Homeಸಿನಿಮಾಕ್ರೀಡೆ’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

’ನಾನು ಜನಾಂಗಿಯ ದ್ವೇಷಿಯಲ್ಲ’: ವಿವಾದಕ್ಕೆ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಸ್ಪಷ್ಟನೆ

- Advertisement -
- Advertisement -

ಟಿ-20 ವಿಶ್ವಕಪ್ ಕ್ರಿಕೆಟ್‌ನಲ್ಲಿ ಪಂದ್ಯಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ (Black Lives Matters) ಚಳವಳಿಗೆ ಬೆಂಬಲ ಸೂಚಿಸುವುದು ನಡೆಯುತ್ತಿದೆ. ಆದರೆ, ಅ.26 ರಂದು ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವೆ ನಡೆದ ಪಂದ್ಯದ ವೇಳೆ ಚಳವಳಿಗೆ ಬೆಂಬಲ ಸೂಚಿಸಿ ಮಂಡಿಯೂರಲು ನಿರಾಕರಿಸಿ ವಿವಾದಕ್ಕೆ ಕಾರಣರಾಗಿದ್ದ ಕ್ವಿಂಟನ್ ಡಿ ಕಾಕ್, ’ನಾನು ಜನಾಂಗಿಯ ದ್ವೇಷಿಯಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

Black Lives Matters ಚಳವಳಿಗೆ ಮಂಡಿಯೂರಿ ಬೆಂಬಲ ನೀಡದಕ್ಕೆ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

ಪಂದ್ಯದ ಆರಂಭಕ್ಕೂ ಮುನ್ನ ಬ್ಲ್ಯಾಕ್ ಲೈವ್ಸ್​ ಮ್ಯಾಟರ್ಸ್ ಚಳವಳಿಗೆ ಬೆಂಬಲ ವ್ಯಕ್ತಪಡಿಸಲು ಕ್ರಿಕೆಟ್  ದಕ್ಷಿಣ ಆಫ್ರಿಕಾ ಸೂಚಿಸಿತ್ತು. ಇದನ್ನು ವಿರೋಧಿಸಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ ವೆಸ್ಟ್ ಇಂಡೀಸ್ ವಿರುದ್ದ ಆಡಿರಲಿಲ್ಲ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ‘Black Lives Matters’ ಬೆಂಬಲಿಸಿ ಮಂಡಿಯೂರಿದ ಭಾರತೀಯ ಕ್ರಿಕೆಟಿಗರು: ಮಿಶ್ರ ಪ್ರತಿಕ್ರಿಯೆ

ಕ್ರಿಕೆಟ್ ದಕ್ಷಿಣ ಆಫ್ರಿಕಾದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವ ಹೇಳಿಕೆಯಲ್ಲಿ ತಮ್ಮ ಸಹ ಆಟಗಾರರು ಮತ್ತು ಅಭಿಮಾನಿಗಳಲ್ಲಿ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕ್ವಿಂಟನ್ ಡಿ ಕಾಕ್ ಕ್ಷಮೆಯಾಚಿಸಿದ್ದಾರೆ.

’ನಿಮಗೆ ನೋವು, ಗೊಂದಲ ಮತ್ತು ಕೋಪ ಉಂಟುಮಾಡಿದಕ್ಕೆ ನನ್ನನ್ನು ಕ್ಷಮಿಸಿ. ವರ್ಣಭೇದ ನೀತಿಯ ವಿರುದ್ಧ ಮಂಡಿಯೂರುವುದರ ಪ್ರಾಮುಖ್ಯತೆಯನ್ನು ತಿಳಿದುಕೊಂಡಿದ್ದೇನೆ. ನಾನು ಮಂಡಿಯೂರುವುದರಿಂದ ಇತರರಿಗೆ ತಿಳುವಳಿಕೆ ಬರುವುದಾದರೇ, ಇತರರ ಜೀವನ ಸುಧಾರಿಸುವುದಾದರೇ ಮಂಡಿಯೂರುವುದನ್ನು ನಾನು ಸಂತೋಷದಿಂದ ಮಾಡುತ್ತೇನೆ’ ಎಂದಿದ್ದಾರೆ.

“ತಪ್ಪು ತಿಳುವಳಿಕೆಯಿಂದಾಗಿ ನನ್ನನ್ನು ಜನಾಂಗೀಯ ದ್ವೇಷಿ ಎಂದು ಕರೆಯುವುದು ನನಗೆ ತುಂಬಾ ನೋವುಂಟುಮಾಡುತ್ತದೆ. ಇದು ನನ್ನ ಕುಟುಂಬವನ್ನು ದುಖಃಕ್ಕೆ ತಳ್ಳುತ್ತದೆ. ನನ್ನ ಗರ್ಭಿಣಿ ಹೆಂಡತಿಗೆ ನೋವುಂಟುಮಾಡುತ್ತದೆ. ನಾನು ಜನಾಂಗೀಯವಾದಿ ಅಲ್ಲ. ಇದು ನನಗೆ ಮತ್ತು ನನ್ನನ್ನು ತಿಳಿದಿರುವವರಿಗೆ ಅರ್ಥವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಯುಎಇನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯ ಹನ್ನೆರಡರ ಹಂತದಲ್ಲಿ ಭಾನುವಾರ (ಅ.24) ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡಿದವು. ಪಂದ್ಯದ ಆರಂಭಕ್ಕೂ ಮುನ್ನ ಬ್ಲಾಕ್‌ ಲೈವ್ಸ್‌ ಮ್ಯಾಟರ್ಸ್ Black Lives Matters ಚಳಿವಳಿಗೆ ಬೆಂಬಲ ಸೂಚಿಸಿ ಭಾರತ ಮತ್ತು ಪಾಕ್ ಕ್ರಿಕೆಟ್‌ ತಂಡಗಳು ಮಂಡಿಯೂರಿ ಗಮನ ಸೆಳೆದಿದ್ದವು.

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಮುಂದಾಳತ್ವದಲ್ಲಿ ಭಾರತದ ಆಟಗಾರರು ಮಂಡಿಯೂರಿ ಚಳವಳಿಗೆ ಬೆಂಬಲ ಸೂಚಿಸಿದಾಗ ಪಾಕಿಸ್ತಾನದ ಆಟಗಾರರೂ ತಮ್ಮ ಎದೆಯ ಮೇಲೆ ಕೈಯಿಟ್ಟು ಅದಕ್ಕೆ ಬೆಂಬಲಿಸಿದ್ದರು.


 ಇದನ್ನೂ ಓದಿ:ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...