Homeಕರ್ನಾಟಕಎಷ್ಟು ದಿನ ಕಾಯಲಿ? ಗುಡಿಸಲು ನಿರ್ಮಿಸಿ ಗ್ರಂಥಾಲಯ ಆರಂಭಿಸುವೆ: ಸೈಯದ್ ಇಸಾಕ್

ಎಷ್ಟು ದಿನ ಕಾಯಲಿ? ಗುಡಿಸಲು ನಿರ್ಮಿಸಿ ಗ್ರಂಥಾಲಯ ಆರಂಭಿಸುವೆ: ಸೈಯದ್ ಇಸಾಕ್

‘ಗ್ರಂಥಾಲಯ ನಿರ್ಮಾಣಕ್ಕಾಗಿ ಹಣ ನೀಡಲಾಗಿದೆ’ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಹೇಳಿದರೆ, ಗ್ರಂಥಾಲಯ ಇಲಾಖೆ ಉಪನಿರ್ದೇಶಕರು, ‘20 ಕೋಟಿ ರೂ. ಸೆಸ್‌ ಬಾಕಿ ಬರಬೇಕಿದೆ’ ಎನ್ನುತ್ತಾರೆ.

- Advertisement -
- Advertisement -

ಮೈಸೂರಿನ ರಾಜೀವನಗರ 2ನೇ ಹಂತದಲ್ಲಿ ಕನ್ನಡಪ್ರೇಮಿ ಸೈಯದ್ ಇಸಾಕ್‌ ಅವರು ನಿರ್ಮಿಸಿದ್ದ ಗ್ರಂಥಾಲಯ ಸುಟ್ಟು ಹೋಗಿ ಆರು ತಿಂಗಳಾಯಿತು. ಕುಡುಕನೊಬ್ಬನ ಅತಾಚುರ್ಯದಿಂದ ಬೀಡಿ ಬೆಂಕಿ ತಾಕಿ ಕಳೆದ ಏಪ್ರಿಲ್‌ನಲ್ಲಿ ಗ್ರಂಥಾಲಯ ಭಸ್ಮವಾದ ಬಳಿಕ, ಸೈಯದ್ ಅವರಿಗೆ ನೆರವಿನ ಮಹಾಪೂರದ ಭರವಸೆಯೇ ಹರಿದುಬಂದಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಸೈಯದ್ ಅವರ ಕನ್ನಡ ಪ್ರೇಮವನ್ನು ಕೊಂಡಾಡಲಾಯಿತು. ಪತ್ರಿಕೆಗಳು ವರದಿಗಳನ್ನು ಪ್ರಕಟಿಸಿದವು. ಸ್ಥಳಕ್ಕೆ ಶಾಸಕರು, ಸಂಸದರು, ಅಧಿಕಾರಿಗಳು ಭೇಟಿ ನೀಡಿದರು. ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಂಟಿಯಾಗಿ ಪತ್ರಿಕಾ ಪ್ರಕಟಣೆ ನೀಡಿ ಗ್ರಂಥಾಲಯ ನಿರ್ಮಿಸುವುದಾಗಿ ಹೇಳಿದ್ದವು. ಮಿಸ್ಬಾ ಪತೇನ್‌ ಎಂಬವರು ಫಂಡ್‌ ರೈಸಿಂಗ್‌ ಮಾಡಿದ್ದರು. ಆದರೆ ಸರ್ಕಾರ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಸುಮಾರು 29 ಲಕ್ಷ ರೂ.ಗಳನ್ನು ದಾನಿಗಳಿಗೆ ಮಿಸ್ಬಾ ಹಿಂತಿರಿಸಿದ್ದರು.

ಶಾಸಕ ಜಮೀರ್‌ ಅಹಮದ್‌ ಅವರು ಎರಡು ಲಕ್ಷ ರೂ., ಸಂಸದ ಪ್ರತಾಪ ಸಿಂಹ ಅವರು ಐವತ್ತು ಸಾವಿರ ರೂ., ಸಚಿವ ಎಸ್‌.ಟಿ.ಸೋಮಶೇಖರ್‌ ಇಪ್ಪತ್ತೈದು ಸಾವಿರ ರೂ. ನೀಡಿದ್ದರು. ಬೋರ ಎಂಬ ಸಂಸ್ಥೆಗೆ ಸೇರಿದ ನಿವೇಶನದಲ್ಲಿ ಸೈಯದ್ ಅವರು 2011ರಿಂದ ಗ್ರಂಥಾಲಯ ನಡೆಸುತ್ತಿದ್ದರು. ಹೀಗಾಗಿ ಬೋರ ಸಂಸ್ಥೆಯಿಂದ ಜಾಗವನ್ನು ಬಿಡಿಸಿಕೊಂಡು, ಗ್ರಂಥಾಲಯಕ್ಕೆ ಜಾಗವನ್ನು ಬಿಡಿಸಿಕೊಡುವುದಾಗಿ ಅಧಿಕಾರಿಗಳು ಹೇಳಿದ್ದರು. ನಿವೇಶನವೇನೋ ಮಂಜೂರಾಗಿದೆ. ಆದರೆ ಗ್ರಂಥಾಲಯ ನಿರ್ಮಾಣ ಕಾರ್ಯ ಮಾತ್ರ ಚಾಲನೆ ಪಡೆದಿಲ್ಲ.

ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ಗ್ರಂಥಾಲಯ ಸುಟ್ಟು ಹೋದ ಸಂದರ್ಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಸೈಯದ್ ಇಸಾಕ್ ವಿಡಿಯೋ ಹಾಗೂ ಆಡಿಯೋ ಮೂಲಕ ತಮ್ಮ ಅಳಲು ತೋಡಿಕೊಂಡರು.

“ಗ್ರಂಥಾಲಯ ನಿರ್ಮಾಣ ವಿಳಂಬವಾಗುತ್ತಿದೆ. ಜಾಗವೇನೋ ಮಂಜೂರಾಗಿದೆ. ಆದರೆ, ಸರ್ಕಾರ ಗ್ರಂಥಾಲಯ ನಿರ್ಮಿಸದಿದ್ದರೆ ದಾನಿಗಳು ನೀಡಿರುವ ಒಂದಿಷ್ಟು ಹಣವಿದ್ದು, ಅದರಲ್ಲೇ ಮೊದಲಿನಂತೆ ಗುಡಿಸಲು ನಿರ್ಮಿಸಿ, ದಾನಿಗಳಿಂದ ಬಂದಿರುವ ಸಾವಿರಾರು ಪುಸ್ತಕಗಳನ್ನು ಗ್ರಂಥಾಲಯಕ್ಕೆ ಇರಿಸುತ್ತೇನೆ. ಮೈಸೂರಿನ ರಾಜೀವನಗರ ಭಾಗದಲ್ಲಿ ಕನ್ನಡ ಓದುವವರು ಕಡಿಮೆ ಇದ್ದಾರೆ. ಉರ್ದು ಬಳಕೆ ಹೆಚ್ಚಿದೆ. ಇಂತಹ ಜಾಗದಲ್ಲಿ ಕನ್ನಡ ಗ್ರಂಥಾಲಯ ಅಗತ್ಯವಿದೆ” ಎನ್ನುತ್ತಾರೆ ಸೈಯದ್‌.

“ಆಗಸ್ಟ್‌ 12ಕ್ಕೆ ಗುದ್ದಲಿಪೂಜೆ ಆಗುತ್ತದೆ ಎಂದು ಹೇಳಿ ಕೈಕೊಟ್ಟಿದ್ದಾರೆ. ಬರೀ ಆಶ್ವಾಸನೆ ನೀಡಿದ್ದಷ್ಟೇ. ಗ್ರಂಥಾಲಯವನ್ನು ಜನರು ಮರೆಯಬಾರದು ಎಂದು ಒಂದಿಷ್ಟು ಪುಸ್ತಕಗಳನ್ನು ಇಲ್ಲಿಯೇ ಇಟ್ಟು, ಪತ್ರಿಕೆಗಳನ್ನು ಹಾಕಿಸುತ್ತಾ ಜನರ ಓದುವ ಹವ್ಯಾಸವನ್ನು ಹೆಚ್ಚಿಸಲು ಯತ್ನಿಸುತ್ತಿದ್ದೇನೆ. ಗ್ರಂಥಾಲಯವಿದ್ದಾಗ ಕೆಲವರು ಬಂದು ಓದುವ ಅಭಿರುಚಿ ಬೆಳೆಸಿಕೊಂಡಿದ್ದರು. ಆದರೆ ಈಗ ಅದೂ ಇಲ್ಲವಾಗುತ್ತಿದೆ” ಎನ್ನುತ್ತಾರೆ ಸೈಯದ್‌.

