Homeಚಳವಳಿವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದಕ್ಕೆ ಕನ್ನಡಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ಕನ್ನಡದ ಹಾಡು ಹಾಕೋದಿಲ್ಲ, ಯಾರೂ ಏನೂ ಮಾಡಿಕೊಳ್ಳೋದಿಕ್ಕೆ ಆಗೋದಿಲ್ಲ ಎಂಬ ಹೇಳಿಕೆ ನೀಡಿ ಗ್ರಾಹಕರೊಂದಿಗೆ ಉದ್ಧಟತನದಿಂದ ನಡೆದುಕೊಂಡಿದ್ದ ಕೆಎಫ್‌ಸಿ ಸಿಬ್ಬಂದಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಒಂದು ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಾವಣಗೆರೆಯಲ್ಲಿ ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕರವೇ ದಾವಣಗೆರೆ ಜಿಲ್ಲಾಧ್ಯಕ್ಷರಾದ ಎಂ.ಎಸ್. ರಾಮೇಗೌಡರವರು ಮಾತನಾಡಿ, “ಒಂದು ವಾರದೊಳಗೆ ಎಲ್ಲ ನಾಮಫಲಕಗಳು ಕನ್ನಡದಲ್ಲಿ ಹಾಕಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಕನ್ನಡದ ಹಾಡುಗಳನ್ನೇ ಹಾಕಬೇಕು. ಒಂದು‌ ವೇಳೆ ಕೆಎಫ್ ಸಿ ತನ್ನ ದುರಹಂಕಾರ ಮುಂದುವರೆಸಿದರೆ ರಾಜ್ಯದ ಎಲ್ಲ ಕೆಎಫ್‌ಸಿ‌ ಮಳಿಗೆಗಳ ಮುಂದೆ ಕರ್ನಾಟಕ ರಕ್ಷಣಾ‌ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಲಿದ್ದಾರೆ. ಆಗ ಆಗಬಹುದಾದ ಅನಾಹುತಗಳಿಗೆ ನೀವೇ ಹೊಣೆಗಾರರು” ಎಂದು ಕೆಎಫ್‌ಸಿ ಮುಖ್ಯಸ್ಥರಿಗೆ ಎಚ್ಚರಿಕೆ‌‌ ನೀಡಿದರು.

ಏನಿದು ವಿವಾದ?

ಮಹಿಳೆಯೊಬ್ಬರು ಬೆಂಗಳೂರಿನ ಕೆಎಫ್‌ಸಿ ಮಳಿಗೆಯೊಂದರಲ್ಲಿ ಕನ್ನಡದ ಹಾಡುಗಳನ್ನು ಹಾಕಿ ಎಂದು ಹೇಳಿದ್ದಕ್ಕೆ ಅಲ್ಲಿನ ಸಿಬ್ಬಂದಿ ಉದ್ಧಟತನದಿಂದ‌ ಮಾತನಾಡಿದ್ದರು. “ನಾವು ಕನ್ನಡ ಹಾಡುಗಳನ್ನು ಹಾಕುವುದಿಲ್ಲ, ಹಿಂದಿ ನಮ್ಮ ರಾಷ್ಟ್ರಭಾಷೆ, ನಾವು ಹಿಂದಿ ಹಾಡುಗಳನ್ನೇ ಪ್ರಸಾರ ಮಾಡುತ್ತೇವೆ. ಹಿಂದೆಯೂ ಇದೇ ರೀತಿ ಹಲವರು ಹೇಳಿದ್ದರು, ಯಾರಿಂದ ಏನೂ ಮಾಡಿಕೊಳ್ಳಲು ಆಗೋದಿಲ್ಲ” ಎಂದು ಹೇಳಿದ್ದ ವಿಡಿಯೋವೊಂದು ವೈರಲ್ ಆಗಿತ್ತು.

