Homeಮುಖಪುಟ‘ಆಗ್ರಹ’ದ ಬದಲಿಗೆ ‘ಬೇಡಿಕೆ'ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

‘ಆಗ್ರಹ’ದ ಬದಲಿಗೆ ‘ಬೇಡಿಕೆ’ಯಾದ ಆಂಧ್ರಕ್ಕೆ ವಿಶೇಷ ಸ್ಥಾನಮಾನ

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2014ರಲ್ಲಿ ಅಂತೂ ಇಂತೂ ಆಂಧ್ರ ಪ್ರದೇಶದಿಂದ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾಯಿತು. ಅತಿ ಹೆಚ್ಚು ಆದಾಯ ತರುವ ಹೈದರಾಬಾದ್ ನಗರವೂ ಕೂಡ ತೆಲಂಗಾಣ ಪಾಲಾಯ್ತು. ಆಗ ತಕ್ಷಣ ಕೇಳಿಬಂದ ಹಕ್ಕೊತ್ತಾಯವೇ ಆಂಧ್ರಕ್ಕೆ ವಿಶೇಷ ಸ್ಥಾನಮಾನ. ಅದಕ್ಕಾಗಿ ಟಿಡಿಪಿಯ ಚಂದ್ರಬಾಬು ನಾಯ್ಡು ದೊಡ್ಡ ಮಟ್ಟದಲ್ಲಿ ಒತ್ತಡ ತಂದಿದ್ದರು. ಅದಕ್ಕೆ ಪೂರಕವಾಗಿ, ಈ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಗೆದ್ದು ಅಧಿಕಾರ ಹಿಡಿದರೆ ಖಂಡಿತ ಆಂಧ್ರಕ್ಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು. ಆ ವಿಡಿಯೋ ನೋಡಿ

 

ಆದರೆ ಆಗಿದ್ದೆ ಬೇರೆ. ಕೇಂದ್ರದಲ್ಲಿ ಮೋದಿ ಭರ್ಜರಿ ಜಯ ಸಾಧಿಸಿದರೆ, ಆಂಧ್ರದಲ್ಲಿ ಜಗನ್ ಕೂಡ ಭಾರೀ ಜಯಗಳಿಸಿದರು. ಆದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ ಆಗ್ರಹ ಮಾತ್ರ ಮೂಲೆಗೆ ಸರಿಯಿತು.

ಆಂಧ್ರ ಪ್ರದೇಶ ಮತ್ತು ಹೀಗಿನ ತೆಲಂಗಾಣ ಸೇರಿ ದೊಡ್ಡ ರಾಜ್ಯವಾಗಿತ್ತು. ಆದರೆ ತೆಲಂಗಾಣ ಪ್ರಾಂತ್ಯಕ್ಕೆ ಸತತವಾಗಿ ಅನ್ಯಾಯವಾಗಿದೆ ಎಂದು ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ನಂತರದಿಂದಲೂ ತೀವ್ರ ಹೋರಾಟ ನಡೆದಿತ್ತು. ಹಲವು ಸಾವು ನೋವುಗಳ ನಂತರ 2014ರಲ್ಲಿ ಅದರ ಪ್ರತ್ಯೇಕ ರಾಜ್ಯದ ಕನಸು ನನಸಾಯಿತು. ಆಗ ಆಂಧ್ರ ಪ್ರದೇಶವು ತೀರಾ ಹಿಂದುಳಿದಿದ್ದು ಕೇಂದ್ರ ಸರ್ಕಾರವು ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಲಾಯಿತು.

