Homeಸಿನಿಮಾಕ್ರೀಡೆಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ಪಾಕ್ ಗೆಲುವಿಗೆ ಸಂಭ್ರಮ ಆರೋಪ: ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮೇಲೆ UAPA ಪ್ರಕರಣ

ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ - ಮುಫ್ತಿ

- Advertisement -
- Advertisement -

ಭಾರತ ಪಾಕಿಸ್ತಾನದ ನಡುವೆ ನಡೆದ ಐಸಿಸಿ ಟಿಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಗೆದ್ದಾಗ ಸಂಭ್ರಮಿಸಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(UAPA)ಯ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಶ್ರೀನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಪಾಕ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಅವುಗಳ ಆಧಾರದ ಮೇಲೆ ಶ್ರೀನಗರದ ಕರಣ್ ನಗರ್ ಮತ್ತು ಸೌರ ಪೊಲೀಸ್ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ಪ್ರಕರಣಗಳ ಅಡಿಯಲ್ಲಿ ಕೇಸು ದಾಖಲಾಗಿಸಲಾಗದೆ.

ಶ್ರೀ ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಧಿಕಾರಿಗಳು ಈ ಕುರಿತು ಫ್ಯಾಕ್ಟ್ ಫೈಂಡಿಂಗ್ ಸಮಿತಿ ರಚಿಸಲಾಗಿದ್ದು ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುವುದು ಮತ್ತು ವಿಡಿಯೋ ವೈರಲ್ ಆಗಿದ್ದು ಹೇಗೆ ಎಂದು ತನಿಖೆ ನಡೆಸಲು ನಿರ್ಧರಿಸಿದ್ದಾರೆ. 48 ಗಂಟೆಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. “ನಮ್ಮ ಸಂಸ್ಥೆಯಲ್ಲಿ ಸಂಭ್ರಮಾಚರಣೆ ನಡೆದಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ. ಆಗಿದ್ದರೂ ಸತ್ಯಶೋಧನಾ ಸಮಿತಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ವೈರಲ್ ಆಗಿರುವ ವಿಡಿಯೋಗಳನ್ನು ಮತ್ತು ಅವುಗಳಲ್ಲಿರುವ ಜನರನ್ನು ಪರಿಶೀಲಿಸುವಲ್ಲಿ ನಿರತರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸರ ಶಿಸ್ತುಕ್ರಮವನ್ನು ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಸರೆನ್ಸ್‌ನ ಮುಖಂಡ ಸಾಜಿದ್ ಲೋನ್ ಬಲವಾಗಿ ಖಂಡಿಸಿದ್ದಾರೆ. “ಇದನ್ನು ನಾನು ಒಪ್ಪುವುದಿಲ್ಲ. ಅವರು ಬೇರೆ ತಂಡಕ್ಕೆ ಹುರಿದುಂಬಿಸಿದ ಕಾರಣ ಅವರು ದೇಶಭಕ್ತರಲ್ಲ ಎಂದು ನೀವು ಭಾವಿಸಿದರೆ- ಅವರು ದೇಶಭಕ್ತಿಯ ದಾರಿ ತಪ್ಪಿದ್ದಾರೆಂದು ನೀವು ಭಾವಿಸಿದರೆ ಅವರನ್ನು ಹಿಂದಕ್ಕೆ ಕರೆತರುವ ಧೈರ್ಯ ಮತ್ತು ನಂಬಿಕೆಯನ್ನು ನೀವು ಹೊಂದಿರಬೇಕು. ದಂಡನಾತ್ಮಕ ಕ್ರಮಗಳು ಸಹಾಯ ಮಾಡುವುದಿಲ್ಲ. ಈ ಹಿಂದೆಯೂ ಸಹಾಯ ಮಾಡಿಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮೆಹಬೂಬ ಮುಫ್ತಿಯವರು ಟ್ವೀಟ್ ಮಾಡಿ, “ಗೃಹ ಸಚಿವರು ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಯುಎಪಿಎ ಕೇಸು ಹಾಕುವ ಮೂಲಕ ತಮ್ಮ ಮನ್ ಕಿ ಬಾತ್ ಶುರು ಮಾಡಿದ್ದಾರೆ. ವಿದ್ಯಾವಂತ ಯುವಜನರು ಏಕೆ ಪಾಕಿಸ್ತಾನದೊಂದಿಗೆ ಗುರುತಿಸಿಕೊಳ್ಳಲು ಬಯಸುತ್ತಾರೆ ಎಂಬುದನ್ನು ಅರಿಯುವ ಬದಲು ಭಾರತ ಸರ್ಕಾರ ಅವರ ಮೇಲೆ ಪ್ರತೀಕಾರದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕ್ರಮಗಳು ಅವರನ್ನು ಮತ್ತಷ್ಟು ದೂರ ತಳ್ಳುತ್ತವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, “ಪಾಕ್ ಗೆಲುವನ್ನು ಸಂಭ್ರಮಿಸುತ್ತಿರುವ ಕಾಶ್ಮೀರಿಗಳ ಮೇಲೆ ಇಷ್ಟೊಂದು ಕೋಪ ಏಕೆ? ಕೆಲವರು ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ ಎಂದು ಕೊಲೆಗಡುಕ ಘೋಷಣೆಗಳನ್ನೂ ಕೂಗುತ್ತಿದ್ದಾರೆ. ಜಮ್ಮು ಕಾಶ್ಮೀರ ಛಿದ್ರಗೊಂಡಾಗ ಮತ್ತು ವಿಶೇಷ ಸ್ಥಾನಮಾನವನ್ನು ಕಸಿದುಕೊಂಡಾಗ ಎಷ್ಟು ಮಂದಿ ಸಿಹಿ ಹಂಚಿ ಸಂಭ್ರಮಿಸಿದರು ಎಂಬುದನ್ನು ಯಾರೂ ಮರೆತಿಲ್ಲ. ನೀವು ಒಪ್ಪಬಹುದು ಅಥವಾ ಬಿಡಬಹುದು, ಪಾಕ್ ಗೆದ್ದಾಗ ಆ ತಂಡವನ್ನು ಮೊದಲು ಅಭಿನಂದಿಸಿದ ವಿರಾಟ್ ಕೊಹ್ಲಿಯವರ ಸರಿಯಾದ ಸ್ಫೂರ್ತಿಯನ್ನು ತೆಗೆದುಕೊಳ್ಳೋಣ” ಎಂದು ಮುಫ್ತಿ ಹೇಳಿದ್ದಾರೆ.

ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ ಮೊಹಮ್ಮದ್ ರಿಜ್ವಾನ್‌ರನ್ನು ಅಪ್ಪಿಕೊಂಡು ಅಭಿನಂದಿಸಿದರು. ಮತ್ತೊಬ್ಬ ಆಟಗಾರ ಪಾಕ್ ನಾಯಕ ಬಾಬರ್ ಅಜಂರಿಗೆ ಅಭಿನಂದನೆ ತಿಳಿಸಿದರು. ಈ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ “ನಿಜವಾದ ಕ್ರೀಡಾಸ್ಪೂರ್ತಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ. ಅದೇ ರೀತಿ ಪಂದ್ಯದ ನಂತರ ಭಾರತದ ತಂಡದ ಮೆಂಟರ್ ಮಹೇಂದ್ರ ಸಿಂಗ್ ಧೋನಿ ಪಾಕಿಸ್ತಾನದ ಆಟಗಾರರ ಜೊತೆ ಮಾತುಕತೆ ನಡೆಸಿ ಕ್ರೀಡಾಭಿಮಾನಿಗಳ ಮನಗೆದ್ದಿದ್ದಾರೆ.


ಇದನ್ನೂ ಓದಿ: ಮೊಹಮ್ಮದ್ ಶಮಿ ಪರ ನಿಂತ ರಾಹುಲ್ ಗಾಂಧಿ, ಸಚಿನ್ ತೆಂಡೂಲ್ಕರ್


ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವಿನ ಸಿಹಿ ಉಂಡಿತು. ಆ ಮೂಲಕ ಪಾಕಿಸ್ತಾನ ತಂಡವು ವಿಶ್ವಕಪ್ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಭಾರತದ ಎದುರು ಜಯ ದಾಖಲಿಸಿತು. ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್‌ ಅದ್ಭುತ ಜೊತೆಯಾಟವಾಡಿದರು.

ಪಾಕ್ ಪಂದ್ಯ ಗೆದ್ದ ನಂತರ ವಿರಾಟ್ ಕೊಹ್ಲಿ ಪಾಕ್ ಆಟಗಾರರನ್ನು ಅಭಿನಂದಿಸುತ್ತಿರುವ ಫೋಟೊ ಹಂಚಿಕೊಂಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ “Spirit of Cricket” ಎಂದು ಬರೆದಿದೆ.


ಇದನ್ನೂ ಓದಿ: ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...