Homeಮುಖಪುಟಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ: ಪ್ರಚೋದನಕಾರಿ ಹೇಳಿಕೆ ನೀಡಿದ ಬಜರಂಗದಳ ಮುಖಂಡ

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ'

- Advertisement -
- Advertisement -

‘ಗೋದ್ರಾ ಆದಮೇಲೆ ಏನಾಯ್ತು ಗೊತ್ತ? 2002ರ ಇತಿಹಾಸ ನೆನಪಿಸಿಕೊಳ್ಳಿ. 48 ಜನ ರಾಮಭಕ್ತರನ್ನು ಕೊಂದ ಮೇಲೆ ಆದ ಪ್ರತಿಕಾರವಿದೆಯಲ್ಲ ಅದು ಎಲ್ಲೂ ಆಗಬಾರದು. ಅದಕ್ಕಾಗಿ ನೀವು ದಯವಿಟ್ಟು ಮನೆಯಲ್ಲಿ ದಿನಕ್ಕೆ ಐದು ಸಾರಿ ನಮಾಜ್‌ ಮಾಡಿಕೊಂಡಿರಿ’ ಎಂದು ಬಹಿರಂಗ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಉಲ್ಲಾಸ್‌ ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಜಂಟಿಯಾಗಿ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಆಯೋಜಿಸಿದ್ದ ಬಹಿರಂಗ ಕಾರ್ಯಕ್ರಮದಲ್ಲಿ ಕೋಮುಸೌಹಾರ್ದತೆ ಕದಡುವಂತಹ ಹೇಳಿಕೆ ನೀಡಿದ್ದಾರೆ.

‘ನಾವು ಮೆರವಣಿಗೆ ಕರೆದುಕೊಂಡು ಬರುವುದು ವರ್ಷಕ್ಕೊಂದು ಸಲ. ಇದು ಕೇವಲ ಟ್ರೇಲರ್‌ ಅಷ್ಟೆ. ಇನ್ನೆರಡು ತಿಂಗಳು ಕಾಯಿರಿ. ಹನುಮ ಜಯಂತಿ ದಿನ ಪೂರ್ತಿ ಪಿಕ್ಚರ್‌ ತೋರಿಸುತ್ತೇವೆ. ಇನ್ನು ಮುಂದೆ ಪ್ರತಿ ಆರು ತಿಂಗಳಿಗೊಮ್ಮೆ ಆರ್‌ಎಸ್‌ಎಸ್, ಬಜರಂಗದಳ ಮತ್ತು ವಿಎಚ್‌ಪಿ ನಾಯಕತ್ವದಲ್ಲಿ ಪಿಕ್ಚರ್‌ ತೋರಿಸುತ್ತೇವೆ’ ಎನ್ನುವ ಮೂಲಕ ಮತೀಯ ದ್ವೇಷಕಾರಿದ್ದಾರೆ.

ಬಹಿರಂಗ ಸಭೆಗೂ ಮೊದಲು ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯ ಮತ್ತು ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ್ದಾರೆ’ ಎಂದು ಸುನ್ನಿ ಮುಸ್ಲಿಂ ಜಮಾತ್‌ ಕಮಿಟಿ ಆರೋಪಿಸಿದೆ.

ಈ ಪ್ರಕರಣ ಕುರಿತಂತೆ ತಹಶೀಲ್ದಾರರಿಗೆ ದೂರು ನೀಡಿರುವ ಮುಸ್ಲಿಂ ಜಮಾತ್ ಕಮಿಟಿಯು, ‘ಇಸ್ಲಾಂ ಧರ್ಮ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಘೋಷಣೆ ಕೂಗಿ, ಜಾತಿ ನಿಂದನೆ ಮಾಡಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯದ ಬಗ್ಗೆ ಪ್ರಚೋದನಕಾರಿ, ಅವಹೇಳನಕಾರಿ ಘೋಷಣೆಗಳನ್ನು ಮತ್ತು ಬೆದರಿಕೆಯ ಹೇಳಿಕೆಗಳನ್ನು ನೀಡಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿಎಚ್‌ಪಿ ಬಜರಂಗದಳ ನಾಯಕರ ಮೇಲೆ ಕಠಿಣವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರಸೀಕೆರೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ತಿಮ್ಮಯ್ಯನವರು, “ಎರಡೂ ಕಡೆಯಿಂದಲೂ ಕೋಮುವಾದಿ ಭಾಷಣಗಳು ನಡೆದಿವೆ. ಮುಸ್ಲಿಂ ಗುಂಪುಗಳು ಸಹ ಬಜರಂಗದಳದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ಕುರಿತು ಒಟ್ಟು ಎರಡೂ ಕಡೆಯವರ ಮೇಲೆ ಒಟ್ಟು 7 ಪ್ರಕರಣಗಳು ದಾಖಲಾಗಿವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...