ಕರ್ನಾಟಕಕ್ಕೆ ಬರಲು ಪಾಸ್‌ಪೋರ್ಟ್ ಬೇಕಾ? ನಮ್ಮ ಕಂಪನಿ ರೂಲ್ಸ್ ಫಾಲೋ ಮಾಡುತ್ತೇವೆ. ನೀವು ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಸಿಬ್ಬಂದಿ ಮಹಿಳೆಗೆ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಇದಕ್ಕೆ ಸಾವಿರಾರು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿ ಕೆಎಫ್‌ಸಿ ಈ ಉದ್ಧಟತನವನ್ನು ತಿದ್ದಿಕೊಳ್ಳಬೇಕು ಮತ್ತು ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಈ ಕುರಿತು ಟ್ವಿಟರ್ ನಲ್ಲಿ #RejectKFC #KFCಕನ್ನಡಬೇಕು ಎಂಬ‌ ಹ್ಯಾಶ್ ಟ್ಯಾಗ್ ಮೂಲಕ ಕನ್ನಡಿಗರು‌‌ ಕಿಡಿಕಾರಿದ್ದರು. ಭಾನುವಾರ ಸಂಜೆ ನಡೆದ ಅಭಿಯಾನದಲ್ಲಿ ಸುಮಾರು 45,000ಕ್ಕೂ‌ ಹೆಚ್ಚು ಟ್ವೀಟ್‌ಗಳು ದಾಖಲಾಗಿದ್ದವು. #RejectKFC ಹ್ಯಾಶ್‌ಟ್ಯಾಗ್ ಭಾರತದಲ್ಲಿ ಮೂರನೇ ಸ್ಥಾನದಲ್ಲಿ ಟ್ರೆಂಡ್ ಆಗಿತ್ತು.

ಈ KFC ಯವರು ಶ್ರೀಲಂಕಾದಲ್ಲಿ ಸಿಂಹಳಿ, ಚೀನಾದಲ್ಲಿ ಮ್ಯಾಂಡರಿನ್‌, ಜೋರ್ಡಾನ್ ನಲ್ಲಿ ಅರೇಬಿಕ್‌, ರಷ್ಯಾದಲ್ಲಿ ರಷ್ಯನ್ ಹೀಗೆ ಆಯಾ ನಾಡುಗಳಲ್ಲಿ ಅವರವರ ನುಡಿಗಳನ್ನೇ ಬಳಸಿದ್ದಾರೆ. ನಮ್ಮ ಕನ್ನಡದಲ್ಲಿ ಸೇವೆ ಕೊಡೊಕೆ ಆಗಿಲ್ಲ ಅಂದ್ರೆ ಕರ್ನಾಟಕದಿಂದ ಗಂಟು ಮೂಟೆ ಕಟ್ಟಿಕೊಂಡು ಹೋಗಿ ಎಂದು ಕನ್ನಡ ಹೋರಾಟಗಾರ ಮಂಜು ಗಣಪತಿಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕನ್ನಡ ಬಳಕೆ ಮಾಡದ ಕೆಎಫ್‌ಸಿ ಕೂಡಲೇ ಕನ್ನಡಿಗರ ಕ್ಷಮೆ ಯಾಚಿಸಬೇಕು. ಕನ್ನಡದಲ್ಲೇ ವ್ಯವಹರಿಸಬೇಕು, ಮಳಿಗೆಗಳಲ್ಲಿ ಕನ್ನಡದ ಹಾಡುಗಳನ್ನು ಪ್ರಸಾರ ಮಾಡಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಕ್ಕ ಪಾಠ ಕಲಿಸಲಿದ್ದಾರೆ. ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುವ ಯಾವುದೇ ಸಂಸ್ಥೆ, ಅದು ಎಷ್ಟು ದೊಡ್ಡದೇ ಆದರೂ ನಮಗೆ ಬೇಡ. ಹಣ ಮಾಡಲು ಕರ್ನಾಟಕಕ್ಕೆ ಬರುವ ಸಂಸ್ಥೆಗಳು ಕನ್ನಡಿಗರ ಭಾವನೆಗಳನ್ನು ಗೌರವಿಸಬೇಕು, ಕನ್ನಡಿಗರ ಅಸ್ಮಿತೆಯನ್ನು ಗುರುತಿಸಬೇಕು. ಇತರ ಭಾಷೆಗಳನ್ನು, ಭಾಷಿಕರನ್ನು ಕನ್ನಡಿಗರ ಮೇಲೆ ಹೇರುವ ಹುಚ್ಚಾಟ ಸಹಿಸುವುದಿಲ್ಲ” ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...