Homeಮುಖಪುಟಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

- Advertisement -
- Advertisement -

ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರು, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್ ನೀಡುವುದಾಗಿ ದಿನಗಳ ಹಿಂದೆ ಭರವಸೆ ನೀಡಿದ್ದರು. ಇದೀಗ ಅವರು ಮತ್ತೊಂದು ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ 12 ನೇ ತರಗತಿ ಉತ್ತೀರ್ಣರಾದ ಹುಡುಗಿಯರಿಗೆ ಸ್ಮಾರ್ಟ್‌ಫೋನ್ ಮತ್ತು ಎಲ್ಲಾ ಪದವೀಧರ ಯುವತಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡುತ್ತೇವೆ ಎಂದು ಹೇಳಿದ್ದಾರೆ.

“ನಿನ್ನೆ ನಾನು ಕೆಲವು ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅವರು ತಮ್ಮ ಅಧ್ಯಯನಕ್ಕೆ ಮತ್ತು ಅವರ ಭದ್ರತೆಗೆ ಸ್ಮಾರ್ಟ್ ಫೋನ್ ಬೇಕು ಎಂದು ಹೇಳಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಂಟರ್ ಪಾಸ್ ಆದ ಹುಡುಗಿಯರಿಗೆ ಸ್ಮಾರ್ಟ್ ಫೋನ್‌ಗಳು ಮತ್ತು ಪದವೀಧರ ಹುಡುಗಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿಗಳು ನೀಡುತ್ತೇವೆ. ಇದಕ್ಕೆ ಯುಪಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಒಪ್ಪಿಗೆ ನೀಡಿದೆ” ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

 

 

ಮಂಗಳವಾರದಂದು ಪ್ರಿಯಾಂಕ ಗಾಂಧಿ ಮುಂಬರುವ ಯುಪಿ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪಕ್ಷವು 40% ದಷ್ಟು ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಮಹಿಳಾ ಪೊಲೀಸರ ವಿರುದ್ದ ತನಿಖೆಗೆ ಆದೇಶ

ಈ ನಡುವೆ, ಬುಧವಾರ ಆಗ್ರಾಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಅವರೊಂದಿಗೆ ಕೆಲವು ಮಹಿಳಾ ಪೊಲೀಸರು ಖುಷಿಯಿಂದ ಸೆಲ್ಫಿ ತೆಗೆದುಕೊಂಡಿದ್ದರು. ಇದೀಗ ಅವರ ವಿರುದ್ದ ಪ್ರಾಥಮಿಕ ತನಿಖೆಗೆ ಲಕ್ನೋ ಪೊಲೀಸ್ ಆಯುಕ್ತ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಮಹಿಳಾ ಪೊಲೀಸರು ಪ್ರಿಯಾಂಕ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತಿರುವ ಚಿತ್ರ ವೈರಲ್ ಆಗುತ್ತಿದ್ದಂತೆ, ಮಹಿಳಾ ಪೊಲೀಸರ ವರ್ತನೆಯೂ ಪೊಲೀಸ್ ನಿಯಮಾವಳ ಉಲ್ಲಂಘನೆಯಾಗಿದೆಯೆ ಎಂದು ವಿಚಾರಿಸಲು ಕೇಂದ್ರೀಯ ವಿಭಾಗದ ಉಪ ಪೊಲೀಸ್‌ ಆಯುಕ್ತರಿಗೆ ಕೇಳಲಾಗಿದ್ದು, ಈ ವರದಿಯ ಆಧಾರಲ್ಲಿ ಮಹಿಳಾ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವುದೋ ಬೇಡವೇ ಎಂದು ಆಯುಕ್ತರು ನಿರ್ಧರಿಸಲಿದ್ದಾರೆ.

ಈ ಫೋಟೊ ವೈರಲ್ ಆಗುತ್ತಿದ್ದಂತೆ ಯುಪಿ ಸರ್ಕಾರ ಅವರ ವಿರುದ್ದ ಕ್ರಮ ಕೈಗೊಳ್ಳುತ್ತದೆ ಎಂದು ಹಲವರು ಅಂದಾಜಿಸಿದ್ದರು. ಇದೇ ಆತಂಕವನ್ನು ಪ್ರಿಯಾಂಕ ಗಾಂಧಿ ಕೂಡಾ ವ್ಯಕ್ತಪಡಿಸಿದ್ದಾರೆ. “ಈ ಚಿತ್ರದಿಂದ ಆದಿತ್ಯಾನಾಥ್‌ ಅವರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದು ಸುದ್ದಿ ಬರುತ್ತಿದೆ. ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಅವರು ಬಯಸುತ್ತಿದ್ದಾರೆ” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದು, ನನ್ನೊಂದಿಗೆ ಚಿತ್ರ ತೆಗೆಯುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೂ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಪ್ರಿಯಾಂಕ ಸ್ಕೂಟಿನೂ ಕೊಡ್ತಾಳೆ ಬೇಕಾದರೆ ಕಾರುಗಳು ಸಹ ಕೊಡ್ತಾಳೆ ಅಧಿಕಾರದ ಆಸೆಗೆ ಸಾರ್ವಜನಿಕರ ಹಣದಲ್ಲಿ ,ಅದೇ ಅವರ ಗಂಡ ವಾದ್ರಾನಾ ಆಸ್ತಿಯ ಲ್ಲಿ ಅದನ್ನೇ ಕೊಡಲಿಕ್ಕೆ ಹೇಳಬೇಕು ……..

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...