ಕನ್ನಡಪ್ರೇಮಿ ಸೈಯದ್ ಇಸಾಕ್‌

ಗ್ರಂಥಾಲಯ ಇಲಾಖೆಗೆ ಹಣ ನೀಡಿದ್ದೇವೆ: ಪಾಲಿಕೆ ಆಯುಕ್ತ

ಸೈಯದ್ ಅವರಿಗೆ ಗ್ರಂಥಾಲಯ ನಿರ್ಮಿಸುವ ಭರವಸೆ ನೀಡಿ ವಿಳಂಬ ಮಾಡುತ್ತಿರುವುದು ಏತಕ್ಕೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್‌ ರೆಡ್ಡಿ ಅವರನ್ನು ಸಂಪರ್ಕಿಸಿದಾಗ, “ಪ್ರತ್ಯೇಕವಾಗಿ ನಾವು ಲೈಬ್ರರಿ ಸೆಸ್‌ ಸಂಗ್ರಹಿಸುತ್ತೇವೆ. ಅದನ್ನು ಗ್ರಂಥಾಲಯ ಇಲಾಖೆಗೆ ನೀಡಿದ್ದೇವೆ. ಅವರು ಪ್ರಕ್ರಿಯೆ ನಡೆಸುತ್ತಿದ್ದಾರೆ. ಭೂಮಿಯನ್ನು ಮಂಜೂರು ಮಾಡಲಾಗಿದೆ. ಕಟ್ಟಡ ನಿರ್ಮಾಣವು ಗ್ರಂಥಾಲಯ ಇಲಾಖೆಯಿಂದ ಆಗಬೇಕು. ಕೊಡಬೇಕಾದ ಹಣವನ್ನು ಗ್ರಂಥಾಲಯ ಇಲಾಖೆಗೆ ನಾವು ನೀಡಿದ್ದೇವೆ” ಎಂದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ

***

20 ಕೋಟಿ ರೂ. ಸೆಸ್‌ ಬಾಕಿ ಇದೆ: ಗ್ರಂಥಾಲಯ ಇಲಾಖೆ

ಗ್ರಂಥಾಲಯ ನಿರ್ಮಾಣಕ್ಕೆ ಪಾಲಿಕೆಯಿಂದ ನೀಡಬೇಕಾದ ಹಣವನ್ನೆಲ್ಲ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತರು ಹೇಳಿದರೆ ಮೈಸೂರು ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್ ಅವರು ಹೇಳುವುದು ಬೇರೆ.

“ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದರು. ನಮ್ಮ ಇಲಾಖೆಯಲ್ಲಿ ಕಟ್ಟಡ ನಿರ್ಮಾಣಕ್ಕಾಗುವಷ್ಟು ಹಣವಿಲ್ಲ. ನಿತ್ಯದ ಖರ್ಚು ವೆಚ್ಚಕ್ಕೆ ಹಣ ಸಾಕಾಗುತ್ತಿಲ್ಲ. ಪಾಲಿಕೆಯಿಂದ 20 ಕೋಟಿ ರೂ. ಸೆಸ್ ಬಾಕಿ ಇದೆ. ಈಗ ಪ್ರಸ್ತುತವಾಗಿ ಬರಬೇಕಾಗಿರುವ ಸೆಸ್ ಬರುತ್ತಿದೆ. ಆದರೆ ನಿತ್ಯದ ಖರ್ಚು ವೆಚ್ಚಕ್ಕೇ ಆ ಹಣ ಹೋಗುತ್ತಿದೆ. ಮೈಸೂರು ನಗರದ ಪೀಪಲ್ಸ್ ಪಾರ್ಕ್‌‌ನಲ್ಲಿ ಐದೂವರೆ ಕೋಟಿ ರೂ.ಗಳಲ್ಲಿ ನಿರ್ಮಾಣವಾಗಿರುವ ಗ್ರಂಥಾಲಯ ಅಭಿವೃದ್ಧಿ ಕಾರ್ಯಗಳಿಗೆ ಇನ್ನೂ ಮೂರರಿಂದ ನಾಲ್ಕು ಕೋಟಿ ರೂ. ಬೇಕಾಗಿದೆ. ನಮ್ಮ ಬಳಿ ಅಷ್ಟು ಹಣವಿಲ್ಲ” ಎನ್ನುತ್ತಾರೆ ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌.

ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌

“ಸುಮಾರು 35 ಲಕ್ಷ ರೂ.ಗಳಲ್ಲಿ ಸೈಯದ್‌ ಅವರ ಗ್ರಂಥಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದಿಂದ ಯೋಜನೆ ಸಿದ್ಧಪಡಿಸಲಾಗಿದೆ. ಮುಡಾದವರು ನಿವೇಶನ ನೀಡಿದ್ದಾರೆ. ಸಿಎ ನಿವೇಶನ ಆಗಿರುವುದರಿಂದ ಹಣ ಕಟ್ಟಬೇಕು ಎಂದು ಲೆಟರ್‌ ಕೊಟ್ಟಿದ್ದಾರೆ. ಆದರೆ ನಂತರದಲ್ಲಿ ನಡೆದ ಸಭೆಯಲ್ಲಿ ಹಣ ಕಟ್ಟುವುದೇನೂ ಬೇಡವೆಂದು ಮುಡಾ ಆಯುಕ್ತರು ಭರವಸೆ ನೀಡಿದ್ದಾರೆ. ಪಾಲಿಕೆ ಮತ್ತು ಗ್ರಂಥಾಲಯ ಇಲಾಖೆಯಿಂದ ಕಟ್ಟಡ ನಿರ್ಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಯೋಜಿತ 35 ಲಕ್ಷ ರೂ.ಗಳಲ್ಲಿ 20 ಲಕ್ಷ ರೂ.ಗಳನ್ನಾದರೂ ಪಾಲಿಕೆ ನೀಡಿದರೆ ಗ್ರಂಥಾಲಯ ಕಟ್ಟಡ ನಿರ್ಮಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದೇನೆ” ಎನ್ನುತ್ತಾರೆ ಅವರು.

