Homeಮುಖಪುಟಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.

ಪ್ರಕರಣದಲ್ಲಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿರುದ್ಧ ಆರ್ಯನ್ ಖಾನ್‌ಗೆ ಮತ್ತು ಸಹ-ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಬಾಂಬೆ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಮೂರು ದಿನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಇದನ್ನೂ ಓದಿ: ಆರ್ಯನ್ ಖಾನ್ ಬಂಧನದಲ್ಲಿರುವ ಹೊಸ ವಿಡಿಯೋ ಟ್ವೀಟ್ ಮಾಡಿದ ಶಿವಸೇನೆ ಸಂಸದ!

ಆರ್ಯನ್ ಖಾನ್ ಪರ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದರು. ಆರ್ಯನ್ ಖಾನ್ ಬಳಿ ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ ಎಂಬುದನ್ನು ಒತ್ತಿ ಹೇಳಿದ್ದರು.

ಆದರೆ, ಎನ್‌ಸಿಬಿ ಮಾತ್ರ ಆರ್ಯನ್ ಖಾನ್ ಕೂಡ ಈ ಪಿತೂರಿಯ ಭಾಗವಾಗಿದ್ದರು. ಅವರ ವಾಟ್ಸಾಪ್ ಚಾಟ್‌ಗಳು ಅಕ್ರಮ ಡ್ರಗ್ ದಂಧೆಯಲ್ಲಿ ಅವರು ತೊಡಗಿಸಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ವಾದಿಸಿದ್ದರು.

ಗುರುವಾರ ಹೈಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಆರ್ಯನ್ ಜಾಮೀನು ಅರ್ಜಿಯನ್ನು ವಿರೋಧಿಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಕೀಲ ಎಎಸ್‌ಜಿ ಅನಿಲ್ ಸಿಂಗ್, ’ಅರ್ಜಿದಾರ ಆರ್ಯನ್ ಖಾನ್ ಮೊದಲ ಗ್ರಾಹಕರಲ್ಲ, ಆದರೆ ಕಳೆದ ಎರಡು ವರ್ಷಗಳಿಂದ ನಿಯಮಿತವಾಗಿ ಡ್ರಗ್ಸ್ ಸೇವಿಸುತ್ತಿದ್ದಾರೆ” ಎಂದರು.

“ಒಬ್ಬ ವ್ಯಕ್ತಿಯು ಮಾದಕ ದ್ರವ್ಯವನ್ನು ಸೇವಿಸದಿರುವ ಪ್ರಕರಣವಿದೆ. ಆದರೆ, ಅವರು ಅದನ್ನು ಹೊಂದಿದ್ದಲ್ಲಿ, ಅವರ ಮೇಲೆ NDPS ಕಾಯಿದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು. ಆರೋಪಿ ಆರ್ಯನ್ ಪ್ರಜ್ಞಾಪೂರ್ವಕವಾಗಿ ಕಳ್ಳಸಾಗಣೆಯನ್ನು ಮಾಡಿರುವುದು ಕಂಡುಬಂದಿದೆ” ಎಂದು ಸಿಂಗ್ ವಾದಿಸಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ನಾಳೆಯೊಳಗೆ ಲಭ್ಯವಾಗುವುದರಿಂದ ಆರೋಪಿಗಳು ಇಂದು ರಾತ್ರಿ ಜೈಲಿನಲ್ಲೆ ಉಳಿಯಬೇಕಾಗುತ್ತದೆ.


ಇದನ್ನೂ ಓದಿ: ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...