Homeಮುಖಪುಟನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು

ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು.

- Advertisement -
- Advertisement -

ಹಿಮಾಚಲ ಪ್ರದೇಶದ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಆಡಳಿತರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ನಾಲ್ಕು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಬೇರಿ ಭಾರಿಸಿದೆ. ಮಂಡಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್‌ ಸ್ಪರ್ಧಿಸುವ ಕುರಿತು ಚರ್ಚೆಗಳು ಎದ್ದಿದ್ದವು. ಕೊನೆ ಕ್ಷಣದಲ್ಲಿ ಬಿಜೆಪಿಯು ಬೇರೆಯವರಿಗೆ ಟಿಕೆಟ್ ನೀಡಿದರೂ ಬಹಳಷ್ಟು ಜನ ಕಂಗನಾ ಹೆಸರಲ್ಲಿ ಮತ ಕೇಳಿದ್ದರು. ಆದರೆ ಆ ಕ್ಷೇತ್ರದಲ್ಲಿಯೂ ಬಿಜೆಪಿ ಸೋಲನ್ನು ಅನುಭವಿಸಿದೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಆ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಇದು ಆಡಳಿತರೂಢ ಬಿಜೆಪಿಗೆ ದೊಡ್ಡ ಹೊಡೆತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ಸಿಎಂ ಜೈರಾಂ ಠಾಕೂರ್, ಸೋಲನ್ನು ಸ್ವೀಕರಿಸುತ್ತೇನೆ, ನಾನೇ ಸೋಲಿನ ಹೊಣೆಯನ್ನು ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.

ಇಂದು ಕಾಂಗ್ರೆಸ್ ಗೆದ್ದಿರುವುದರಿಂದ 2022ರ ಚುನಾವಣೆಯಲ್ಲಿಯೂ ಗೆಲ್ಲುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮಧ್ಯಂತರ ಚುನಾವಣೆಗಳಲ್ಲಿ ಸೋತ ಪಕ್ಷವು ಅಂತಿಮ ಚುನಾವಣೆಯಲ್ಲಿ ಗೆಲ್ಲುವುದನ್ನು ನಾವು ಆಗಾಗ್ಗೆ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ 2019 ರಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿತ್ತು. ಬಿಜೆಪಿಯ ರಾಮ್ ಸ್ವರೂಪ್ ಶರ್ಮಾ ವಿಜಯಿಯಾಗಿದ್ದರು. ಆದರೆ ಅವರು 2021ರ ಮಾರ್ಚ್‌ನಲ್ಲಿ ನಿಧನ ಹೊಂದಿದ್ದರು. ಹಾಗಾಗಿ ಅಲ್ಲಿ ಕಾಂಗ್ರೆಸ್‌ನ ಮಾಜಿ ಸಿಎಂ ವೀರಭದ್ರ ಸಿಂಗ್‌ರವರ ಪತ್ನಿ ಪ್ರತಿಭಾ ಸಿಂಗ್ ಈ ಬಾರಿ ಕಣಕ್ಕಿಳಿದಿದ್ದರು. ಅವರು ಗೆಲುವು ಸಾಧಿಸಿದ್ದಾರೆ.

ಕಂಗನಾ ರಾಣಾವತ್ ಮಂಡಿ ಜಿಲ್ಲೆಯಲ್ಲಿಯೇ ಬೆಳೆದವರು. ಮುಂಬೈನಲ್ಲಿ ನೆಲೆಸಿದರೂ ಆಗಾಗ್ಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿ ಪರವಾಗಿ ಹಲವಾರು ಬಾರಿ ಹೇಳಿಕೆ ನೀಡಿದ್ದರು.

ಮುಂಬೈನಲ್ಲಿ ಆಕೆಯ ಅನಧಿಕೃತ ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಕಂಗನಾ ಮುಗಿಬಿದ್ದಿದ್ದರು. ಆಗ ಬಿಜೆಪಿ ಅವರ ಬೆಂಬಲಕ್ಕೆ ನಿಂತಿತ್ತು. ಆದರೆ ಎನ್‌ಸಿಪಿ, ಕಾಂಗ್ರೆಸ್ ಮತ್ತು ಶಿವಸೇನೆ ಕಂಗನಾ ವಿರುದ್ಧ ಯುದ್ಧವನ್ನೇ ಸಾರಿತ್ತು. ನಂತರ ಒಕ್ಕೂಟ ಸರ್ಕಾರವು ಕಂಗನಾಗೆ ಭಾರೀ ಭದ್ರತೆ ಒದಗಿಸಿತ್ತು.

ಕಂಗನಾ ಹೋರಾಟ ನಿರತ ರೈತರನ್ನು ಅವಮಾನಿಸಿ ಹೇಳಿಕೆ ನೀಡಿದ್ದರು. ಟ್ವಿಟರ್, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಕರ್ನಾಟಕ ಸೇರಿದಂತೆ ಹಲವೆಡೆ ದೂರುಗಳು ದಾಖಲಾಗಿವೆ. ಟ್ವಿಟರ್ ಕಂಗನಾರನ್ನು ಬ್ಯಾನ್ ಮಾಡಿದೆ.

ಈಗ ಹಿಮಾಚಲ ಪ್ರದೇಶದ ಫತೇಪುರ್, ಆರ್ಕಿ ಮತ್ತು ಜುಬ್ಬಲ್ ಕೋತ್ಕೈ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ.


ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...