“ಕೇಂದ್ರ ಸರ್ಕಾರದ ಅಡಿಯಲ್ಲಿ ರಾಜ್‌ರಾಮ್‌ ಲೈಬ್ರರಿ ಫೌಂಡೇಷನ್‌ ಇದೆ. ಅಲ್ಲಿಗೂ ಪತ್ರ ಬರೆದಿದ್ದೇನೆ. ಆದರೆ ಅಲ್ಲೆಲ್ಲ ಶರತ್ತುಗಳು ಹೆಚ್ಚಿವೆ. ಖಾಸಗಿಯವರಿಗೆ ಗ್ರಂಥಾಲಯ ಅಭಿವೃದ್ಧಿಗೆ ಹಣ ನೀಡಬೇಕೆಂದರೆ ಖಾಸಗಿ ವ್ಯಕ್ತಿಯು ಕನಿಷ್ಠ 20 ವರ್ಷಗಳಿಂದ ಗ್ರಂಥಾಲಯ ನಡೆಸಿರಬೇಕೆಂಬ ಶರತ್ತು ಇದೆ. ಹಾಗಿದ್ದಾಗ ಮಾತ್ರ 15 ಲಕ್ಷ ರೂ.ಗಳವರೆಗೂ ಅನುದಾನ ನೀಡುತ್ತಾರೆ. ಸೈಯದ್‌ ಇಸಾಕ್‌ ಅವರ ಗ್ರಂಥಾಲಯಕ್ಕೆ 20 ವರ್ಷ ಆಗಿಲ್ಲ. ಜೊತೆಗೆ ಯಾವುದೇ ಕಾಗದ ಪತ್ರಗಳೂ ಇಲ್ಲ. ಹೀಗಾಗಿ ಆ ಅನುದಾನ ಸಿಗುವುದಿಲ್ಲ. ರಾಜ್ಯ ಸರ್ಕಾರಕ್ಕೂ ಪತ್ರ ಬರೆದಿದ್ದೇನೆ. ಖಾಸಗಿಯವರು ಸಹಕಾರ ನೀಡಿದರೆ ಕಟ್ಟಡ ಕಾಮಗಾರಿ ಆರಂಭಿಸಬಹುದು. ಗ್ರಂಥಾಲಯ ಇಲಾಖೆಯಿಂದ ಪಿಠೋಪಕರಣ, ಪುಸ್ತಕಗಳನ್ನು ನೀಡಲಾಗುವುದು. ಪುಸ್ತಕಗಳನ್ನು ಈಗಾಗಲೇ ತೆಗೆದಿರಿಸಲಾಗಿದೆ. ಕಟ್ಟಡವೊಂದು ಆಗಬೇಕಿದೆ. ಜನಪ್ರತಿನಿಧಿಗಳ್ಯಾರಾದರೂ ಸಹಕಾರ ನೀಡಿದರೆ ಇಲಾಖೆಯಿಂದ ಒಂದಿಷ್ಟು ಹಣ ನೀಡಬಹುದು” ಎನ್ನುತ್ತಾರೆ ಮಂಜುನಾಥ್‌.

ಪಾಲಿಕೆ ಮತ್ತು ಗ್ರಂಥಾಲಯ ಇಲಾಖೆಯ ಹಗ್ಗ ಜಗ್ಗಾಟದಲ್ಲಿ ಗ್ರಂಥಾಲಯ ನಿರ್ಮಾಣ ವಿಳಂಬವಾಗುತ್ತಿರುವುದು ಮಾತ್ರ ನಿಜ. ಈ ವೇಳೆಗೆ ಸೈಯದ್ ಇಸಾಕ್‌ ಅವರ ಕನ್ನಡ ಗ್ರಂಥಾಲಯ ನಿರ್ಮಾಣವಾಗಿದ್ದರೆ ಈ ಭಾರಿಯ ಕನ್ನಡ ರಾಜ್ಯೋತ್ಸವ ಸೈಯದ್ ಅವರಿಗೆ ಬಹಳ ಖುಷಿ ನೀಡುತ್ತಿತ್ತು.

ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಪೋಸ್ಟರ್‌ ಡಿಲೀಟ್ ಮಾಡಿದ ಕನ್ನಡ-ಸಂಸ್ಕೃತಿ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...