Homeಚಳವಳಿರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್, ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಜುಲೈ ಅಂತ್ಯದಲ್ಲಿ ಸಭೆ ನಡೆಸಿದ್ದರು.

- Advertisement -
- Advertisement -

ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.

ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.

ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ  ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

 

ದಿ ಟ್ರಿಬ್ಯೂನ್ ಈ ಬಗ್ಗೆ ವರದಿ ಮಾಡಿದ್ದು, ವರದಿಯ ತುಣುಕುಗಳನ್ನು ಸಂಯುಕ್ತ ಕಿಸಾನ್ ಮೋರ್ಚಾದ ಅಧಿಕೃತ ಟ್ವಿಟರ್‌ ಖಾತೆ ಕಿಸಾನ್ ಏಕ್ತಾ ಮೋರ್ಚಾ ಹಂಚಿಕೊಂಡಿದೆ. ಜೊತೆಗೆ ಯಾವ ನಿಹಾಂಗ್ ಗುಂಪಿನ ಸದಸ್ಯರು,  ಸಿಂಘು ಗಡಿಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಕ್ಕಾಗಿ ಬಂಧಿಸಲ್ಪಟ್ಟಿದ್ದಾರೋ ಅವರ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದೆ.

“ಸಿಂಘು ಗಡಿ ಪ್ರಕರಣದಲ್ಲಿ ಹೊಸ ವಿಷಯಗಳು ಕಾಣಿಸಿಕೊಳ್ಳತೊಡಗಿದ್ದು, ಸರ್ಕಾರದಿಂದ ದೊಡ್ಡ ಪಿತೂರಿ ನಡೆದಿದೆ ಎಂದು ತೋರುತ್ತದೆ. ಇದು ಮೂರು ರೈತ ವಿರೋಧಿ ಕಾನೂನುಗಳು ಮತ್ತು ಎಂಎಸ್‌ಪಿ ಬೇಡಿಕೆಯಿಂದ ನಮ್ಮ ಗಮನವನ್ನು ಬೇರೆಡೆಗೆ ಸೆಳೆಯಲು ನಡೆಸುತ್ತಿರುವ ಪಿತೂರಿ. ಆದರೆ ನಾವು ನಮ್ಮ ಬೇಡಿಕೆಗಳಿಗೆ ಬದ್ಧರಾಗಿದ್ದೇವೆ. ಕೃಷಿ ಕಾನೂನನ್ನು ರದ್ದುಗೊಳಿಸಬೇಕು, ಎಂಎಸ್‌ಪಿ ಕಾನೂನನ್ನು ಜಾರಿ ಮಾಡಬೇಕು” ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಲಖ್ಬೀರ್‌‌ ಹತ್ಯೆ ಪ್ರಕರಣ: ಹರಿಂದರ್‌‌‌ ಸಿಂಗ್‌‌ ಬರಹ

ನಿಹಾಂಗ್ ಮುಖ್ಯಸ್ಥ ಬಾಬಾ ಅಮನ್ ಸಿಂಗ್‌ ಬಿಜೆಪಿ ಸಚಿವರ ಜೊತೆಗೆ ಸಭೆ ಮಾಡಿರುವ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್, “ಪಂಜಾಬ್‌ನಲ್ಲಿ  ಕೃಷಿ ಚಳವಳಿಗೆ ಕೋಮು ಸೌಹಾರ್ದತೆಯನ್ನು ಹಾಳುಗೆಡವದಂತಹ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಸಭೆಗಳನ್ನು ನಡೆಸಿದ್ದೇವೆ. ಬಾಬಾ ಅಮನ್ ಸಿಂಗ್ ಅಂತಹ ಒಂದು ಸಭೆಯಲ್ಲಿ ಭಾಗವಹಿಸಿದ್ದರು. ಅವರು ಕೂಡ ಸಮಸ್ಯೆಯನ್ನು ಪರಿಹರಿಸಬೇಕೆಂದು ಬಯಸಿದ್ದರು. ಕೆನಡಾದ ಒಂಟಾರಿಯೊ ಸಿಖ್ಖರು ಮತ್ತು ಗುರುದ್ವಾರ ಕೌನ್ಸಿಲ್ ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಇದೇ ಸಭೆಯಲ್ಲಿದ್ದ ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ’, ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಬಾಬಾ ಪಟಿಯಾಲಾದ ಸೆಂಟ್ರಲ್ ಜೈಲಿನಲ್ಲಿರುವ ದಿನಗಳಿಂದಲೂ ಪರಿಚರವಿದ್ದರು ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡ: ಅಜಯ್ ಮಿಶ್ರಾ ಬಂಧನ, ವಜಾಗೆ ಆಗ್ರಹಿಸಿ ರೈತರ ರೈಲ್ ರೋಕೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...