Homeಮುಖಪುಟದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

ದೆಹಲಿ: ಸ್ಥಳೀಯರ ವಿರೋಧದಿಂದ ನಮಾಜ್‌ಗೆ ನಿಗದಿಪಡಿಸಿದ್ದ 8 ಸ್ಥಳಗಳ ಅನುಮತಿ ವಾಪಸ್

- Advertisement -
- Advertisement -

ಗುರುಗ್ರಾಮ್ ಆಡಳಿತವು ಮುಸ್ಲಿಮರಿಗೆ ನಮಾಜ್ ಮಾಡಲು ಗೊತ್ತುಪಡಿಸಿದ 37 ಸ್ಥಳಗಳ ಪೈಕಿ ಎಂಟರಲ್ಲಿ ಸ್ಥಳೀಯರ ವಿರೋಧದಿಂದ ಮಂಗಳವಾರ ಅನುಮತಿ ವಾಪಸ್ ಪಡೆದಿದೆ.

ಗುರುಗ್ರಾಮ್ ಜಿಲ್ಲಾಡಳಿತದ ಅಧಿಕೃತ ಹೇಳಿಕೆಯ ಪ್ರಕಾರ, ಸ್ಥಳೀಯ ಜನರು ಮತ್ತು ಆರ್‌ಡಬ್ಲ್ಯೂಎಯಿಂದ ಆಕ್ಷೇಪಣೆ ಬಂದಿರುವ ಕಾರಣ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

ಸೆಕ್ಟರ್ 49 ರಲ್ಲಿ ಬೆಂಗಾಲಿ ಬಸ್ತಿ, ಡಿಎಲ್‌ಎಫ್ ಹಂತ -3 ರ ವಿ ಬ್ಲಾಕ್, ಸೂರತ್ ನಗರ ಹಂತ -1, ಖೇರ್ಕಿ ಮಜ್ರಾ ಗ್ರಾಮದ ಹೊರವಲಯ, ದ್ವಾರಕಾ ಎಕ್ಸ್‌ಪ್ರೆಸ್‌ವೇ ಬಳಿಯ ದೌಲತಾಬಾದ್ ಗ್ರಾಮದ ಹೊರವಲಯ, ಸೆಕ್ಟರ್ 68 ರ ರಾಮಗಢ ಗ್ರಾಮದ ಬಳಿ, ಡಿಎಲ್‌ಎಫ್ ಸ್ಕ್ವೇರ್ ಟವರ್ ಬಳಿ ಮತ್ತು ರಾಂಪುರ ಗ್ರಾಮದಿಂದ ನಖ್ರೋಲಾ ರಸ್ತೆ. ಈ ಎಂಟು ಸ್ಥಳಗಳಲ್ಲಿ ನಮಾಜ್ ಮಾಡುವಂತಿಲ್ಲ ಎಂದು ಆದೇಶಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ BJP!

“ಯಾವುದೇ ಮಸೀದಿ, ಈದ್ಗಾ ಅಥವಾ ಖಾಸಗಿ ಅಥವಾ ಗೊತ್ತುಪಡಿಸಿದ ಸ್ಥಳದಲ್ಲಿ ನಮಾಜ್ ಮಾಡಬಹುದು. ಆದರೆ, ಯಾವುದೇ ಸಾರ್ವಜನಿಕ ಮತ್ತು ತೆರೆದ ಸ್ಥಳದಲ್ಲಿ ನಮಾಜ್ ಮಾಡಲು ಆಡಳಿತದ ಒಪ್ಪಿಗೆ ಅಗತ್ಯ. ಒಂದು ವೇಳೆ ಸ್ಥಳೀಯ ಜನರು ಇತರ ಸ್ಥಳಗಳಲ್ಲಿ ನಮಾಜ್ ಮಾಡಲು ಆಕ್ಷೇಪಣೆ ವ್ಯಕ್ತಪಡಿಸಿದರೆ, ಅಲ್ಲಿಯೂ ನಮಾಜ್ ಮಾಡಲು ಅನುಮತಿ ನೀಡಲಾಗುವುದಿಲ್ಲ” ಎಂದು ಆಡಳಿತ ಹೇಳಿದೆ.

ಈ ಕುರಿತು ಚರ್ಚೆ ನಡೆಸಲು ಮತ್ತು ಭವಿಷ್ಯದಲ್ಲಿ ನಮಾಜ್ ಮಾಡಲು ಸ್ಥಳಗಳನ್ನು ಗುರುತಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಸಹಾಯಕ ಪೊಲೀಸ್ ಆಯುಕ್ತರು, ಧಾರ್ಮಿಕ ಸಂಘಟನೆಗಳು ಮತ್ತು ಸಿವಿಲ್ ಸೊಸೈಟಿ ಗುಂಪುಗಳ ಸದಸ್ಯರನ್ನೊಳಗೊಂಡ ಸಮಿತಿಯನ್ನು ಗುರುಗ್ರಾಮ್ ಡೆಪ್ಯುಟಿ ಕಮಿಷನರ್ ಯಶ್ ಗರ್ಗ್ ಅವರು ರಚಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲಾಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಧಾರ್ಮಿಕ ಸಮುದಾಯಗಳಿಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುಗ್ರಾಮ್ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದಾರೆ. ಈ ಹಿಂದೆ ಹಲವು ಬಾರಿ ಗುರುಗ್ರಾಮ್ ನಿವಾಸಿಗಳು ಸಾರ್ವಜನಿಕ ಮೈದಾನದಲ್ಲಿ ಶುಕ್ರವಾರದ ನಮಾಜ್ ಮಾಡುವ ಬಗ್ಗೆ ದೂರು ನೀಡಿದ್ದು, ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...