Homeಕರ್ನಾಟಕಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

ಕರ್ನಾಟಕ: ಒಂದುವರೆ ವರ್ಷದಲ್ಲಿ 746 ರೈತರ ಆತ್ಮಹತ್ಯೆ; ದೇಶದಲ್ಲೇ 2ನೇ ಸ್ಥಾನ

- Advertisement -
- Advertisement -

ದೇಶದಾದ್ಯಂತ ವಿವಿಧ ರೀತಿಯ ಕಾರಣಗಳು ಹಾಗೂ ಸರ್ಕಾರಗಳು ಧೋರಣೆಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಲೇ ಇವೆ. ಕೊರೊನಾ, ಲಾಕ್‌ಡೌನ್‌ ಸಂದರ್ಭದಲ್ಲಿಯೂ ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 746 ರೈತ ಆತ್ಮಹತ್ಯೆಗಳು ವರದಿಯಾಗಿವೆ ಎಂದು ಸರ್ಕಾರದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಏಪ್ರಿಲ್ 2020 ಹಾಗೂ ಸೆಪ್ಟೆಂಬರ್ 2021ರ ನಡುವೆ 746 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019-20ರ ವರ್ಷದಲ್ಲಿ 1076 ರೈತ ಆತ್ಮಹತ್ಯಾ ಪ್ರಕರಣಗಳು ವರದಿಯಾಗಿದ್ದವು. ವರದಿಯಾಗಿರುವ ಪ್ರಕರಣಗಳಲ್ಲಿ ಉತ್ತರ ಕರ್ನಾಟಕ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೈತ ಆತ್ಮಹತ್ಯೆ ಪ್ರಕಟಣಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರೈತ ಹೋರಾಟದ ನೆಲದಲ್ಲಿ ಹತ್ಯೆ: ಮೃತ ವ್ಯಕ್ತಿಯ ಗ್ರಾಮಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದ ಕೊಲೆ ಆರೋಪಿ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅಂತರ್ಜಲದ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಉತ್ತಮ ಮಳೆಯು ರೈತರಲ್ಲಿ ಸಂಕಷ್ಟವನ್ನು ಕಡಿಮೆ ಮಾಡಿದೆ. ಇದು, ಕೆಳೆದ ವರ್ಷಕ್ಕಿಂತ ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಲು ಒಂದು ಕಾರಣವಾಗಿದೆ” ಎಂದು ರಾಜ್ಯ ನೈಸರ್ಗಿಕ ವಿಪತ್ತು ಮತ್ತು ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದ್ದಾರೆ.

ಮಾತ್ರವಲ್ಲದೆ, ರೈತರು ಸಾಮಾಜಿಕ, ಆರ್ಥಿಕ ಸಮಸ್ಯೆ ಸೇರಿದಂತೆ ಹಲವು ಇತರೆ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ. ಇದೆಲ್ಲರ ನಡುವೆಯೂ, ಉತ್ತಮ ಮಳೆಯಿಂದಾಗಿ ರಾಜ್ಯವು 150 ಲಕ್ಷ ಟನ್‌ಗಳಿಗಿಂತ ಹೆಚ್ಚು ಆಹಾರ ಧಾನ್ಯಗಳನ್ನು ಉತ್ಪಾದಿಸಿದೆ ಎಂದು ಅವರು ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಲ್ಲಿ 10 ಲಕ್ಷ ಟನ್‌ಗಳಷ್ಟು ಕಡಿಮೆ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದೇವೆ. ಅಂತಹ ಬೀಜಗಳನ್ನು ಮಾರಾಟ ಮಾಡುವವವರು ಮತ್ತು ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೀಜಗಳ ಗುಣಮಟ್ಟ ಕಳಪೆಯಾಗಿದ್ದರೆ ಇಳುವರಿ ಕಡಿಮೆಯಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಲಖ್ಬೀರ್ ಹತ್ಯೆ ಪ್ರಕರಣ: ರೈತ ಸಂಘಟನೆಗಳ‌ ಹೊಣೆಯ ಕುರಿತು ಎರಡು ನೋಟಗಳು

ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ

2020ರಲ್ಲಿ ದೇಶದಲ್ಲಿ ಒಟ್ಟು 10,281 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಗಳ ಪೈಕಿ ಕರ್ನಾಟಕವು 2ನೇ ಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ- ಅಂಶಗಳಿಂದ ತಿಳಿದುಬಂದಿದೆ. 2020ರಲ್ಲಿ 1076 ರೈತರು ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ 1,992 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2018ರಲ್ಲಿ 2,405 ರೈತರು ಸಾವಿಗೆ ಶರಣಾಗಿದ್ದರು. 2017ರಲ್ಲಿ ಕರ್ನಾಟಕದಲ್ಲಿ 2079 ಮಂದಿ, 2016ರಲ್ಲಿ 2,160 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. 2020ರಲ್ಲಿ 3,927 ರೈತರು ಅಲ್ಲಿ ಸಾವಿಗೆ ಶರಣಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಆಂಧ್ರ ಪ್ರದೇಶವಿದ್ದು, 1,029 ರೈತರು ಪ್ರಾಣ ಕಳೆದುಕೊಂಡಿದ್ದಾರೆ.

2018ರಲ್ಲಿ ಸಂಭವಿಸಿದ 10,349 ರೈತರ ಆತ್ಮಹತ್ಯೆಗೆ ಹೋಲಿಸಿದರೆ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಕೊಂಚ ಇಳಿಕೆ ಕಂಡಿದೆ. 2017ರಲ್ಲಿ 10,665, 2016 ರಲ್ಲಿ 11,379 ಮಂದಿ ರೈತರು ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಮಾನಸಿಕ ದೌರ್ಬಲ್ಯವಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ನಾಲಗೆ ಹರಿಬಿಟ್ಟ ಬಿ.ಸಿ ಪಾಟೀಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...