Homeಮುಖಪುಟಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಲೈಂಗಿಕ ವೃತ್ತಿಯಿಂದ ಲೇಖಕಿಯಾಗಿ ಬದಲಾದ ನಳಿನಿ ಜಮೀಲಾಗೆ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ

ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

- Advertisement -
- Advertisement -

‘ಸೆಕ್ಸ್ ವರ್ಕರ್‌ ಒಬ್ಬಳ ಆತ್ಮಕಥನ’ದ ಮೂಲಕ ಪರಿಚಿತರಾಗಿರುವ ಕೇರಳಾದ ಲೇಖಕಿ ನಳಿನಿ ಜಮೀಲಾ ಅವರು ಪ್ರತಿಷ್ಠಿತ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶನಿವಾರ ಕೇರಳ ಸರ್ಕಾರವು ಪ್ರಶಸ್ತಿಗಳನ್ನು ಘೋಷಿಸಿದ್ದು, ವಿಶೇಷ ತೀರ್ಪುಗಾರರ ಪ್ರಶಸ್ತಿಯಡಿಯಲ್ಲಿ ಮಣಿಪಾಲ್‌ ನಿರ್ದೇಶನದ ‘ಭಾರತಪುಳ’ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಜಮೀಲಾ ಅವರಿಗೆ ಪ್ರಶಸ್ತಿ ಸಂದಿದೆ.

‘ರಾಜ್ಯ ಪ್ರಶಸ್ತಿ ನಿಜವಾಗಿಯೂ ಅನಿರೀಕ್ಷಿತವಾದುದ್ದು. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಸಿನಿಮಾಕ್ಕಾಗಿ ವಸ್ತ್ರವಿನ್ಯಾಸವನ್ನು ಮಾಡಿದ್ದೇನೆ. ಈ ಗೌರವವನ್ನು ನನ್ನ ಜೀವನದ ಒಂದು ದೊಡ್ಡ ಸಾಧನೆಯೆಂದು ಗೌರವಿಸುತ್ತೇನೆ” ಎಂದು ಜಮೀಲಾ ಪ್ರಶಸ್ತಿ ಪಡೆದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಅನುಭವಗಳು ವ್ಯಕ್ತಿಯನ್ನು ಧೈರ್ಯಶಾಲಿಯನ್ನಾಗಿ ಮಾಡುತ್ತವೆ. ಜೀವನದಲ್ಲಾದ ಅನಿರೀಕ್ಷಿತ ತಿರುವು, ಲೈಂಗಿಕ ಕಾರ್ಯಕರ್ತೆಯಾಗಿ ಆರಂಭಿಕ ಜೀವನದಿಂದ ಕಲಿತ ಪಾಠಗಳು ಎಲ್ಲಾ ಸಮಸ್ಯೆಗಳ ವಿರುದ್ಧ ಹೋರಾಡಲು ಮತ್ತು ಜೀವನದ ಈ ಹಂತವನ್ನು ತಲುಪಲು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

’ಭಾರತಪುಳ’ವು ಮಹಿಳಾ ಕೇಂದ್ರಿತ ಸಿನಿಮಾವಾಗಿದ್ದು, ಮಧ್ಯ ಕೇರಳದ ತ್ರಿಶೂರ್‌ ಜಿಲ್ಲೆಯಿಂದ ಬಂದಿರುವ 33 ವರ್ಷದ ಲೈಂಗಿಕ ಕಾರ್ಯಕರ್ತೆ ಸುಗಂಧಿಯ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಜೆಂಡರ್‌ ಇಷ್ಯೂಗಳನ್ನು ಮುನ್ನೆಲೆಗೆ ತಂದಿದ್ದು, ನಟಿ ಸಿಜಿ ಪ್ರದೀಪ್‌ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

