Homeಮುಖಪುಟನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

ನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

- Advertisement -
- Advertisement -

ಸೂಪರ್ ಸ್ಟಾರ್‌ ರಜನಿಕಾಂತ್‌ ಅವರಿಗೆ ಇಂದು ಮಹತ್ವದ ದಿನವಾಗಿದೆ. ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾಸಾಹೇಬ್ ಫಾಲ್ಕೆ ಗೌರವಕ್ಕೆ ರಜನಿಕಾಂತ್‌ ಪಾತ್ರರಾಗಿದ್ದಾರೆ. ಅ.25 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ನಟ ರಜನಿಕಾಂತ್‌ ಅವರು ತಮಗೆ ಸಂದ ಪ್ರಶಸ್ತಿಯನ್ನು ತಮ್ಮ ನಿರ್ಮಾಪಕರು, ನಿರ್ದೇಶಕರು, ಚಲನಚಿತ್ರ ಬಂಧುಗಳು ಮತ್ತು ಅಭಿಮಾನಿಗಳಿಗೆ ಅರ್ಪಿಸಿದ್ದಾರೆ.

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಘೋಷಿಸಲಾದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

ರಜನಿಕಾಂತ್‌ ಅವರ ಅಳಿಯ, ಸ್ಟಾರ್‌ ನಟ ಧನುಷ್‌ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಸುರನ್‌ ಸಿನಿಮಾದಲ್ಲಿನ ಅತ್ಯುತ್ತಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

 

ಪ್ರಶಸ್ತಿಯನ್ನು ಪಡೆದುಕೊಂಡು ಮಾತನಾಡಿರುವ ನಟ ರಜನಿಕಾಂತ್, ಬಸ್ ಕಂಡಕ್ಟರ್‌ನಿಂದ ಸ್ಟಾರ್‌ ನಟನವರೆಗೆ ತಮ್ಮ ಜೀವನದ ಪ್ರಯಾಣವನ್ನು ನೆನಪಿಸಿಕೊಂಡಿದ್ದಾರೆ. ಚಲನಚಿತ್ರಗಳಿಗೆ ಸೇರುವಂತೆ ಸೂಚಿಸಿದ ತಮ್ಮ ಬಹುಕಾಲದ ಸ್ನೇಹಿತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹಾಡುಗಾರರಾದ ಆಶಾ ಭೋಂಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಜೀತ್ ಚಟರ್ಜಿ ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಅವರಿದ್ದ ಆಯ್ಕಾ ಸಮಿತಿಯು ಈ ವರ್ಷದ ಆರಂಭದಲ್ಲಿ ರಜನಿಕಾಂತ್ ಅವರನ್ನು ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...