Homeಮುಖಪುಟಹರಿಯಾಣ: ದೆಹಲಿ ಸಮೀಪದ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ, ಬಳಕೆ ನಿಷೇಧ

ಹರಿಯಾಣ: ದೆಹಲಿ ಸಮೀಪದ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ, ಬಳಕೆ ನಿಷೇಧ

- Advertisement -
- Advertisement -

ದೀಪಾವಳಿ ಹಬ್ಬಕ್ಕೆ ಕೆಲವು ದಿನಗಳಿರುವಾಗ ದೆಹಲಿ ಸಮೀಪದ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ ಎಂದು ಹರಿಯಾಣ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಅಂಗಡಿಗಳಲ್ಲಿ ಮಾತ್ರವಲ್ಲ, ಆನ್‌ಲೈನ್ ಶಾಪಿಂಗ್ ಸೈಟ್‌ಗಳು ಸಹ ಅಂತಹ ರೀತಿಯ ಯಾವುದೇ ವಸ್ತುಗಳನ್ನು ಮಾರಾಟವನ್ನು ಮಾಡುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ.

ಪಟಾಕಿಗಳನ್ನು ಸಿಡಿಸುವುದು ಹಲವರ ಉಸಿರಾಟದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಜೊತೆಗೆ ಮನೆಯಲ್ಲಿ ಪ್ರತ್ಯೇಕವಾಗಿರುವ ಕೊರೊನಾ ಪಾಸಿಟಿವ್‌ ವ್ಯಕ್ತಿಗಳ ಆರೋಗ್ಯ ಸ್ಥಿತಿಯನ್ನು ಇದು ಉಲ್ಬಣಗೊಳಿಸುತ್ತದೆ. ಇನ್ನು ಈ ಕ್ರಮಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನೂ  ರಾಜ್ಯ ಸರ್ಕಾರ ಉಲ್ಲೇಖಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: 30 ಲಕ್ಷ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಿದ ಬಿಜೆಪಿ

ಭಿವಾನಿ, ಚಾರ್ಖಿ ದಾದ್ರಿ, ಫರಿದಾಬಾದ್, ಗುರುಗ್ರಾಮ್, ಜಜ್ಜರ್, ಜಿಂದ್, ಕರ್ನಾಲ್, ಮಹೇಂದ್ರಗಢ, ನುಹ್, ಪಲ್ವಾಲ್, ಪಾಣಿಪತ್, ರೇವಾರಿ, ರೋಹ್ಟಕ್ ಮತ್ತು ಸೋನಿಪತ್ ಎಂಬ 14 ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ.

“ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಕಡಿಮೆ ಇರುವ ನಗರಗಳು, ಪಟ್ಟಣ, ಪ್ರದೇಶಗಳಲ್ಲಿ ದೀಪಾವಳಿ ಮತ್ತು ಗುರುಪುರಬ್‌ನಂತಹ ಹಬ್ಬದ ದಿನದಲ್ಲಿ ಕಟ್ಟುನಿಟ್ಟಾಗಿ ರಾತ್ರಿ 8 ರಿಂದ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಬಳಕೆ ಮಾಡಬಹುದು. ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಮಧ್ಯರಾತ್ರಿ 11:55 ರಿಂದ 12:30 ರವರೆಗೆ ಮಾತ್ರ ಪಟಾಕಿ ಬಳಕೆ ಇರುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮದುವೆ ಮತ್ತು ಇತರ ಸಂದರ್ಭಗಳಲ್ಲಿ, ಹಸಿರು ಪಟಾಕಿಗಳನ್ನು ಮಾತ್ರ ಅನುಮತಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಪಟಾಕಿಗಳನ್ನು ಸಿಡಿಸಲು ಅನುಮತಿ ನೀಡುವ ಪ್ರದೇಶಗಳಲ್ಲಿ ಅದರ ಪರಿಣಾಮವನ್ನು ಕಡಿಮೆ ಮಾಡಲು ಗುಂಪು ಗುಂಪುಗಳಲ್ಲಿ ಪಟಾಕಿಗಳನ್ನು ಸಿಡಿಸಲು ಜನರನ್ನು ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ನೆರೆಯ ದೆಹಲಿಯಲ್ಲಿಯೂ ದೀಪಾವಖೆ ಸಮಯದಲ್ಲಿ ಪಟಾಕಿ ಬಳಕೆಯಿಂದ ಅಪಾಯಕಾರಿ ವಾಯು ಮಾಲಿನ್ಯದ ಕಳವಳ ವ್ಯಕ್ತಪಡಿಸಿರುವ ದೆಹಲಿ ಸರ್ಕಾರ ಕಲೆದ ತಿಂಗಳು ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...