ಇದಕ್ಕಾಗಿ ಚಂದ್ರಬಾಬು ನಾಯ್ಡು ಮತ್ತು ಜಗನ್ ಮೋಹನ್ ರೆಡ್ಡಿ ಇಬ್ಬರೂ ಪ್ರತ್ಯೇಕವಾಗಿ ದನಿಯೆತ್ತಿದರು. ಚಂದ್ರಬಾಬು ನಾಯ್ಡು ಅಂತೂ, ಇದಕ್ಕಾಗಿ ಮೋದಿಯೊಡನೆ ಜಗಳ ಮಾಡಿ ಎನ್‍ಡಿಎ ಮೈತ್ರಿಕೂಟ ಬಿಟ್ಟು ಹೊರಬಂದರು ಮತ್ತು ಯುಪಿಎಗೆ ಹತ್ತಿರವಾದರು. ಜಗನ್ ಮೋಹನ್ ದೆಹಲಿಯಲ್ಲಿ ದೊಡ್ಡ ಹೋರಾಟವನ್ನು ನಡೆಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಸಿಗುವುದರಲ್ಲಿ ಈ ಚುನಾವಣೆ ಬಹಳ ಮುಖ್ಯವಾಗಿತ್ತು. ಈಗ ಆಂಧ್ರದ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟು 175 ಸ್ಥಾನಗಳಲ್ಲಿ ಜಗನ್ ನೇತೃತ್ವದ ವೈಎಸ್‍ಆರ್ ಕಾಂಗ್ರೆಸ್ 151ನ್ನು ಗೆದ್ದುಕೊಂಡರೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಕೇವಲ 23 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಪವನ್ ಕಲ್ಯಾಣ್‍ರ ಜನಸೇನ 1 ಸ್ಥಾನದಲ್ಲಿ ಜಯಿಸಿದೆ. ಇನ್ನು ಲೋಕಸಭಾ ಕ್ಷೇತ್ರಗಳಿಗೆ ಬಂದರೆ ಒಟ್ಟು 25 ಕ್ಷೇತ್ರಗಳಲ್ಲಿ 22ನ್ನು ಜಗನ್ ಮತ್ತು 3ನ್ನು ಚಂದ್ರಬಾಬು ನಾಯ್ಡು ಗೆದ್ದಿದ್ದಾರೆ.

ಈಗ ಆಂಧ್ರಕ್ಕೆ ವಿಶೇಷ ಸ್ಥಾನಮಾನವನ್ನು ಅಧಿಕಾರಯುತವಾಗಿ ಕೇಳಲು ಬರುವುದಿಲ್ಲ, ಬೇಡಿಕೊಳ್ಳಬಹುದಷ್ಟೇ ಎಂದು ಜಗನ್ ಹೇಳಿದ್ದಾರೆ. “ಎನ್‍ಡಿಎ ಗೆ 350 ಸ್ಥಾನಗಳು ಸಿಕ್ಕಿಬಿಟ್ಟಿವೆ, 250 ಸಿಕ್ಕರೆ ಸಾಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಈಗ ನಾವು ಅಧಿಕಾರಯುತವಾಗಿ ಏನನ್ನು ಕೇಳಲು ಬರುವುದಿಲ್ಲ, ಹಾಗಾಗಿ ಮನವಿ ಮಾಡಬಹದಷ್ಟೇ, ಈ ವಿಚಾರ ಪ್ರಸ್ತಾಪಿಸಿದ್ದೇನೆ. ಮೋದಿ ನಂತರ ಅಮಿತ್ ಷಾ ರವರೆ ಪ್ರಭಾವಿ ವ್ಯಕ್ತಿ ಹಾಗಾಗಿ ಅವರ ಮುಂದೆ ನಮ್ಮ ಸಮಸ್ಯೆ ಇಡಲು ಹೋಗಿದ್ದೆ” ಎಂದು ಜಗನ್ ನಿನ್ನೆ ಅವಲತ್ತುಕೊಂಡಿದ್ದಾರೆ.

