Homeಕರ್ನಾಟಕಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ: ಚರ್ಚೆ ನಡೆಸಿ ತೀರ್ಮಾನ ಎಂದ ಸಿಎಂ

ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ: ಚರ್ಚೆ ನಡೆಸಿ ತೀರ್ಮಾನ ಎಂದ ಸಿಎಂ

- Advertisement -
- Advertisement -

ಇತ್ತಿಚೆಗೆ ನಮ್ಮನ್ನಗಲಿದ ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಕರ್ನಾಟಕ ರತ್ನ ಗೌರವ ನೀಡಬೇಕು ಎಂಬ ಕೂಗು ಅಭಿಮಾನಿಗಳು ಮತ್ತು ಚಿತ್ರರಂಗದಿಂದ ಕೇಳಿ ಬರುತ್ತಿದೆ.

ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ’ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಚಿತ್ರರಂಗ ಮತ್ತು ಅಭಿಮಾನಿಗಳಿಂದ ಕೇಳಿ ಬಂದಿದೆ. ತಕ್ಷಣಕ್ಕೆ ಈ ಬೇಡಿಕರ ಬಗ್ಗೆ ಏನು ಹೇಳಲಾಗದು. ಈ ಬಗ್ಗೆ ಪ್ರಮುಖರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜ್‌ಕುಮಾರ್‌ ಅವರನ್ನು ಆಸ್ಪತ್ರೆಗೆ ಸೇರಿಸಿದಾನಿಂದ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯುವವರೆಗೂ ಡಾ.ರಾಜ್‌ಕುಮಾರ್‌ ಅವರ ಕುಟುಂಬದ ಜೊತೆಗಿದ್ದರು.

ಇದನ್ನೂ ಓದಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ಡಾ.ರಾಜ್‌ಕುಮಾರ್‌ ಕುಟುಂಬದ ಪ್ರತಿಭಾನ್ವಿತ ನಟ, ಸಹೃದಯಿ ಪುನೀತ್‌ ರಾಜ್‌ಕುಮಾರ್‌ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ  ಕಳೆದ ಶುಕ್ರವಾರದಂದು (ಅ.29) ಇಹಲೋಹ ತ್ಯಜಿಸಿದ್ದಾರೆ. ಅವರು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದರು.

ಬಾಲ ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್‌ ರಾಜ್‌ಕುಮಾರ್‌ ಅವರು ಕನ್ನಡಿಗರ ಹೃದಯದಲ್ಲಿ ನೆಲೆಸಿದರು. ನಟರಾಗಿ ಅಷ್ಟೇ ಆಗಿ ಉಳಿಯದೇ ಕನ್ನಡ ಚಿತ್ರರಂಗದಲ್ಲಿ ಹೊಸ ನೀರು ಹರಿಯಬೇಕೆಂದು ಹಂಬಲಿಸಿದ ವ್ಯಕ್ತಿ ಅವರಾಗಿದ್ದರು. ಚಿತ್ರರಂಗಕ್ಕೆ ಹೊಸದಾಗಿ ಕಾಲಿಟ್ಟವರನ್ನು ಪೊರೆಯುತ್ತಿದ್ದರು. ಸೋತವರಿಗೆ ಮತ್ತೊಂದು ಅವಕಾಶ ದೊರಕಿಸಿ ನೆಲೆ ನಿಲ್ಲಲು ಬೆನ್ನೆಲುಬಾಗಿದ್ದರು. ತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗಿದೆ.


ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....