Homeಮುಖಪುಟದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

ದಾಸ್ತಾನಿದ್ದರೂ ಶಾಲಾ ಮಕ್ಕಳಿಗೆ ಸಾರವರ್ಧಿತ ಊಟ ನೀಡದ ರಾಜ್ಯ ಸರ್ಕಾರಗಳು: ಕೇಂದ್ರ ಶಿಕ್ಷಣ ಸಚಿವಾಲಯ ಅಸಮಾಧಾನ

- Advertisement -
- Advertisement -

ಸಾಕಷ್ಟು ದಾಸ್ತಾನುಗಳಿದ್ದರೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಸಾರವರ್ಧಿತ (fortified) ಅಕ್ಕಿಯ ಬಳಕೆಯನ್ನು ಕಡಿಮೆ ಮಾಡಿರುವ ಬಗ್ಗೆ ಒಕ್ಕೂಟ ಸರ್ಕಾರವು ಅಸಮಾಧಾನ ವ್ಯಕ್ತಪಡಿಸಿದ್ದು, ಸಾರವರ್ಧಿತ ಅಕ್ಕಿಯ ಬಳಕೆಯನ್ನು ತ್ವರಿತವಾಗಿ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಒಕ್ಕೂಟ ಸರ್ಕಾರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 20 ರಂದು ಈ ವಿಷಯದ ಕುರಿತು ರಾಜ್ಯಗಳಿಗೆ ಪತ್ರ ಬರೆದಿದೆ. ಪತ್ರದಲ್ಲಿ, “ಪ್ರಧಾನ ಮಂತ್ರಿಗಳು ನಿಗದಿಪಡಿಸಿದ ಗುರಿಯನ್ನು ಗಮನದಲ್ಲಿಟ್ಟುಕೊಂಡು, ಸಾರವರ್ಧಿತ ಅಕ್ಕಿ ದಾಸ್ತಾನು ಬಳಕೆಯನ್ನು ತ್ವರಿತಗೊಳಿಸಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಂಟಿ ಕಾರ್ಯದರ್ಶಿ ಆರ್‌ಸಿ ಮೀನಾ ಅವರು ರಾಜ್ಯ ಶಿಕ್ಷಣ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

ಮಧ್ಯಾಹ್ನದ ಊಟದ ಯೋಜನೆಯನ್ನು ಸೆಪ್ಟೆಂಬರ್‌ನಲ್ಲಿ ಪಿಎಂ ಪೋಷಣ್ ಎಂದು ಮರುನಾಮಕರಣ ಮಾಡಲಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು 2024 ರ ವೇಳೆಗೆ ಪಡಿತರ ಯೋಜನೆ ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಅಡಿಯಲ್ಲಿ ಸಾರೀಕೃತ ಅಕ್ಕಿಯನ್ನು ಮಾತ್ರವೇ ವಿತರಿಸಲಾಗುವುದು ಎಂದು ಘೋಷಿಸಿದ್ದರು.

“ಬಡ ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಅಗತ್ಯ ಪೋಷಕಾಂಶಗಳ ಕೊರತೆಯು ಕಂಡುಬರುತ್ತಿದೆ. ಇದು ಅವರ ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಪ್ರಮುಖ ಅಡೆತಡೆಗಳನ್ನು ಒಡ್ಡುತ್ತದೆ…” ಎಂದು ಪ್ರಧಾನಿ ಹೇಳಿದ್ದರು.

ಸರ್ಕಾರದ ದಾಖಲೆಗಳ ಪ್ರಕಾರ, ಪಿಎಂ ಪೋಷಣ್ ಮತ್ತು ಐಸಿಡಿಎಸ್ ಯೋಜನೆಗಳ ಅಡಿಯಲ್ಲಿ ಕ್ರಮವಾಗಿ 1.05 ಮತ್ತು 6.36 ಎಲ್ಎಂಟಿ (ಲಕ್ಷ ಮೆಟ್ರಿಕ್ ಟನ್) ಸಾರವರ್ಧಿತ ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ. ಆದರೆ ಇದುವರೆಗೆ ಕ್ರಮವಾಗಿ 0.57 ಎಲ್‌ಎಂಟಿ ಮತ್ತು 2.09 ಎಲ್‌ಎಂಟಿ ಮಾತ್ರ ರಾಜ್ಯಗಳಿಂದ ಬಳಲ್ಪಟ್ಟಿವೆ. PM ಪೋಷಣ್ ಅಡಿಯಲ್ಲಿ ಅಕ್ಟೋಬರ್-ಮಾರ್ಚ್ ಅವಧಿಯಲ್ಲಿ ಒಟ್ಟು 13.9 LMT ಅಕ್ಕಿಯ ಹಂಚಿಕೆಯಾಗಿದೆ.

‘‘ಸಾಕಷ್ಟು ಪ್ರಮಾಣದಲ್ಲಿ ಸಾರವರ್ಧಿತ ಅಕ್ಕಿ ಲಭ್ಯವಿದ್ದರೂ” ಶಿಕ್ಷಣ ಸಚಿವಾಲಯದ ನಿರ್ದೇಶನಗಳ ಕೊರತೆಯಿಂದಾಗಿ ರಾಜ್ಯಗಳು ತಮ್ಮ ಪಾಲನ್ನು ಬಳಸುತ್ತಿಲ್ಲ ಎಂದು FCI ಒಕ್ಕೂಟ ಸರ್ಕಾರಕ್ಕೆ ತಿಳಿಸಿದೆ.

ಇದನ್ನೂ ಓದಿ: ‘ಪಿಎಂ ಪೋಶನ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...