ಅಂದರೆ ಒಂದು ರಾಜ್ಯ ನಿರ್ದಿಷ್ಟ ಕಾರಣಕ್ಕಾಗಿ ಹಿಂದುಳಿದಿರುವುದರಿಂದ ನೈಸರ್ಗಿಕವಾಗಿ/ಸಹಜವಾಗಿ ಸಿಗಬೇಕಿದ್ದ ವಿಶೇಷ ಸ್ಥಾನಮಾನವನ್ನು ಪ್ರತಿಭಟಿಸಿ ಕೇಳುವಂತಿಲ್ಲ ಕೇವಲ ಮನವಿ ಮಾಡಬೇಕೆಂಬ ಅಭಿಪ್ರಾಯಕ್ಕೆ ಜಗನ್ ಬಂದಿದ್ದಾರೆ ಅಂದರೆ ನಮ್ಮ ಪ್ರಜಾಪ್ರಭುತ್ವ ಯಾವ ಮಟ್ಟದಲ್ಲಿದೆ ಊಹಿಸಿ. ತನ್ನ ಮೇಲೆ ವಿಶ್ವಾಸವಿಟ್ಟು ಮತಹಾಕಿದ ಮತದಾರರಿಗೆ ಜಗನ್ ಕೊಡುವುದಾದರೂ ಏನನ್ನು? ಸಹಜವಾಗಿಯೇ ನೀಡಬೇಕಿದ್ದ ಸ್ಥಾನಮಾನವನ್ನು ಮೋದಿ ಸರ್ಕಾರ ಕೊಡುತ್ತಿಲ್ಲ. ತನಗೆ ಅಪಾಯ ಬಂದಾಗ, ನೀವು ಬೆಂಬಲ ಕೊಟ್ಟರೆ ಮಾತ್ರ ಕೊಡುತ್ತೇನೆ ಎಂದರೆ ಇದು ಮಕ್ಕಳಾಟವೇ? ಅಲ್ಲಿನ ಜನರ ಗೋಳು ಇವರಿಗೆ ಅರ್ಥವಾಗುವುದಿಲ್ಲವೇ?

ಆಂಧ್ರ ಕತೆ ಇದಾದರೆ, ಇನ್ನು ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನಕ್ಕಾಗಿ ದನಿ ಎತ್ತಿದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೋತಿದೆ. ಇದರರ್ಥ ಇನ್ನು ಮುಂದೆ ರಾಜ್ಯಗಳ ಅಧಿಕಾರ ವ್ಯಾಪ್ತಿ ಮೊಟಕುಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎನ್‍ಡಿಎ ಗೆ ಈ ಪರಿಯ ಬಹುಮತ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ದೊಡ್ಡ ಮಾರಕ. ಅದರಲ್ಲೂ ದಕ್ಷಿಣದ ಬಹುತೇಕ ರಾಜ್ಯಗಳು ಹೆಚ್ಚು ತೆರಿಗೆ ಕಟ್ಟಿದರೂ ಸಹ ಇವಗಳಿಗೆ ಕೇಂದ್ರದಿಂದ ಬರುವ ಅನುದಾನ ತೀರಾ ಕಡಿಮೆ. ಕರ್ನಾಟಕ ಬಿಟ್ಟರೆ ಉಳಿದೆಲ್ಲಾ ಕಡೆ ಬಿಜೆಪಿ ಸೋತಿರುವುದರಿಂದ ಇನ್ನು ಮುಂದೆ ಇನ್ನಷ್ಟು ಅನುದಾನ ಕಡಿತವಾಗುವ ಸಂಭವವಿದೆ. ಈ ಪಕ್ಷಪಾತಕ್ಕೆ ಕೊನೆ ಇಲ್ಲವೇ?

ಆದರೂ ಬಹುತೇಕ ಹಿಂದಿಯೇತರ ರಾಜ್ಯಗಳಲ್ಲಿ (ಜಮ್ಮು ಕಾಶ್ಮೀರ, ಪಂಜಾಬ್, ಪ.ಬಂಗಾಳ, ಎರಡು ಬಿಟ್ಟರೆ ಉಳಿದೆಲ್ಲಾ ಈಶಾನ್ಯ ರಾಜ್ಯಗಳು, ಒರಿಸ್ಸಾ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ) ಬಿಜೆಪಿಗೆ ಬಹುಮತವಿಲ್ಲ.
ರಾಜ್ಯಗಳಿಗೆ ಹೆಚ್ಚು ಅನುದಾನಕ್ಕೆ ಒತ್ತಾಯಿಸಲು ಈ ಎಲ್ಲಾ ರಾಜ್ಯಗಳು ಒಂದಾಗುವವು ಎಂಬ ನಿರೀಕ್ಷೆ ಬಹಳ ದುಬಾರಿಯಾದುದಿರಬಹುದೇನೋ?

ಆದರೆ ಕರ್ನಾಟಕದ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯ 6 ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಒದಗಿಸುವ 371ಜೆ ಗೆ ಯುಪಿಎ ಸರ್ಕಾರ ಅನುಮೋದನೆ ನೀಡಿತ್ತು ಎಂಬುದನ್ನು ಈ ಸಮಯದಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...