Homeಚಳವಳಿಮಧ್ಯಪ್ರದೇಶ: ದಲಿತ ವ್ಯಕ್ತಿಯನ್ನು ಮದುವೆಯಾದ ಯುವತಿಯ ಕೂದಲು ಕತ್ತರಿಸಿ ಶುದ್ಧೀಕರಣ

ಮಧ್ಯಪ್ರದೇಶ: ದಲಿತ ವ್ಯಕ್ತಿಯನ್ನು ಮದುವೆಯಾದ ಯುವತಿಯ ಕೂದಲು ಕತ್ತರಿಸಿ ಶುದ್ಧೀಕರಣ

- Advertisement -
- Advertisement -

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಮದುವೆಯಾದ ಕಾರಣಕ್ಕೆ 24 ವರ್ಷದ ಯುವತಿಯೊಬ್ಬರ ಕೂದಲು ಕತ್ತರಿಸಿ, ನರ್ಮದಾ ನದಿಯಲ್ಲಿ ಸ್ನಾನ ಮಾಡಿಸಿ ‘ಶುದ್ಧೀಕರಣ’ ಮಾಡಿರುವ ಘಟನೆ ವರದಿಯಾಗಿದೆ.

ಆಕೆಯ ಕುಟುಂಬವು ‘ಶುದ್ಧೀಕರಣ’ ಆಚರಣೆಯ ಸಮಯದಲ್ಲಿ ಯುವತಿಯ ತಲೆ ಕೂದಲನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಆಗಸ್ಟ್‌ನಲ್ಲಿ ಸಂಭವಿಸಿದ್ದು, ರಕ್ಷಣೆ ಕೋರಿ ಈ ದಂಪತಿ ಪೊಲೀಸ್ ಠಾಣೆಗೆ ದೂರು ನೀಡಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಅವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ಬೆತುಲ್‌ನ ಪೊಲೀಸ್ ವರಿಷ್ಠಾಧಿಕಾರಿ ಸಿಮಲಾ ಪ್ರಸಾದ್ ಹೇಳಿದ್ದಾರೆ.

ಮದುವೆಯಾಗಿರುವ ವ್ಯಕ್ತಿಯನ್ನು ಬಿಟ್ಟು ತಮ್ಮದೆ ಸಮುದಾಯದ ವ್ಯಕ್ತಿಯನ್ನು ಮರುಮದುವೆಯಾಗುವಂತೆ ಯುವತಿಯ ಕುಟುಂಬವು ಒತ್ತಾಯಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ಸ್ವಯಂಪ್ರೇರಣೆಯಿಂದ ನೋವುಂಟು ಮಾಡಿರುವ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪೊಲೀಸರು ಯುವತಿಯ ಪೋಷಕರು ಸೇರಿದಂತೆ ಕುಟುಂಬದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ, ಈವರೆಗೆ ಯಾರನ್ನು ಬಂಧಿಸಿಲ್ಲ.

ಯುವತಿಯ ದೂರಿನ ಪ್ರಕಾರ, ಆಕೆ ಹಿಂದುಳಿದ ವರ್ಗಕ್ಕೆ (OBC) ಸೇರಿದ್ದಾರೆ. ಮಾರ್ಚ್ 11, 2020 ರಂದು ಆಕೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ 27 ವರ್ಷದ ಯುವಕನನ್ನು ರಹಸ್ಯವಾಗಿ ವಿವಾಹವಾಗಿದ್ದು,  ಆಕೆಯ ಕುಟುಂಬಕ್ಕೆ ಈ ವಿಷಯ ಡಿಸೆಂಬರ್‌ನಲ್ಲಿ ತಿಳಿದಿದೆ. ಬಳಿಕ ಆಕೆ ಆ ವ್ಯಕ್ತಿಯೊಂದಿಗೆ ವಾಸಿಸಲು ಆರಂಭಿಸಿದ್ದಾಗಿ ಆಕೆ ತಿಳಿಸಿದ್ದಾರೆ.

ಈ ವರ್ಷ ಜನವರಿ 10 ರಂದು ಯುವತಿಯ ತಂದೆ ಮಗಳು ಕಾಣೆಯಾಗಿದ್ದಾರೆ ಎಂದು ದೂರು ಸಲ್ಲಿಸಿದ್ದರು. ದೂರಿನ ಪ್ರಕಾರ ಪೊಲೀಸರು ಆಕೆಯನ್ನು ಪತ್ತೆ ಮಾಡಿ ಪೋಷಕರ ಬಳಿಗೆ ಕರೆದೊಯ್ದಿದ್ದಾರೆ. ಆಗಸ್ಟ್‌ನಲ್ಲಿ ಯುವತಿಯ ಕುಟುಂಬದವರು ಆಕೆಯನ್ನು ನರ್ಮದಾ ನದಿಯ ಸೇಥನಿ ಘಾಟ್‌ಗೆ ಶುದ್ಧೀಕರಣ ಆಚರಣೆಗಾಗಿ ಕರೆದೊಯ್ದರು ಎಂದು ಹೇಳಿದ್ದಾರೆ.

“ನನಗೆ ಈ ಆಚರಣೆಯ ಬಗ್ಗೆ ತಿಳಿದಿರಲಿಲ್ಲ. ನಂತರ ನನ್ನ ಕುಟುಂಬ ಸದಸ್ಯರು ದಲಿತರನ್ನು ಮದುವೆಯಾಗಿದ್ದಕ್ಕಾಗಿ ನನ್ನನ್ನು ಶುದ್ಧೀಕರಣ ಮಾಡಲಾಗಿದೆ ಎಂದು ಹೇಳಿದರು” ಎಂದು ಯುವತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಈಗ, ನನ್ನ ಸಮುದಾಯದ ವ್ಯಕ್ತಿಯನ್ನು ಮರುಮದುವೆ ಮಾಡಿಕೊಳ್ಳಬೇಕೆಂದು ಕುಟುಂಬದವರು ಬಯಸುತ್ತಿದ್ದಾರೆ. ಹೀಗಾಗಿ ಅಕ್ಟೋಬರ್ 28 ರಂದು ನಾನು ಪೊಲೀಸ್ ದೂರು ನೀಡಲು ಹಾಸ್ಟೆಲ್‌ನಿಂದ ಬೆತುಲ್‌ಗೆ ಬಂದಿದ್ದೇನೆ” ಎಂದು ಯುವತಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...