರ ರಜತ್ ಕಲ್ಸನ್, “ಅಕ್ಟೋಬರ್ 6 ರಂದು, ಯುವರಾಜ್ ಸಿಂಗ್ ಅವರನ್ನು ತನಿಖೆಗೆ ಒಳಪಡಿಸಲು ಪೊಲೀಸರಿಗೆ ಹೇಳಲಾಗಿತ್ತು. ನಿನ್ನೆ, ಯುವರಾಜ್ ಸಿಂಗ್ ಹಿಸಾರ್‌ನಲ್ಲಿ ಪೊಲೀಸರ ಮುಂದೆ ಶರಣಾದರು ಎಂದು ನಮಗೆ ತಿಳಿದು ಬಂದಿದೆ. ಅವರನ್ನು ಎರಡು ಮೂರು ಗಂಟೆಗಳ ಕಾಲ ವಿಚಾರನೆ ನಡೆಸಿ ಬಂಧಿಸಲಾಗಿತ್ತು, ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದಿದ್ದಾರೆ.

“ಅಲ್ಲದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಅಡಿಯಲ್ಲಿ ಬಂಧಿಸಿ ಅವರಿಗೆ ಜಾಮೀನು ನೀಡಿದ್ದರಿಂದ, ನಾವು ಅದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ; ಈ ಜಾತಿ ದಾಂಧಲೆ ತೆಂಡೂಲ್ಕರ್ ಮನೆ ಮುಂದೆ ನಡೆದಿದ್ದರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...

ಇಂಡಿಯಾ ಬ್ಲಾಕ್‌ನ ‘ಚಲೋ ದಿಲ್ಲಿ’ಗೆ ವೇದಿಕೆ ಸಜ್ಜು; ದೆಹಲಿಯಾದ್ಯಂತ ರಾರಾಜಿಸುತ್ತಿರುವ ಪ್ರತಿಭಟನೆಯ ಪೋಸ್ಟರ್‌ಗಳು 

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಬ್ಲಾಕ್ ಆಯೋಜಿಸಿರುವ...

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...