Homeಕರ್ನಾಟಕಉಪಚುನಾವಣೆ: ಅಪ್ಪು ಅಗಲಿಕೆಯ ನೋವಿನ ನಡುವೆ ಮತದಾನ

ಉಪಚುನಾವಣೆ: ಅಪ್ಪು ಅಗಲಿಕೆಯ ನೋವಿನ ನಡುವೆ ಮತದಾನ

- Advertisement -
- Advertisement -

ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್‌, ವಿಜಯಪುರ ಜಿಲ್ಲೆಯ ಸಿಂದಗಿ ಸೇರಿ ರಾಷ್ಟ್ರಾದ್ಯಂತ ಇಂದು (ಅಕ್ಟೋಬರ್‌ 30) ಉಪಚುನಾವಣೆ ನಡೆಯುತ್ತಿದೆ. ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯ ನೋವಿನ ನಡುವೆ ಈ ಕ್ಷೇತ್ರಗಳ ಜನತೆ ಮತ ಚಲಾವಣೆ ಮಾಡುತ್ತಿದ್ದಾರೆ.

13 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಸೇರಿ ಒಟ್ಟು 29 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ನವೆಂಬರ್‌ 2ರಂದು ಫಲಿತಾಂಶ ಹೊರಬೀಳಲಿದೆ.

ಕರ್ನಾಟಕದ ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾಗಿದ್ದು, ಹಾನಗಲ್‌ ವಿಧಾನಸಭಾ ಕ್ಷೇತ್ರದ ಗೆಲುವು ಪ್ರತಿಷ್ಠೆಯದ್ದಾಗಿದೆ. ಒಟ್ಟು 13 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಆರು ಮಂದಿ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಒಟ್ಟು 4,39,148 ಮತದಾರರಿದ್ದು, 230 ಸರ್ವೀಸ್‌ ಓಟುಗಳಿವೆ. 560 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯುತ್ತಿದೆ.

ಸಿಂದಗಿಯ ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿಯವರ ನಿಧನದಿಂದಾಗಿ ಚುನಾವಣೆ ನಡೆಯುತ್ತಿದೆ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ (ಸಿಂದಗಿ), ಮಾಜಿ ಶಾಸಕ ಶ್ರೀನಿವಾಸ ಮಾನೆ (ಹಾನಗಲ್‌) ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ರಮೇಶ್‌ ಬೂಸನೂರ್‌‌ (ಸಿಂಧಗಿ), ಶಿವರಾಜ್‌ ಸಜ್ಜನರ್‌ (ಹಾನಗಲ್‌) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮುಸ್ಲಿಂ ಅಭ್ಯರ್ಥಿಗಳನ್ನು ಜೆಡಿಎಸ್‌ ಎರಡೂ ಕ್ಷೇತ್ರಗಳಲ್ಲೂ ಕಣಕ್ಕಿಳಿಸಿದೆ. ನಾಜಿಯಾ ಶಕೀಲ್‌ ಅಹಮದ್ ಅಂಗಡಿ (ಸಿಂದಗಿ), ನಿಯಾಜ್‌ ಶೈಖ್‌ (ಹಾನಗಲ್‌) ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾರೆ. ಪುನೀತ್ ರಾಜ್‌ಕುಮಾರ್‌ ನಿಧನದಿಂದಾಗಿ ಈ ಕ್ಷೇತ್ರಗಳ ಜನರು ಶೋಕಾಚರಣೆಯ ನಡುವೆ ಮತ ಚಲಾವಣೆ ಮಾಡುತ್ತಿದ್ದಾರೆ.

ಹಾನಗಲ್‌ ಕ್ಷೇತ್ರದ ನೋಟಾ ಮತದಾನದ ಜಾಗೃತಿ ಕಾರ್ಯಕರ್ತ ಪ್ರಶಾಂತ್‌ ಮುಚ್ಚಂಡಿಯವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಪುನೀತ್‌  ಅವರ ನಿಧನವು ಕ್ಷೇತ್ರದ ಜನರಲ್ಲಿ ನೋವು ತಂದಿದೆ. ಅನೇಕರು ಕಣ್ಣೀರು ಹಾಕಿದ್ದಾರೆ. ಆದರೂ ಮತದಾನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಶಾಂತಿಯುತವಾಗಿ ಮತ ಚಲಾವಣೆ ಮಾಡುತ್ತಿದ್ದಾರೆ” ಎಂದರು.

“ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಕಂಡು ಬರುತ್ತಿಲ್ಲ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಹೊರಗಿನವರು ಆಗಿರುವುದು ಇದಕ್ಕೆ ಕಾರಣ. ಬಹಿರಂಗ ಪ್ರಚಾರ ಮುಗಿದ ಮೇಲೂ ಅನೇಕರು ಇಲ್ಲಿಯೇ ಉಳಿದಿದ್ದಾರೆ. ಹಣದ ಹೊಳೆಯೇ ಹರಿದಿದೆ” ಎಂದು ಆರೋಪಿಸಿದರು.


ಇದನ್ನೂ ಓದಿರಿ: ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...