Homeಮುಖಪುಟಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

ಪ್ರವಾಹದಿಂದಾಗಿ ಉತ್ತರಖಾಂಡ್ ತತ್ತರ, 11 ಮಂದಿ ದುರ್ಮರಣ: ಫೋಟೋ, ವಿಡಿಯೊ ನೋಡಿ

- Advertisement -
- Advertisement -

ಭಾರೀ  ಪ್ರವಾಹದಿಂದಾಗಿ ಉತ್ತರಖಾಂಡ್ ರಾಜ್ಯ ಉತ್ತರಿಸಿದೆ.  ಗುಡ್ಡಗಾಡು ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ದಿ ಟ್ರಿಬ್ಯೂನ್‌‌ ವರದಿ ಮಾಡಿದೆ. 12 ಮಂದಿ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ರಸ್ತೆ ಮತ್ತು ಕಟ್ಟಡಗಳು ಹಾಳಾಗಿವೆ. ಸಂಪರ್ಕ ರಹಿತ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರು, ಸ್ಥಳೀಯರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ.

ನೇಪಾಳದಿಂದ ಬಂದಿದ್ದ ಮೂವರು ಕಾರ್ಮಿಕರು ಸೇರಿದಂತೆ ಐವರು ದುರ್ಮರಣ ಹೊಂದಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ. ಪೌರಿ ಜಿಲ್ಲೆಯ ಲ್ಯಾನ್ಸ್‌ಡೌನ್‌ ಬಳಿ ಕಾರ್ಮಿಕರು ಉಳಿದುಕೊಂಡಿದ್ದು, ಪ್ರವಾಹದಿಂದಾಗಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಜಯ್ ಕುಮಾರ್ ಜೋಗ್ದಾಂಡೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಛಂಪಾವತ್‌ ಜಿಲ್ಲೆಯಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ನೀರಿನ ಏರಿಕೆಯಿಂದಾಗಿ ಕುಸಿದುಬಿದ್ದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರೊಂದಿಗೆ ಪರಿಸ್ಥಿತಿಯ ಅವಲೋಕನಕ್ಕಾಗಿ ಇಂದು ಮಾತನಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರವಾಹದ ಭೀಕರತೆಯನ್ನು ತೋರುವ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ಉತ್ತರಖಾಂಡ್‌ನ ಐಕಾನಿಕ್‌ ನೈನಿತಾಲ್‌ ಸರೋವರ ತುಂಬಿ ಹರಿದಿದ್ದು, ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗಿರುವ ವಿಡಿಯೊವನ್ನು ಎಎನ್‌ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನೀರು ಮೊಣಕಾಲಿನಷ್ಟು ಆಳವಾಗಿದೆ ಮತ್ತು ಹೆಚ್ಚಿನ ವೇಗದಲ್ಲಿ ಹರಿಯುತ್ತದೆ; ಇಬ್ಬರು ಪುರುಷರು ರಸ್ತೆ ದಾಟಲು ಹೆಣಗಾಡುತ್ತಿರುವುದನ್ನು ಕಾಣಬಹುದು.

ಹಾಲ್ಡ್‌ವಾನಿ ಜಿಲ್ಲೆಯಲ್ಲಿ ಗೌಲ ನದಿ ತುಂಬಿ ಹರಿಯುತ್ತಿದ್ದು, ಸೇತುವೆ ಕುಸಿಯಲು ಆರಂಭಿಸಿತ್ತು. ಸೇತುವೆ ಮೇಲೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ಮತ್ತೊಂದು ತುದಿಯಲ್ಲಿ ನಿಂತ ಸ್ಥಳೀಯರು ಎಚ್ಚರಿಸುತ್ತಿರುವ ದೃಶ್ಯವನ್ನು ಎಎನ್‌ಐ ಸಂಸ್ಥೆ ಹಂಚಿಕೊಂಡಿದೆ. ಕೆಲವೇ ಸೆಕೆಂಡ್‌ಗಳಲ್ಲಿ ಸೇತುವೆಯ ಕುಸಿತ ಆರಂಭವಾಗುವುದನ್ನು ಇದೇ ವಿಡಿಯೋದಲ್ಲಿ ಕಾಣಬಹುದು.

ಜಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್ ಬಳಿಯ ಐಷಾರಾಮಿ ಲೆಮನ್ ಟ್ರೀ ಹೋಟೆಲ್‌ನ ಛಾವಣಿಯ ಮೇಲೆ ಅತಿಥಿಗಳು ಸಿಕ್ಕಿಬಿದ್ದಿರುವುದನ್ನು ಸ್ವತಂತ್ರ ಫೋಟೋಗ್ರಾಫರ್‌ ಮುಸ್ತಫಾ ಕುರೈಶಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನೀರಿನ ಮಟ್ಟ ಹೆಚ್ಚುತ್ತಿರುವುದನ್ನು ಅತಿಥಿಗಳು ನೋಡುತ್ತಿದ್ದಾರೆ.

 

View this post on Instagram

 

A post shared by Mustafa Quraishi (@mustafaquraishi)

 

 

View this post on Instagram

 

A post shared by Mustafa Quraishi (@mustafaquraishi)

ರಾಷ್ಟ್ರೀಯ ಉದ್ಯಾನದ ಬಳಿ ರಾಮಗಂಗಾ ನದಿ ತುಂಬಿ ಹರಿಯುತ್ತಿದ್ದು, ಕಾರುಗಳು ಮುಳುಗಡೆಯಾಗಿವೆ.

 

View this post on Instagram

 

A post shared by Mustafa Quraishi (@mustafaquraishi)

ಧುಮ್ಮಿಕ್ಕುತ್ತಿರುವ ನೀರಿನಲ್ಲಿ ಸಿಲುಕಿರುವ ಕಾರನ್ನು ಮೇಲೆತ್ತಲು ಯತ್ನಿಸುತ್ತಿರುವ ಸಂಬಂಧ ಎಎನ್‌ಐ ಸಂಸ್ಥೆ ವಿಡಿಯೋ ಹಂಚಿಕೊಂಡಿದೆ. ಬಾರ್ಡರ್‌ ರೋಡ್ ಸಂಘಟನೆಯಿಂದ ಕಾರನ್ನು ರಕ್ಷಿಸಲಾಯಿತು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಸತ್ಯ ಪ್ರಧಾನ್‌ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಜ್ಯದ ವಿಪತ್ತು ನಿರ್ವಹಣಾ ತಂಡಗಳು ಕೂಡ ಕಾರ್ಯಪ್ರವೃತ್ತವಾಗಿವೆ. ಮಂಗಳವಾರ ಬೆಳಿಗ್ಗೆ ಕೇದಾರನಾಥ ದೇವಸ್ಥಾನದಿಂದ ಹಿಂತಿರುಗುವಾಗ ಸಿಲುಕಿದ್ದ 22 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ.

“ಹಿಮಾಲಯನ್ ದೇವಸ್ಥಾನಗಳಿಗೆ ವಾಹನಗಳ ತೆರಳದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಂದ್ರಭಾಗ ನದಿಯ ಮೇಲಿನ ಸೇತುವೆಯನ್ನು ವಾಹನಗಳುದಾಟುವಂತಿಲ್ಲ ಎಂದು ಎಚ್ಚರಿಸಲಾಗಿದೆ. ತಪೋವನ್, ಲಕ್ಷ್ಮಣ ಜೂಲ ಮತ್ತು ಮುನಿ-ಕಿ-ರೆತಿ ಭದ್ರಕಾಳಿ ತಡೆಗೋಡೆಗಳನ್ನು ದಾಟುವಂತಿಲ್ಲ” ಎಂದು ಸರ್ಕಾರ ಸೂಚಿಸಿದೆ.

ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ಹವಾಮಾನ ಯಥಾಸ್ಥಿತಿಗೆ ಮರಳುವ ತನಕ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಮುಖ್ಯಮಂತ್ರಿಯವರು ಯಾತ್ರಾರ್ಥಿಗಳಿಗೆ ಮನವಿ ಮಾಡಿದ್ದಾರೆ.


ಇದನ್ನು ಓದಿರಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...