“ಸಿನಿಮಾದ ನಾಯಕಿ ಪಾತ್ರಕ್ಕಾಗಿ ವೇಷಭೂಷಣಗಳನ್ನು ಆರಿಸುವಾಗ, ಅವಳಲ್ಲಿ ನನ್ನನ್ನು ನೋಡಿದ್ದೆ. ಲೈಂಗಿಕ ಕಾರ್ಯಕರ್ತೆಯಾಗಿದ್ದಾಗಿನ ದಿನಗಳವು. ನಾನು ಎಂದಿಗೂ ದುಬಾರಿ ಸೀರೆ ಅಥವಾ ಆಭರಣಗಳನ್ನು ಬಳಸಿಲ್ಲ. ಹಣೆಬೊಟ್ಟು ಇಡುವುದನ್ನು ನಾನು ಇಷ್ಟ ಪಡುವುದಿಲ್ಲ. ನಾನು ಆ ಎಲ್ಲಾ ಗುಣಲಕ್ಷಣಗಳನ್ನು ನಾಯಕಿಯ ದೈಹಿಕ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿಸಲು ಪ್ರಯತ್ನಿಸಿದ್ದೆ” ಎಂದು ಜಮೀಲಾ ತಿಳಿಸಿದ್ದಾರೆ.

ಉಡುಪುಗಳನ್ನು ವಿನ್ಯಾಸಗೊಳಿಸುವಾಗ ಲೈಂಗಿಕ ಕಾರ್ಯಕರ್ತರ ನಡವಳಿಕೆ ದೇಹಭಾಷೆ ಹೇಗಿರಬೇಕು ಎಂಬುದನ್ನು ನಾಯಕಿಗೆ ಹೇಳುತ್ತಿದ್ದಾಗ, ಗತದ ಭಯಾನಕ ನೆನಪುಗಳು ಮರುಕಳಿಸುತ್ತಿದ್ದವು ಎಂದು ನೆನಪಿಸಿಕೊಂಡಿದ್ದಾರೆ.

3ನೇ ತರಗತಿಗೆ ಶಾಲೆ ಬಿಟ್ಟಿದ್ದ ಜಮೀಲಾ ಅವರ ಗಂಡ ಕ್ಯಾನ್ಸರ್‌ನಿಂದ ಸಾವಿಗೀಡಾದರು. ಗಂಡನ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬದ ನಿರ್ವಹಣೆ ಮಾಡಲು ಬೇರೆ ದಾರಿಯಿಲ್ಲದೇ ಅವರು ಲೈಂಗಿಕ ಕಾರ್ಯಕರ್ತೆಯಾಗಿ ವೃತ್ತಿ ಆರಂಭಿಸಿದರು. ಲೈಂಗಿಕ ಕಾರ್ಯಕರ್ತೆಯಾಗಿ ಇವರು ಅನುಭವಿಸಿದ ಪೊಲೀಸರ ದೌರ್ಜನ್ಯ, ಗೂಂಡಾಗಳ ದಾಳಿ, ದೈಹಿಕ ಹಿಂಸೆ ಇವೆಲ್ಲವೂ ಲೈಂಗಿಕ ಕಾರ್ಯಕರ್ತರ ಪರವಾಗಿ ಹೋರಾಡುವಂತೆ ಶಕ್ತಿ ನೀಡಿತು.

2005ರಲ್ಲಿ ವೇಶ್ಯಾವಾಟಿಕೆಯಿಂದ ನಿವೃತ್ತರಾದ ನಳಿನಿ ಅವರು ಅದೇ ವರ್ಷ ‘ಸೆಕ್ಸ್‌ ವರ್ಕರ್‌ ಒಬ್ಬಳ ಆತ್ಮಕಥನ’ವನ್ನು ಪ್ರಕಟಿಸಿದರು. ಈ ಕೃತಿಯು ಇಡೀ ರಾಜ್ಯದಾದ್ಯಂತ ಸಂಚಲನವನ್ನೇ ಸೃಷ್ಟಿಸಿತು. ವೇಶ್ಯಾವಾಟಿಕೆಯಲ್ಲಿರುವ ಅಸಹಾಯಕ ಸಮುದಾಯಗಳ ಬಗ್ಗೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತು. ಇಂಗ್ಲಿಷ್‌, ಕನ್ನಡ ಸೇರಿದಂತೆ ಹಲವಾರು ಭಾಷೆಗಳಿಗೆ ಈ ಕೃತಿಯು ಅನುವಾದಗೊಂಡಿದೆ.


ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...