ಬೆಳಗಾವಿಯಲ್ಲಿ ಬಜರಂಗದಳದ ಸದಸ್ಯರು ತಲವಾರ್ ಪ್ರದರ್ಶನ ಮಾಡುತ್ತಾ ನವರಾತ್ರಿ ಮೆರವಣಿಗೆ ನಡೆಸಿದ್ದು ಕಾನೂನು ಬಾಹಿರ ಕೃತ್ಯವಾಗಿದೆ ಎಂದು ಆರೋಪಿಸಿಸಿರುವ ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ಸ್ ಸಂಘಟನೆಯು ಬಜರಂಗದಳದ ವಿರುದ್ಧ ಡಿಜಿಪಿಯವರಿಗೆ ದೂರು ಸಲ್ಲಿಸಿದೆ.
ಇಂತಹ ಘಟನೆಗಳಿಂದ ರಾಜ್ಯದಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಮೆರವಣಿಗೆಯಲ್ಲಿ ತಲವಾರ್ ಪ್ರದರ್ಶಿಸಿದ ಬಜರಂಗದಳದ ಸದಸ್ಯರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
We filed a complaint with @DgpKarnataka seeking criminal action against Bajrang Dal members openly brandishing swords in Belagavi K'taka in complete violation of law. Despite communal violence increasing in K'taka, no action was taken to stop this incident. pic.twitter.com/fzLBerykJr
— AILAJ_HQ (@AilajHq) October 21, 2021
ಇಂತಹ ಮತೀಯ ಗೂಂಡಾಗಿರಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೆ ಬೆಳಗಾವಿಯಲ್ಲಿ ತನ್ನ ಸ್ನೇಹಿತೆಯೊಟ್ಟಿಗೆ ಪಾರ್ಕಿಗೆ ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಅವರಿಬ್ಬರ ಮೇಲೆ ಮತೀಯಾ ಗೂಂಡಾಗಳು ದಾಳಿ ಮಾಡಿದ್ದರು. ಮಂಡ್ಯದಲ್ಲಿಯೂ ಕೂಡ ಇಂತಹದೇ ಘಟನೆ ನಡೆದಿತ್ತು. ನಿನ್ನೆ ಮಂಗಳೂರಿನಲ್ಲಿ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ನಡೆದಿದೆ.
ಇನ್ನು ಇಂತಹ ಘಟನೆಗಳಾಗದಂತೆ ಜಾಗೃತವಹಿಸಬೇಕಿದ್ದ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಸಹ ಇಂತಹ ಘಟನೆಗಳನ್ನು, ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಕಳೆದ ವಾರವಷ್ಟೇ ‘ಕರ್ನಾಟಕದಲ್ಲಿ ಮಾರೆಲ್ ಪೊಲೀಸಿಂಗ್ ಘಟನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮತೀಯ ಗೂಂಡಾಗಿರಿ ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್ ಸಂಘಟನೆ ನೋಟೀಸ್ ನೀಡಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ



https://www.facebook.com/138870650100395/posts/889175131736606/
Edidre ok na nimge??