HomeಮುಖಪುಟRBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಶಕ್ತಿಕಾಂತ ದಾಸ್‌ ಮರುನೇಮಕ

RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಶಕ್ತಿಕಾಂತ ದಾಸ್‌ ಮರುನೇಮಕ

- Advertisement -
- Advertisement -

RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಶಕ್ತಿಕಾಂತ ದಾಸ್‌ರವರನ್ನು ಸರ್ಕಾರ ಮರುನೇಮಕ ಮಾಡಿದೆ. ಡಿಸೆಂಬರ್ 2024ರವರೆಗೆ ಅವರು ಅದೇ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರನ್ನು ಒಳಗೊಂಡ ಕ್ಯಾಬಿನೆಟ್ ಸಮಿತಿ ಗುರುವಾರ ಸಂಜೆ ತಿಳಿಸಿದೆ.

ಶಕ್ತಿಕಾಂತ್‌ ದಾಸ್‌ರವರನ್ನು ಡಿಸೆಂಬರ್ 10, 2021ರಿಂದ ಡಿಸೆಂಬರ್ 10,2024ರವರೆಗೆ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಯಾವುದೇ ಮೊದಲ ಆದೇಶದವರೆಗೆ RBI ಗವರ್ನರ್‌ ಆಗಿ ನೇಮಿಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿದೆ. ಈ ಮೊದಲು ಅವರು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ. ಈ ಮೊದಲಿದ್ದ ಊರ್ಜಿತ್ ಪಟೇಲ್‌ರವರು ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಈ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದರು. ಅದಕ್ಕೂ ಮೊದಲು ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಂ ರಾಜನ್ ಸಹ ಮೋದಿ ಸರ್ಕಾರದ ನೋಟು ಅಮಾನ್ಯೀಕರಣ ಸೇರಿ ಹಲವು ಕ್ರಮಗಳನ್ನು ವಿರೋಧಿಸಿದ್ದರು.


ಇದನ್ನೂ ಓದಿ: ತಮಿಳುನಾಡು ಸರ್ಕಾರದ ಆರ್ಥಿಕ ಸಲಹಾ ಮಂಡಳಿಯ ಭಾಗವಾದ ರಘುರಾಂ ರಾಜನ್, ಎಸ್ತರ್ ಡುಫ್ಲೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...