Homeಚಳವಳಿಗುಜರಾತ್: ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರು

ಗುಜರಾತ್: ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ದೇವಸ್ಥಾನ ಪ್ರವೇಶಿಸಿದ ದಲಿತರು

- Advertisement -
- Advertisement -

ದೇವಾಲಯದಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಸ್ಥಳೀಯ ದಲಿತರೊಂದಿಗೆ ಸೋಮವಾರ ಕಛ್‌ನ ರಾಪರ್ ತಾಲೂಕಿನ ವರ್ನು ಗ್ರಾಮದ ದೇವಸ್ಥಾನದ ಗರ್ಭಗುಡಿಗೆ ಪ್ರವೇಶಿಸಿದ್ದಾರೆ.

ಕಛ್‌ ಜಿಲ್ಲೆಯ ನೇರ್ ಗ್ರಾಮದಲ್ಲಿನ ಗ್ರಾಮದ ದೇವಸ್ಥಾನವನ್ನು ಪ್ರವೇಶಿಸಿದ ಆರೋಪದ ಮೇಲೆ ಇತ್ತೀಚೆಗೆ ಮೇಲ್ಜಾತಿಯ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಸಂತ್ರಸ್ತರನ್ನು ಭೇಟಿ ಮಾಡಲು ಕಚ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಜಿಗ್ನೇಶ್ ಮೇವಾನಿ ಈ ಕ್ರಮ ಕೈಗೊಂಡಿದ್ದಾರೆ.

ಗ್ರಾಮದ ದೇವಸ್ಥಾನದ ಗರ್ಭಗುಡಿಗೆ ದಲಿತರ ಪ್ರವೇಶವನ್ನು ನಿರಾಕರಿಸುವ ಬಗ್ಗೆ ಮಾಹಿತಿ ಪಡೆದ ಬಳಿಕ ದೇವಾಲಯಕ್ಕೆ ಭೇಟಿ ನೀಡಲು ನಿರ್ಧರಿಸಿದ್ದೇನೆ ಎಂದು ಮೇವಾನಿ ಹೇಳಿದ್ದರು. ಯಾವುದೇ ಪೂರ್ವಾಗ್ರಹವಿಲ್ಲದೆ ಪರಿಸ್ಥಿತಿಯನ್ನು ಪರಿಶೀಲಿಸಬೇಕೆಂದು ಎಲ್ಲರಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ಶಾಸಕ ಜಿಗ್ನೇಶ್ ಮೇವಾನಿ ತಮ್ಮ ತಂಡ ಮತ್ತು ಸ್ಥಳೀಯ ದಲಿತರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಮ್ಮ ರಾಷ್ಟ್ರೀಯ ದಲಿತ್ ಅಧಿಕಾರ್‌ ಮಂಚ್‌‍ ತಂಡವು ಎಲ್ಲೆಲ್ಲಿ ದಲಿತರಿಗೆ ದೇವಾಲಯ ಪ್ರವೇಶವನ್ನು ತಡೆಯಲಾಗುತ್ತದೊ ಅಲೆಲ್ಲಾ ದೇವಾಲಯಗಳನ್ನು ಪ್ರವೇಶಿಸುವ ಹಕ್ಕುಗಳಿಗಾಗಿ ಗುಜರಾತ್‌ ರಾಜ್ಯದಲ್ಲಿ ಶೀಘ್ರದಲ್ಲೇ ಚಳವಳಿಯನ್ನು ಪ್ರಾರಂಭಿಸುತ್ತದೆ ಎಂದು ತಿಳಿಸಿದ್ದಾರೆ.

“ಭಾವನಗರ ಜಿಲ್ಲೆಯ ಆರು ಸ್ಥಳಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ ಎಂಬ ವರದಿಗಳು ನಮಗೆ ಸಿಕ್ಕಿವೆ. ನಾವು ಶೀಘ್ರದಲ್ಲೇ ಆ ಸ್ಥಳಗಳಲ್ಲಿ ಇದೇ ರೀತಿಯ ಕ್ರಮವನ್ನು ತೆಗೆದುಕೊಳ್ಳುತ್ತೇವೆ” ಎಂದು ಶಾಸಕ ಮೇವಾನಿ ಹೇಳಿದ್ದಾರೆ.

ದೇವಾಲಯಕ್ಕೆ ಪ್ರವೇಶಿಸಿದ ನಂತರ ಅವರು ಗ್ರಾಮದ ಇತರ ಸಮುದಾಯಗಳ ಜನರೊಂದಿಗೆ ಸಭೆ ನಡೆಸಿದರು ಎಂದು ಮೇವಾನಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ ದಲಿತರಿಗೆ ಮಂಜೂರಾದ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿರುವ ಬಗ್ಗೆ ಮೇವಾನಿ ಕಚ್ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವಿಡಿಯೊ ವರದಿ: ಬ್ಯಾಲಹಳ್ಳಿ ದಲಿತರಿಂದ ದೇವಾಲಯ ಪ್ರವೇಶ; ಸವರ್ಣೀಯರ ಅಸಹನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...