Homeಕರ್ನಾಟಕನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

ನಕ್ಸಲೈಟ್‌ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ ಎಂದು ತೀರ್ಪಿತ್ತ ಕೋರ್ಟ್

- Advertisement -
- Advertisement -

2012 ರಲ್ಲಿ ನಕ್ಸಲ್ ನಿಗ್ರಹ ದಳದಿಂದ ಬಂಧಿಸಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯರನ್ನು, ಮೂರನೇ ಹೆಚ್ಚುವರಿ ನ್ಯಾಯಾಲಯವು ಗುರುವಾರ ನಿರ್ದೋಷಿ ಎಂದು ತೀರ್ಪು ನೀಡಿದೆ. ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದಲ್ಲಿ ವಿಠಲ ಮಲೆಕುಡಿಯ ಬಂಧನಕ್ಕೆ ಒಳಗಾಗುವ ವೇಳೆ ಅವರು ಮಂಗಳೂರು ವಿಶ್ವವಿದ್ಯಾನಿಯಲದ ಪತ್ರಿಕೋಧ್ಯಮದ ವಿದ್ಯಾರ್ಥಿಯಾಗಿದ್ದರು. ಜೈಲಿನಲ್ಲಿದ್ದಾಗ ಅವರು ಕಾಲೇಜಿಗೆ ಪರೀಕ್ಷೆ ಬರೆಯಲು ಕೈಯ್ಯಲ್ಲಿ ಬೇಡಿ ಹಾಕಿಕೊಂಡೆ ಬಂದಿದ್ದರು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.

ವಿಠಲ ಮಲೆಕುಡಿಯ ನಕ್ಸಲ್ ಚಟುವಟಿಕೆ ಮಾಡುತ್ತಿದ್ದರು ಎಂದು ಆರೋಪಿಸಿ ಅವರ ವಿರುದ್ದ ದೇಶದ್ರೋಹದ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಮಯದಲ್ಲಿ ವಿಠಲ ಅವರು ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸುವ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟ ನಡೆಸುತ್ತಿದ್ದರು. ಬಂಧನಕ್ಕೆ ಒಳಗಾಗಿ ಮೂರು ತಿಂಗಳ ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ: ನಾಪತ್ತೆಯಾಗಿದ್ದ ಮಲೆಕುಡಿಯ ಆದಿವಾಸಿ ಯುವತಿಯ ಶವ ಕಾಡಿನಲ್ಲಿ ಪತ್ತೆ

ನಕ್ಸಲ್ ನಿಗ್ರಹ ದಳವು ಅವರನ್ನು ಬಂಧಿಸಿದಾಗ ಅವರು ತನ್ನ ಮನೆಯಲ್ಲಿ ಭಗತ್‌ ಸಿಂಗ್ ಪುಸ್ತಕ ಹೊಂದಿದ್ದರು ಎಂದು ಮುಖ್ಯವಾಗಿ ಆರೋಪಿಸಿದ್ದರು. ಆದರೆ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಭಗತ್ ಸಿಂಗ್ ಸಾಹಿತ್ಯ ಓದುವುದು ಅಪರಾಧ ಅಲ್ಲ ಎಂದು ಒಪ್ಪಿಕೊಂಡಿದ್ದರು.

ಈ ಬಗ್ಗೆ ತನ್ನ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಅಂತಿಮವಾಗಿ ನ್ಯಾಯಾಲಯ ನ್ಯಾಯ ಒದಗಿಸಿದೆ. ಸರಕಾರಕ್ಕೆ ಮುಖಭಂಗವಾಗಿದೆ. ವಕೀಲ ದಿನೇಶ್ ಹೆಗ್ಡೆ ನ್ಯಾಯಾಲಯದಲ್ಲಿ ಉಚಿತವಾಗಿ ವಾದ ಮಂಡಿಸಿದ್ದರು. ಮಾಧ್ಯಮಗಳು ಅಂದು ನಮ್ಮ ಜೊತೆ ನಿಂತಿದ್ದವು. ಎಲ್ಲರಿಗೂ ಡಿವೈಎಫ್ಐ ರಾಜ್ಯ ಸಮಿತಿ ಕೃತಜ್ಞತೆ ಸಲ್ಲಿಸುತ್ತದೆ. ಕುಲದೀಪ್ ನಯ್ಯರ್ ಬರೆದ ಭಗತ್ ಸಿಂಗ್ ಪುಸ್ತಕ, ಧರ್ಮಸ್ಥಳದ ಜಾತ್ರೆಯಲ್ಲಿ ಖರೀದಿಸಿದ್ದ ಆಟಿಕೆ ಬೈನಾಕುಲರ್, ನೂರು ಗ್ರಾಂ ಕಾಮತ್ ಕಾಫಿ ಪುಡಿ, ಕಾಲು ಕೆ ಜಿ ಸಕ್ಕರೆ, ಎರಡು ಸ್ಟೀಲ್ ತಟ್ಟೆಯನ್ನು ಇಟ್ಟು ಯುಎಪಿಎ ಕಾಯ್ದೆಯಡಿ ಆದಿವಾಸಿ ವಿದ್ಯಾರ್ಥಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಸರಕಾರಕ್ಕೆ ಈಗ ನಾಚಿಕೆ ಆಗಬೇಕು” ಎಂದು ಕಿಡಿ ಕಾಡಿದ್ದಾರೆ.

ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಂಘಟನಾ ಸಮಿತಿಯು “ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ.

ಒಂಬತ್ತು ವರ್ಷಗಳ ಹಿಂದೆ ವಿಠಲ ಮತ್ತು ಅವರ ತಂದೆಯನ್ನು ನಕ್ಸಲೈಟ್ ಎಂದು ಆರೋಪಿಸಿ ಬಂಧಿಸಿದ್ದಾಗ ಡಿವೈಎಫ್ಐ ಸಂಘಟನೆ ಅವರ ಪರವಾಗಿ ಬೃಹತ್‌ ಹೋರಾಟಗಳನ್ನು ಸಂಘಟಿಸಿತ್ತು. ಅವರ ಹೋರಾಟವನ್ನು ಬೆಂಬಲಿಸಿ ಪ್ರಸ್ತುತ ಕೇರಳ ವಿಧಾನಸಭೆಯ ಸ್ಪೀಕರ್‌ ಆಗಿರುವ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ ನೀಡಿ ವಿಠಲ ಮಲೆಕುಡಿಯ ಮತ್ತು ಅವರ ತಂದೆ ನಿಂಗಣ್ಣ ಮಲೆಕುಡಿಯರಿಗೆ ಧೈರ್ಯ ತುಂಬಿದ್ದರು.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...