ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದರ ವರದಿ ಹಂಚಿಕೊಂಡಿರುವ ಅವರ ಸರಣಿ ಟ್ವೀಟ್‌ಗಳ ಮೂಲಕ ಒಕ್ಕೂಟ ಸರ್ಕಾರದ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
“ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ” ಎಂದಿದ್ದಾರೆ.
ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ
ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ.1/5 pic.twitter.com/Z1MFH6uFap
— H D Kumaraswamy (@hd_kumaraswamy) October 19, 2021
ದೇಶ ಭಾಷೆಗಳಲ್ಲಿ ಒಂದಾದ ಹಿಂದಿಯನ್ನೇ ಉಳಿಸಿ ಬೆಳೆಸುವ ಹಾಗೂ ಅದನ್ನೇ ಕನ್ನಡಿಗರ ಮೇಲೆ ಹೇರುವ ಏಕೈಕ ದುರಾಲೋಚನೆಯಿಂದ ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು ಕಡೆಗಣಿಸಿ, ಮೂಲೋತ್ಪಾಟನೆ ಮಾಡಲು ಕೇಂದ್ರ ಸರಕಾರ ಈ ಮೂಲಕ ಹೊಂಚು ಹಾಕಿರುವುದು ಗೊತ್ತಾಗುತ್ತದೆ. 4/5
— H D Kumaraswamy (@hd_kumaraswamy) October 19, 2021
ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ


