Homeರಾಜಕೀಯಕೊಂಚ ಕುಂಟಲಿದೆ ಕಾಂಗ್ರೆಸ್ ಪಾರಮ್ಯ

ಕೊಂಚ ಕುಂಟಲಿದೆ ಕಾಂಗ್ರೆಸ್ ಪಾರಮ್ಯ

- Advertisement -
- Advertisement -
  • ಟೀಮ್ ಗೌರಿ |

ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಅವರ ಆಡಳಿತದ ಪ್ರಭಾವ ಹೆಚ್ಚಾಗಿರುವುದು ನಿಚ್ಚಳವಾಗಿದೆ. ಸಿದ್ದು ಏಳ್ಗೆಯಿಂದ ಕಂಗೆಟ್ಟ ಎದುರಾಳಿ ಜೆಡಿಎಸ್ ಮತ್ತು ಬಿಜೆಪಿ ಜೊತೆಗೂಡಿ ಕಾಂಗ್ರೆಸ್ ಮಣಿಸಲು ಕಸರತ್ತು ನಡೆಸುತ್ತಿವೆ. ಹಾಟ್‍ಸ್ಪಾಟ್ ಅಖಾಡವಾದ ಚಾಮುಂಡೇಶ್ವರಿಯಲ್ಲಿ ಸಿದ್ದು ಸೋಲಿಸಲು ಜೆ.ಡಿ.ಎಸ್ ಭಾರೀ ರಣತಂತ್ರ ಹೆಣೆದಿದೆ.

ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಳೆದ ಬಾರಿ 8 ಕ್ಷೇತ್ರಗಳಲ್ಲಿ ಬಾವುಟ ಹಾರಿಸಿತ್ತು. ಈ ಬಾರಿ 5 ಸ್ಥಾನಗಳಲ್ಲಿ ಗೆಲುವಿನ ಹಾದಿ ಸ್ಪಷ್ಟವಾಗಿದ್ದರೂ ಇನ್ನುಳಿದ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಎದುರಿಸಬೇಕಾಗಿದೆ. ಸಂಸದನನ್ನು ಹೊಂದಿರುವ ಬಿಜೆಪಿಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ.

ಚಾಮರಾಜನಗರ ಜಿಲ್ಲೆಯ ನಾಲ್ಕೂ ಕ್ಷೇತ್ರಗಳು ಕಳೆದ ಬಾರಿ ಕಾಂಗ್ರೆಸ್ ಪಾಲಾಗಿದ್ದವು. ಈ ಬಾರಿ ಕಾಂಗ್ರೆಸ್ 4ರಲ್ಲಿ ಕನಿಷ್ಟ ಮೂರು ಸ್ಥಾನಗಳನ್ನು ಗೆದ್ದುಕೊಳ್ಳುವ ವಿಶ್ವಾಸದಲ್ಲಿದೆ. ಕೊಳ್ಳೇಗಾಲದಲ್ಲಿ ಬಿ.ಎಸ್.ಪಿ ಖಾತೆ ತೆರೆಯಲು ಕಠಿಣ ಪರಿಶ್ರಮ ಹಾಕಿದ್ದರೂ ಅದು ಸುಲಭದ ತುತ್ತಾಗಿಲ್ಲ.

ಇನ್ನು ಜೆ.ಡಿ.ಎಸ್.ನ ಭದ್ರಕೋಟೆ ಎನಿಸಿಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ಒಕ್ಕಲಿಗ ಜಾತಿಯ ಮತಗಳ ಧ್ರುವೀಕರಣ ಹಿಂದೆಂದಿಗಿಂತಲೂ ಈ ಬಾರಿ ಇನ್ನಷ್ಟು ಎದ್ದು ಕಾಣುತ್ತಿದೆ. ಇದು ಜೆ.ಡಿ.ಎಸ್‍ಗೆ ಅನುಕೂಲಕರ ಅಂಶ. ಕಳೆದ ಬಾರಿ 7 ಕ್ಷೇತ್ರಗಳ ಪೈಕಿ 4 ರಲ್ಲಿ ಜೆಡಿಎಸ್, 2 ರಲ್ಲಿ ಕಾಂಗ್ರೆಸ್ ಮತ್ತೊಂದು ಕ್ಷೇತ್ರದಲ್ಲಿ ರೈತನಾಯಕ ಪುಟ್ಟಣ್ಣಯ್ಯ ಆರಿಸಿ ಬಂದಿದ್ದರು.

ಮೈಸೂರು

ಜಿಲ್ಲೆಯ ವರುಣಾ, ಟಿ ನರಸೀಪುರ, ಎಚ್‍ಡಿ ಕೋಟೆ, ಚಾಮರಾಜ, ನಂಜನಗೂಡು ಈ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವಿನ ಹಾದಿ ಸುಗಮವಾಗಿದೆ. ಸಿದ್ದರಾಮಯ್ಯನವರ ವರ್ಚಸ್ಸು, ಆಡಳಿತ ವಿರೋಧಿ ಅಲೆ ಇಲ್ಲದಿರುವುದು ಈ ಗೆಲುವಿಗೆ ಕಾರಣ. ಈ ಬಾರಿ ಪಿರಿಯಾಪಟ್ಟಣ ಕ್ಷೇತ್ರ ಜೆ.ಡಿ.ಎಸ್ ಕಡೆಗೆ ವಾಲುವಂತೆ ಕಾಣುತ್ತಿದೆ. ಹಾಲಿ ಶಾಸಕರಾಗಿರುವ ಮುಖ್ಯಮಂತ್ರಿಯವರ ನಿಕಟವರ್ತಿ ವೆಂಕಟೇಶ್ ಅವರಿಗೆ ಇದು ಅಗ್ನಿಪರೀಕ್ಷೆಯ ಚುನಾವಣೆ. ಹಾಗೆಯೇ ಚಾಮುಂಡೇಶ್ವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾದಿ ಸುಲಭವಾಗಿಲ್ಲ. ಜೆ.ಡಿ.ಎಸ್ ಅಭ್ಯರ್ಥಿ ಹಾಲಿ ಶಾಸಕ ಜಿ.ಟಿ.ದೇವೇಗೌಡರಿಗೆ ಜಾತಿ ಧ್ರುವೀಕರಣದ ಅನುಕೂಲವಿದೆ, ಕ್ಷೇತ್ರದ ಮೇಲೆ ಹಿಡಿತವೂ ಇದೆ. ಸಿದ್ದರಾಮಯ್ಯನವರು ಸಿಎಂ ಆದ ಮೇಲೆ ಕ್ಷೇತ್ರವನ್ನು ಕಡೆಗಣಿಸಿದರು ಎಂಬ ಪ್ರಚಾರ ಇಲ್ಲಿ ಬಹಳ ಜೋರಾಗಿದೆ. ಹೀಗೆ ತೀವ್ರ ಕುತೂಹಲ ಕೆರಳಿಸಿರುವ ಈ ಕ್ಷೇತ್ರದಲ್ಲಿ ಇಂತವರೇ ಗೆಲ್ಲುತ್ತಾರೆಂದು ಹೇಳುವುದು ಕಷ್ಟ.

ಅದೇರೀತಿ, ನರಸಿಂಹರಾಜ ಕ್ಷೇತ್ರದ ಚಿತ್ರಣ ಕೂಡ ಸಂಕೀರ್ಣವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಎಸ್‍ಡಿಪಿಐ ನಡುವೆ ತ್ರಿಕೋನ ಹಣಾಹಣಿ ಏರ್ಪಟ್ಟಿದೆ. ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಚಿವ ತನ್ವೀರ್ ಸೇಠ್ ಬಗ್ಗೆ ತೀವ್ರ ಅಸಮಾಧಾನ ಇದೆ. ಇಲ್ಲಿ ಎಸ್‍ಡಿಪಿಐನಿಂದ ಅಬ್ದುಲ್ ಮಜೀದ್ ತೀವ್ರ ಪೈಪೋಟಿ ಒಡ್ಡುತ್ತಿದ್ದಾರೆ. ಬಿಜೆಪಿಯಿಂದ ಸಂದೇಶ್ ನಾಗರಾಜು ತಮ್ಮ ಸಂದೇಶ್‍ಸ್ವಾಮಿ ಕಣದಲ್ಲಿದ್ದು, ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತಾದರೂ ಆಶ್ಚರ್ಯವಿಲ್ಲ.

ರಾಮದಾಸ

ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು ಬಿಜೆಪಿಯ ಎ.ರಾಮದಾಸ್ ಗೆಲ್ಲುವ ಸಾಧ್ಯತೆಯಿದೆ. ಇಡೀ ಜಿಲ್ಲೆಯಾದ್ಯಂತ ಬಿಜೆಪಿ ಗೆಲ್ಲುವ ಸಾಧ್ಯತೆಯಿರುವುದು ಇದೊಂದೇ ಕ್ಷೇತ್ರದಲ್ಲಿ. ಉಳಿದ ಕಡೆ ಬಿಜೆಪಿ ಪ್ರಭಾವ ಗಣನೀಯವಾಗಿ ಕುಸಿದಿದೆ.

ಇನ್ನುಳಿದಂತೆ ಚಾಮರಾಜನಗರ, ಕೆ.ಆರ್.ನಗರ ಹಾಗೂ ಹುಣಸೂರುಗಳಲ್ಲಿ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ನಡುವೆಯೇ ನೇರ ಪೈಪೋಟಿ. ಹುಣಸೂರು ಮತ್ತು ಕೆ.ಆರ್.ನಗರಗಳಲ್ಲಿ ಜೆಡಿಎಸ್‍ಗೆ ಅನುಕೂಲಕರ ವಾತಾವರಣವಿದ್ದರೂ ವಲಸೆ ಹಕ್ಕಿ ಎಚ್.ವಿಶ್ವನಾಥ್ ಸೇರುಗಟ್ಟಲೆ ಬೆವರು ಸುರಿಸಬೇಕಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ದಲಿತ ಓಟುಗಳು ಅಂತಿಮ ನಿರ್ಣಾಯಕವಾಗಿರುತ್ತವೆ ಎನ್ನಲಾಗುತ್ತಿದೆ. ಇದನ್ನರಿತ ಜೆಡಿಎಸ್, ಕಾಂಗ್ರೆಸ್ ಪಕ್ಷ ದಲಿತ ಮುಖ್ಯಮಂತ್ರಿ ಮಾಡಲಿಲ್ಲ, ದಲಿತ ನಾಯಕ ಪರಮೇಶ್ವರ್‍ರನ್ನು ಸಿದ್ದರಾಮಯ್ಯ ಸೋಲಿಸಿದರು ಎಂಬ ಆರೋಪ ಮತ್ತು ಪ್ರಚಾರವನ್ನು ಜೋರಾಗಿ ಮಾಡುತ್ತಿದೆ. ಜೊತೆಗೆ ಸಿದ್ದರಾಮಯ್ಯ ಒಕ್ಕಲಿಗರ ವಿರೋಧಿ ಎಂಬ ಹೇಳಿಕೆಯನ್ನು ಪದೇಪದೇ ಹೇಳಿ, ಇಡೀ ಒಕ್ಕಲಿಗ ಓಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳಲು ಜೆ.ಡಿ.ಎಸ್ ಹವಣಿಸುತ್ತಿದೆ.

ಚಾಮರಾಜನಗರ

ಕೊಳ್ಳೇಗಾಲ ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಸ್ಪಷ್ಟವಾಗಿದೆ. ಹನೂರು ಕ್ಷೇತ್ರದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಗೆಲ್ಲುತ್ತಾ ಬಂದಿದ್ದು ಈ ಬಾರಿಯೂ ಅದೇ ಫಲಿತಾಂಶದ ನಿರೀಕ್ಷೆಯಿದೆ. ಹಾಗೆಯೇ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ಪತಾಕೆ ಹಾರಿಸಲು ರಂಗ ಸಜ್ಜಾಗಿದೆ.

ಎನ್. ಮಹೇಶ್

ಕಳೆದ ಬಾರಿ ಕೊಳ್ಳೇಗಾಲದಲ್ಲಿ ಗೆದ್ದಿದ್ದರೂ ಕಾಂಗ್ರೆಸ್‍ಗೆ ಈ ಸಲ ಬಿ.ಎಸ್.ಪಿ.ಯ ಎನ್.ಮಹೇಶ್ ಕಠಿಣ ಸ್ಪರ್ಧೆ ಒಡ್ಡುತ್ತಿದ್ದಾರೆ. ಸತತ ಮೂರು ಬಾರಿ ಇದೇ ಕ್ಷೇತ್ರದಲ್ಲಿ ಸೋತ ಅನುಕಂಪ ಮತ್ತು ರಾಜ್ಯಮಟ್ಟದಲ್ಲಿ ಜೆಡಿಎಸ್ ಜೊತೆ ಮಾಡಿಕೊಂಡಿರುವ ಮೈತ್ರಿ ಅವರಿಗೆ ಬಲ ತುಂಬಿವೆ. ಕಳೆದ ಬಾರಿಯೇ ಕಾಂಗ್ರೆಸ್‍ನ ಎಸ್.ಜಯಣ್ಣನ ಬೆವರಿಳಿಸಿ 37,209 ಮತ ಪಡೆದು ಎರಡನೇ ಸ್ಥಾನ ಪಡೆದಿದ್ದರು. ಈ ಬಾರಿ ಕಾಂಗ್ರೆಸ್ ಜಯಣ್ಣನವರಿಗೆ ಟಿಕೆಟ್ ನೀಡದೇ ಬಿಜೆಪಿಯಿಂದ ವಲಸೆ ಬಂದ ಎ.ಆರ್ ಕೃಷ್ಣಮೂರ್ತಿಯನ್ನು ಕಣಕ್ಕಿಳಿಸಿದೆ. ಇಡೀ ಐದು ವರ್ಷ ಕ್ಷೇತ್ರದಲ್ಲಿಯೇ ಉಳಿದು ಕೆಲಸ ಮಾಡಿರುವ ಎನ್ ಮಹೇಶ್‍ರವರು ಜೆಡಿಎಸ್‍ನ ಬೆಂಬಲದಿಂದ ಗೆದ್ದು ಬರಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ದಲಿತರಿಗೆ ಜೆಡಿಎಸ್ ಬಗ್ಗೆ ಅಷ್ಟಾಗಿ ಒಲವಿಲ್ಲದೇ ಇರುವುದು ಮಹೇಶ್ ಅವರಿಗೆ ನಕಾರಾತ್ಮಕವಾಗಿ ಪರಿಣಮಿಸಬಹುದು.

ಬಿಜೆಪಿಯಿಂದ ವಿ.ಸೋಮಣ್ಣ ಸ್ಪರ್ಧಿಸಲಿದ್ದಾರೆ ಎನ್ನÀಲಾಗುತ್ತಿದ್ದ ಹನೂರಿನಲ್ಲಿ ಬಿಜೆಪಿ ಪ್ರೀತಂ ನಾಗಪ್ಪನನ್ನು ಕಣಕ್ಕಳಿಸಿರೋದರಿಂದ ಹಾಲಿ ಕೈ ಶಾಸಕ ನರೇಂದ್ರಗೆ ದಾರಿ ಸುಗಮವಾಗಿದೆ. ಇನ್ನು ಗುಂಡ್ಲುಪೇಟೆ ಈ ಬಾರಿ ಕಾಂಗ್ರೆಸ್‍ಗೆ ಅಷ್ಟು ಸಲೀಸಲ್ಲ. ಹಾಲಿ ಶಾಸಕಿ ಕಂ ಸಚಿವೆ ಗೀತಾ ಮಹದೇವಪ್ರಸಾದ್ ಪಾಲಿಗೆ ಉಪಚುನಾವಣೆಯಲ್ಲಿದ್ದ ಇಡೀ ಸರ್ಕಾರದ ಬೆಂಬಲ ಮತ್ತು ಅನುಕಂಪ ಈಗಿಲ್ಲ. ಹಾಗಾಗಿ ಫೋಟೋ ಫಿನಿಷ್ ಸಾಧ್ಯತೆಯೇ ಹೆಚ್ಚು.

ಮಂಡ್ಯ

7 ವಿಧಾನಸಭಾ ಕ್ಷೇತ್ರಗಳ ಮಂಡ್ಯ ಜಿಲ್ಲೆ ಹಿಂದಿನಿಂದಲೂ ಜೆ.ಡಿ.ಎಸ್.ನ ಭದ್ರಕೋಟೆ. ಮಂಡ್ಯ ಮತ್ತು ಮದ್ದೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ಸಾಧ್ಯತೆಯಿದೆ. ಮಂಡ್ಯದಲ್ಲಿ ಕಾಂಗ್ರೆಸ್‍ನಿಂದ ಅಂತಿಮ ಕ್ಷಣದಲ್ಲಿ ಅಂಬರೀಶ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರಿಂದ ಗಣಿಗ ರವಿಕುಮಾರ್ ಅಭ್ಯರ್ಥಿ. ಇವರಿಗೆ ಕಾಂಗ್ರೆಸ್‍ನ ಹಿರಿಯರು ಬೆಂಬಲಿಸುತ್ತಿಲ್ಲ. ಜೆ.ಡಿ.ಎಸ್‍ನಲ್ಲಿದ್ದು ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಎದ್ದು ಬಿಜೆಪಿ ಸೇರಿರುವ ಚಂದಗಾಲು ಶಿವಣ್ಣ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ 5 ರುಪಾಯಿ ಡಾಕ್ಟರ್ ಡಾ.ಶಂಕರೇಗೌಡರು ಕಣದಲ್ಲಿದ್ದಾರೆ. ಶಿವಣ್ಣ ಒಂದಷ್ಟು ಜೆಡಿಎಸ್ ಮತಗಳನ್ನು ಕೀಳಬಹುದಾದರೂ, ಶಂಕರೇಗೌಡರು ಕೀಳುವ ಮತ ಯಾರದ್ದೆಂದು ಹೇಳಲಾಗದು. ಜೆಡಿಎಸ್‍ನ ಅಭ್ಯರ್ಥಿ ಎಂ.ಶ್ರೀನಿವಾಸ್ ಸರಳ ವ್ಯಕ್ತಿ ಎಂಬ ಕಾರಣಕ್ಕೂ ಗೆದ್ದು ಬರುವ ಸಾಧ್ಯತೆಯಿದೆ.

ಮದ್ದೂರಿನಲ್ಲಿ ಜೆಡಿಎಸ್‍ನ ಡಿ.ಸಿ.ತಮ್ಮಣ್ಣ ವಿರುದ್ಧ ಕಾಂಗ್ರೆಸ್‍ನ ಮಧು.ಜಿ ಮಾದೇಗೌಡ ಅಭ್ಯರ್ಥಿ. ಕಾಂಗ್ರೆಸ್‍ನಿಂದ ಟಿಕೆಟ್ ಸಿಗದಿದ್ದರಿಂದ ಬೇಸತ್ತ ಕಲ್ಪನಾ ಸಿದ್ದರಾಜು ಜೆಡಿಎಸ್ ಸೇರಿರುವುದರಿಂದ ತಮ್ಮಣ್ಣ ಗೆಲುವು ಖಚಿತ ಎನ್ನಲಾಗುತ್ತಿತ್ತು. ಆದರೆ ಬಿಜೆಪಿಯ ಟಿಕೆಟ್ ವಂಚಿತ ಅಭ್ಯರ್ಥಿ ಮಧು ಜೊತೆ ಸೇರಿರುವುದು ಮತ್ತು ಹೊನ್ನಲಗೆರೆ ರಾಮಕೃಷ್ಣ, ಚೆಲುವರಾಯಸ್ವಾಮಿಯವರ ನೇರ ಬೆಂಬಲ ಕಾಂಗ್ರೆಸ್‍ಗೆ ಸಿಕ್ಕಿರೋದು ಕಣಕ್ಕೆ ಒಂದಷ್ಟು ರಂಗನ್ನು ತಂದಿದೆ.

