Homeಮುಖಪುಟಪಂಜಾಬ್ ಚುನಾವಣೆಗೂ ಮುನ್ನ ಯೂನಿಟ್ ವಿದ್ಯುತ್‌ಗೆ 3 ರೂ ಕಡಿತ ಘೋಷಿಸಿದ ಸಿಎಂ ಚನ್ನಿ

ಪಂಜಾಬ್ ಚುನಾವಣೆಗೂ ಮುನ್ನ ಯೂನಿಟ್ ವಿದ್ಯುತ್‌ಗೆ 3 ರೂ ಕಡಿತ ಘೋಷಿಸಿದ ಸಿಎಂ ಚನ್ನಿ

- Advertisement -
- Advertisement -

ಇಂದಿನಿಂದ ಪಂಜಾಬ್‌ನಲ್ಲಿ ಪ್ರತಿ ಯೂನಿಟ್‌ ವಿದ್ಯುತ್ ಮೇಲೆ 3 ರೂ ಬೆಲೆ ಕಡಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಘೋಷಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಆಪ್ ಅನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿರುವ ಸಿಎಂ, ಪಂಜಾಬ್ ಜನರು ವಿದ್ಯುತ್ ದರದಲ್ಲಿ ಕಡಿತ ಬಯಸುತ್ತಿದ್ದಾರೆಯೇ ಹೊರತು ಉಚಿತ ವಿದ್ಯುತ್ ಅಲ್ಲ ಎಂದು ಸಮೀಕ್ಷೆಗಳು ಹೇಳುತ್ತಿವೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸರ್ಕಾರದ ವಿದ್ಯುತ್ ದರ ಕಡಿತವು ರಾಜ್ಯದ ಶೇ.95 ರಷ್ಟು ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಅಲ್ಲದೆ ರಾಜ್ಯದ ಸರ್ಕಾರಿ ನೌಕರರಿಗೆ 11% ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡುವುದಾಗಿ ಅವರು ಘೋಷಿಸಿದ್ದಾರೆ. ಇದಕ್ಕಾಗಿ 440 ಕೋಟಿ ರೂ ಮೀಸಲಿಡಲಾಗಿದೆ ಎಂದು ವಿವರಿಸಿದ್ದಾರೆ. 2022ರ ಆರಂಭದಲ್ಲಿಯೇ ಪಂಜಾಬ್ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರದ ಘೋಷಣೆಗಳು ಬಂದಿವೆ ಎನ್ನಲಾಗಿದೆ.

ಅತಿಯಾದ ವಿದ್ಯುತ್ ಬಿಲ್‌ ಪಂಜಾಬಿಗಳಿಗೆ ಪ್ರಮುಖ ಸಮಸ್ಯೆಯಾಗಿದೆ, ಇದು ಸಂಪೂರ್ಣ ಅವ್ಯವಸ್ಥೆ ಮತ್ತು ಬಡತನಕ್ಕೆ ಕಾರಣವಾಗಿ ಆತ್ಮಹತ್ಯೆಗೂ ದಾರಿ ಮಾಡಿಕೊಡುತ್ತದೆ. ಇದಕ್ಕೆ ಪರಿಹಾರವಾಗಿ ಇಂದಿನ ಕ್ಯಾಬಿನೆಟ್‌ನಲ್ಲಿ ದರ ಇಳಿಸುವ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಯಾವುದೇ ವ್ಯತ್ಯಯ ಇಲ್ಲದೆ ನಿರಂತರ ವಿದ್ಯುತ್ ಸರಬರಾಜು ಮಾಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರವು ಜಿವಿಕೆ ಗೋಯಿಂಡ್ವಾಲ್ ಸಾಹಿಬ್ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಘೋಷಿಸಿದ್ದಾರೆ.

ಇದುವರೆಗೂ ಪಂಜಾಬ್‌ನಲ್ಲಿ 100 ಯೂನಿಟ್‌ವರೆಗೆ ಒಂದು ಯೂನಿಟ್‌ಗೆ 4.19 ರೂ ವಿದ್ಯುತ್ ದರ ಇತ್ತು. ಇಂದಿನ ಘೋಷಣೆಯಿಂದ ಅದು ಪ್ರತಿ ಯೂನಿಟ್‌ಗೆ ಕೇವಲ 1.19 ರೂ ಆಗಲಿದೆ. 100 ರಿಂದ 300 ಯೂನಿಟ್‌ವರೆಗೆ ಪ್ರತಿ ಯೂನಿಟ್‌ಗೆ 7 ರೂ ಇತ್ತು. ಅದೇ ರೀತಿ 300 ಯೂನಿಟ್‌ನಿಂದ ಮೇಲ್ಪಟ್ಟು 8.76 ರೂ ಇತ್ತು. ಇವೆರಡರಲ್ಲಿಯೂ ಪ್ರತಿ ಯೂನಿಟ್‌ ಮೇಲೆ 3 ರೂ ಕಡಿತ ಘೋಷಿಸಿದ್ದಾರೆ.


ಇದನ್ನೂ ಓದಿ: ಅಕ್ಟೋಬರ್‌ ತಿಂಗಳಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರಹ: ರಾಜ್ಯಗಳ ಪಾಲೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...