Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

- Advertisement -
- Advertisement -

ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯವು ಪತ್ರಕರ್ತೆ, ದಿಟ್ಟ ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಹತ್ಯೆಗೆ ಸಂಬಂಧಿಸಿದಂತೆ ಉಗ್ರ ಬಲಪಂಥೀಯ ಸಂಘಟನೆಯ 17 ಜನರ ಮೇಲೆ ಕೊಲೆ, ಸಂಘಟಿತ ಅಪರಾಧ ಕೃತ್ಯಗಳ ಅಡಿ ದೋಷಾರೋಪ ಮಾಡಿದೆ.

ಕ್ರಿಮಿನಲ್ ಪಿತೂರಿ ಮತ್ತು ಕ್ರಿಮಿನಲ್ ಉದ್ದೇಶದಿಂದ ನಡೆಸಿದ ಅಪರಾಧಗಳಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೋಷಾರೋಪಗಳನ್ನು ದಾಖಲಿಸಲಾಗಿದೆ. ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ 2000 ಮತ್ತು ಶಸ್ತ್ರಾಸ್ತ್ರ ಕಾಯಿದೆ, 1959ರ ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಲಾಗಿದೆ. ನ್ಯಾಯಾಲಯವು ಡಿಸೆಂಬರ್ 8ರಂದು ವಿಚಾರಣೆಯನ್ನು ಪ್ರಾರಂಭಿಸಲು ದಿನಾಂಕವನ್ನು ನಿಗದಿಪಡಿಸಲಿದೆ.

ವಿವಿಧ ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳಿಂದ ಬಂದ 17 ಆರೋಪಿಗಳನ್ನು ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದೆ. ಲಂಕೇಶ್ ಅವರನ್ನು “ಹಿಂದೂ ವಿರೋಧಿ” ಎಂದು ಟಾರ್ಗೆಟ್‌ ಮಾಡಲಾಗಿತ್ತು.

ಬೆಂಗಳೂರು ಸೆಂಟ್ರಲ್ ಜೈಲು, ಮುಂಬೈನ ಆರ್ಥರ್ ರೋಡ್ ಜೈಲು ಮತ್ತು ಪುಣೆಯ ಯರವಾಡ ಜೈಲಿನಲ್ಲಿರುವ 17 ಜನರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳು ತಪ್ಪೊಪ್ಪಿಕೊಂಡಿಲ್ಲ.

ಸುಗಮ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು, “ನಿರ್ದಿಷ್ಟ ಆದೇಶಗಳಿಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಯಾವುದೇ ಜೈಲಿಗೆ ವರ್ಗಾಯಿಸಬೇಡಿ” ಎಂದು ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. 

ಎಸ್‌ಐಟಿ ಸುಮಾರು ಮೂರು ವರ್ಷಗಳ ಹಿಂದೆ ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳು ಸಲ್ಲಿಸಿದ ವಿವಿಧ ಅರ್ಜಿಗಳು, ಅವರು ವಿವಿಧ ಜೈಲುಗಳಲ್ಲಿರುವುದು ಮತ್ತು ಕೋವಿಡ್ ಪರಿಸ್ಥಿತಿಯಿಂದಾಗಿ ವಿಚಾರಣೆಯ ಪ್ರಾರಂಭವು ವಿಳಂಬವಾಯಿತು. ಆರೋಪಗಳನ್ನು ರೂಪಿಸುವ ಹಂತದಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. 17 ಆರೋಪಿಗಳು ಅಂತಿಮವಾಗಿ ಬೆಂಗಳೂರು ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿದೆ.

ಆರೋಪಿಗಳು: ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).


ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯೆ ಆರೋಪಿ ವಿರುದ್ಧದ KCOCA ರದ್ದುಗೊಳಿಸುವ ಕುರಿತ ಆದೇಶ ಕಾಯ್ದಿರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...