ತ್ರಿಪುರಾ ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ 71 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಘಟನೆಗಳ ವಿಷಯವಾಗಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ 71 ಜನರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕೋಮುಗಲಭೆಯ ವದಂತಿಗಳನ್ನು ಹರಡುವ ಮತ್ತು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುವವ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ 71 ಜನರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತ್ರಿಪುರಾ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ
5 criminal cases has been registered against 71 persons who posted provocative posts on social media. Strict action shall be taken against those persons who are trying to create hatred in the society.
— Tripura Police (@Tripura_Police) November 3, 2021
‘‘ಸರ್ಕಾರ ಮತ್ತು ರಾಜ್ಯ ಪೊಲೀಸರಿಗೆ ಕಳಂಕ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಚಿತ್ರಗಳು ಮತ್ತು ವಿಡಿಯೋಗಳನ್ನು ಅಪ್‌ಲೋಡ್ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಚೋದನಕಾರಿ ಪೋಸ್ಟ್‌ಗಳನ್ನು ಲೈಕ್ ಅಥವಾ ಮರುಟ್ವೀಟ್ ಮಾಡಬೇಡಿ. ಏಕೆಂದರೆ ಅದು ವದಂತಿಗಳನ್ನು ಹರಡುತ್ತದೆ” ಎಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.
ಗೋಮತಿ ಜಿಲ್ಲೆಯ ಕಕ್ರಾಬನ್ ಪ್ರದೇಶದಲ್ಲಿ ಮಸೀದಿಯನ್ನು ಹಾನಿಗೊಳಿಸಿ, ಧ್ವಂಸಗೊಳಿಸಲಾಗಿದೆ ಎಂದು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಸುದ್ದಿ ಹಬ್ಬಿಸಲಾಗಿತ್ತು.
Fake news is being circulated that mosque in Kakraban area of Gomati district has been damaged and vandalized. This is a complete misrepresentation of facts. The mosque in Dargabazar area of Kakraban is completely fine & Gomati police is working to maintain peace and tranquility. pic.twitter.com/mJyhTzArV0
— Tripura Police (@Tripura_Police) November 3, 2021
“ಇದು ಸುಳ್ಳು ಸುದ್ದಿಯಾಗಿದೆ. ಕಕ್ರಬನ್‌ನ ದರ್ಗಾಬಜಾರ್ ಪ್ರದೇಶದಲ್ಲಿನ ಮಸೀದಿಯು ಸಂಪೂರ್ಣವಾಗಿ ಉತ್ತಮವಾಗಿದೆ. ಗೋಮತಿ ಪೊಲೀಸರು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ಕೆಲಸ ಮಾಡುತ್ತಿದ್ದಾರೆ” ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದ್ದವು. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರು.
“ಪಾಣಿಸಾಗರದಲ್ಲಿ ವಿಎಚ್‌ಪಿ ಸುಮಾರು 3,500 ಜನರ ಪ್ರತಿಭಟನಾ ರ್‍ಯಾಲಿಯನ್ನು ಆಯೋಜಿಸಿತ್ತು. ರ್‍ಯಾಲಿಯಲ್ಲಿ ವಿಎಚ್‌ಪಿ ಕಾರ್ಯಕರ್ತರ ಒಂದು ವಿಭಾಗವು ಚಮ್ಟಿಲ್ಲಾ ಪ್ರದೇಶದಲ್ಲಿ ಮಸೀದಿಯನ್ನು ಧ್ವಂಸಗೊಳಿಸಿದೆ. ನಂತರ, ಅಲ್ಲಿಂದ ಸುಮಾರು 800 ಗಜಗಳಷ್ಟು ದೂರದಲ್ಲಿರುವ ರೋವಾ ಬಜಾರ್ ಪ್ರದೇಶದ ಮೂರು ಮನೆಗಳು ಮತ್ತು ಮೂರು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಎರಡು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ” ಪಾಣಿಸಾಗರ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಸೌಭಿಕ್ ಡೇ ಹೇಳಿದ್ದರು.
ಇದನ್ನೂ ಓದಿ: ಮತೀಯ ಸಂಕೇತಗಳಿಗೆ ಎನ್‌ಎಸ್‌ಡಿ ಇನ್‌ಸ್ಟಾಗ್ರಾಮ್ ಖಾತೆ ದುರ್ಬಳಕೆ: 272 ಜೀವಪರರ ಬಹಿರಂಗ ಪತ್ರ


