Homeಮುಖಪುಟಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

ಕೇರಳ: 24 ವರ್ಷದ ಯುವತಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ

- Advertisement -
- Advertisement -

15 ವರ್ಷದ ಬಾಲಕನೊಬ್ಬ 23 ವರ್ಷದ ಯುವತಿಯನ್ನು ಬಾಳೆ ತೋಟಕ್ಕೆ ಎಳೆದೊಯ್ದು, ಯುವತಿಯ ಮುಖಕ್ಕೆ ಕಲ್ಲಿನಿಂದ ಹೊಡೆದು ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನಷ ಘಟನೆ ಕೇರಳದ ಕುಂಡೊಟ್ಟಿಯ ಕೂಟ್ಟುಕ್ಕರ ಎಂಬಲ್ಲಿ ಸೋಮವಾರ ನಡೆದಿದೆ.

ಜಿಲ್ಲಾ ಮಟ್ಟದ ಜೂಡೋ ಚಾಂಪಿಯನ್ ಆಗಿರುವ 10 ನೇ ತರಗತಿ ವಿದ್ಯಾರ್ಥಿಯೇ ಆರೋಪಿ ಎಂದು ಯುವತಿ ನೀಡಿದ ವಿವರಣೆ ಮತ್ತು ಸಿಸಿಟಿವಿ ದೃಶ್ಯಗಳಿಂದ ಗುರುತಿಸಲಾಗಿತ್ತು. ಮಂಗಳವಾರ ಆತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಾಲಕ ತಪ್ಪೊಪ್ಪಿಕೊಂಡಿದ್ದಾದ್ದು, ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ವಕೀಲನಿಂದ ಅತ್ಯಾಚಾರ ಯತ್ನ; ಆರೋಪಿ ಬಂಧನ ವಿಳಂಬ ಪ್ರಶ್ನಿಸಿ ಸಂತ್ರಸ್ತೆ ವಿಡಿಯೊ

ಸೋಮವಾರ ಮಧ್ಯಾಹ್ನ 12.45ರ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ತಾನು ಓದುತ್ತಿರುವ ಕುಂಡೊಟ್ಟಿಯಲ್ಲಿರುವ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ತನ್ನ ಮನೆಯಿಂದ ಕೂಟ್ಟುಕ್ಕರ ಜಂಕ್ಷನ್‌ಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಯುವತಿಯನ್ನು ಬಾಲಕ ಹಿಂಬಾಲಿಸಿಕೊಂಡು ಹಿಂದಿನಿಂದ ಹಿಡಿದು ಬಾಳೆ ತೋಟಕ್ಕೆ ಎಳೆದೊಯ್ದು ಅತ್ಯಾಚಾರ ಯತ್ನಿಸಿದ್ದಾನೆ. ಈ ವೇಳೆ ಯುವತಿಯು ವಿರೋಧಿಸಿದಾಗ ಕಲ್ಲಿನಿಂದ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ, ಯುವತಿ ಮೇಲಂಗಿಯನ್ನು ಬಳಸಿ ಕೈಗಳನ್ನು ಕಟ್ಟಿದ್ದಾನೆ.

“ಬಾಲಕ, ತನ್ನ ಮೇಲೆ ದಾಳಿ ಮಾಡಲು ಮತ್ತೊಂದು ಕಲ್ಲನ್ನು ಹುಡುಕುತ್ತಿದ್ದಾಗ, ಯುವತಿ ಅವನ ಹಿಡಿತದಿಂದ ತಪ್ಪಿಕೊಂಡು ಹತ್ತಿರದ ಮನೆಗೆ ಓಡಿಹೋದ್ದಾರೆ. ಮನೆಯವರು ಬಾಲಕನ್ನು ಬೆದರಿಸಿದಾಗ ಆತ ಓಡಿಹೋಗಿದ್ದಾನೆ” ಎಂದು ಕುಂಡೊಟ್ಟಿ ಪುರಸಭೆಯ ಕೂಟ್ಟುಕ್ಕರ ವಾರ್ಡ್ ಕೌನ್ಸಿಲರ್ ಉಮ್ಮರ್ ಫಾರೂಕ್ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

“ಯುವತಿಯ ಮುಖ ಊದಿಕೊಂಡಿತ್ತು. ದಾಳಿಕೋರ ಯುವತಿಯ ಉಡುಪನ್ನು ಹರಿದು ಹಾಕಿದ್ದ. ಸಂತ್ರಸ್ತ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಕುಂಡೊಟ್ಟಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಅವರನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದೆವು” ಎಂದು ಫಾರೂಕ್ ತಿಳಿಸಿದ್ದಾರೆ.

ಯುವತಿ ಸಾಮಾನ್ಯವಾಗಿ ಕಂಪ್ಯೂಟರ್ ಸೆಂಟರ್‌ಗೆ ಹೋಗಲು ಜಂಕ್ಷನ್‌ನಲ್ಲಿ ಬಸ್‌ ಹತ್ತುತ್ತಾರೆ. ಅವರ ಮನೆಯಿಂದ, ಕೊಟ್ಟುಕ್ಕರ ಜಂಕ್ಷನ್‌ಗೆ ಹೋಗಲು ಅವರು ಒಂದು ಕಿಲೋಮೀಟರ್ ನಡೆಯಬೇಕು. ಜಂಕ್ಷನ್ ತಲುಪಲು ಅವರು ಸಾಮಾನ್ಯವಾಗಿ ಭತ್ತದ ಗದ್ದೆಗಳ ಮಧ್ಯೆ ಇರುವ ಕಾಲುದಾರಿಯಲ್ಲಿ ಓಡಾಡುತ್ತಾರೆ ಎಂದು ಫಾರೂಪ್ ವಿವರಿಸಿದ್ದಾರೆ.

ದಾಳಿಕೋರ ಹೇಗಿದ್ದ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸಂತ್ರಸ್ತೆ ವಿವರಿಸಿದ್ದಾರೆ. ಜೊತೆಗೆ ಆತನನ್ನು ಕಂಡರೆ ಗುರುತಿಸಬಹುದು  ಮತ್ತು ಮಲಯಾಳಂನಲ್ಲಿ ಮಾತನಾಡಿದ್ದನು. ಅವನನ್ನು ಕೆಲವು ಬಾರಿ ಈ ಪ್ರದೇಶದಲ್ಲಿ ನೋಡಿದ್ದೇನೆ ಎಂದು ತಿಳಿಸಿದ್ದರು.

ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಆತ ತಾನು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಕೊಂಡೊಟ್ಟಿ ಇನ್ಸ್‌ಪೆಕ್ಟರ್ ಪ್ರಮೋದ್ ಎಂ ಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...