ದರ್ಶನ್ ಪುಟ್ಟಣ್ಣಯ್ಯ

ರೈತ ನಾಯಕ ಕೆ.ಎಸ್ ಪುಟ್ಟಣ್ಣಯ್ಯ ಪ್ರತಿನಿಧಿಸುತ್ತಿದ್ದ ಮೇಲುಕೋಟೆಯಲ್ಲಿ ಅವರ ಮಗ ದರ್ಶನ್ ಪುಟ್ಟಣ್ಣಯ್ಯ ಸ್ವರಾಜ್ ಇಂಡಿಯಾ ಅಭ್ಯರ್ಥಿ. ಅವರಿಗೆ ಕ್ಷೇತ್ರದಾದ್ಯಂತ ಅಪಾರ ಬೆಂಬಲವಿದ್ದು, ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಾಕದೇ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡಿದೆ. ಹಾಲಿ ಲೋಕಸಭಾ ಸದಸ್ಯ ಸಿ.ಎಸ್.ಪುಟ್ಟರಾಜು ಜೆಡಿಎಸ್‍ನಿಂಧ ಸ್ಪರ್ಧಿಸುತ್ತಿದ್ದು ಹೇಗಾದರೂ ಗೆಲ್ಲಬೇಕೆಂದು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ. ಆದರೂ ಗೆಲುವು ಅವರ ಕೈಗೆಟುಕುವ ಸಾಧ್ಯತೆ ತುಂಬಾ ಕ್ಷೀಣ.

ಇನ್ನುಳಿದ ನಾಲ್ಕು ಕ್ಷೇತ್ರಗಳಾದ ಮಳವಳ್ಳಿ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ ಮತ್ತು ನಾಗಮಂಗಲದಲ್ಲಿ ಕಾಂಗ್ರೆಸ್ ಮತ್ತು ಜೆ.ಡಿ.ಎಸ್ ನಡುವೆ ನೇರ ಹಣಾಹಣಿ ಇದೆ. ವಿಶೇಷವೆಂದರೆ ಶ್ರೀರಂಗಪಟ್ಟಣ ಮತ್ತು ನಾಗಮಂಗಲ ಕ್ಷೇತ್ರದಲ್ಲಿ ಜೆ.ಡಿ.ಎಸ್‍ನಿಂದ ಕಳೆದ ಬಾರಿ ಶಾಸಕರಾಗಿದ್ದ ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತು ಚೆಲುವರಾಯಸ್ವಾಮಿ ಜೆ.ಡಿ.ಎಸ್ ತೊರೆದು ಕಾಂಗ್ರೆಸ್‍ನಿಂದ ಕಣಕ್ಕಿಳಿದಿದ್ದಾರೆ. ಇವರನ್ನು ಹೇಗಾದರೂ ಮಾಡಿ ಸೋಲಿಸಬೇಕೆಂದು ದೇವೇಗೌಡರು ಹಠತೊಟ್ಟು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ನಲ್ಲಿದ್ದ ರವೀಂದ್ರ ಶ್ರೀಕಂಠಯ್ಯ ಮತ್ತು ಸುರೇಶ್ ಗೌಡರನ್ನು ಜೆ.ಡಿ.ಎಸ್‍ಗೆ ಕರೆತಂದು ಟಿಕೆಟ್ ನೀಡಿ ಕಣಕ್ಕಿಳಿಸಿದ್ದಾರೆ. ಇಲ್ಲಿ ತೀವ್ರ ಹಣಾಹಣಿಯಂತೂ ನಡೆಯಲಿದೆ. ಮಳವಳ್ಳಿಯಲ್ಲಿ ನರೇಂದ್ರ ಸ್ವಾಮಿ ಮತ್ತು ಅನ್ನದಾನಿಯವರ ನಡುವಿನ ಫೈಟ್ ಹೋದ ಸಾರಿಯಷ್ಟೇ ಫೋಟೋ ಫಿನಿಷ್ ಆಗುವುದಕ್ಕಿಂತ ಅನ್ನದಾನಿಯವರ ಕೈ ಮೇಲಾಗುವ ಸಾಧ್ಯತೆಯೇ ಹೆಚ್ಚು.

ಈ ಮೂರು ಜಿಲ್ಲೆಗಳ ಒಟ್ಟು 22 ಕ್ಷೇತ್ರಗಳಲ್ಲಿ ಬೆನೆಫಿಟ್ ಆಫ್ ಡೌಟ್‍ಅನ್ನು ಸಮಾನವಾಗಿ ಪರಿಗಣಿಸಿದರೆ ಕಾಂಗ್ರೆಸ್ 10, ಜೆಡಿಎಸ್ 9, ಬಿಜೆಪಿ 1ರಿಂದ 2, ಇತರರು 1ರಿಂದ 2 ಸ್ಥಾನಗಳಲ್ಲಿ ಆರಿಸಿ ಬರುವ ಲಕ್ಷಣಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...