Homeಮುಖಪುಟಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

ಮುಸ್ಲಿಮರ ಮತಗಳಿಗಾಗಿ ಅಖಿಲೇಶ್‌ ಯಾದವ್ ಮತಾಂತರಕ್ಕೂ ಸಿದ್ಧರಿದ್ದಾರೆ: ಬಿಜೆಪಿ ಸಚಿವ

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರಿಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಬೆಂಬಲವಿದೆ. ಮುಸ್ಲಿಮರನ್ನು ಓಲೈಸಲು ಅವರು ಧಾರ್ಮಿಕ ಮತಾಂತರಕ್ಕೂ ಸಿದ್ಧರಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸಚಿವ ಆನಂದ್‌ ಸ್ವರೂಪ್‌ ಶುಕ್ಲಾ ಆರೋಪಿಸಿದ್ದಾರೆ.

ಮಂಗಳವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಖಿಲೇಶ್‌ ಅವರು ನೆರೆಯ ದೇಶದ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ)ನಿಂದ ಆರ್ಥಿಕ ಬೆಂಬಲವನ್ನು ಪಡೆಯುತ್ತಿರಬಹುದು ಎಂದು ಆರೋಪಿಸಿದ್ದಾರೆ.

‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಸ್ಲಾಮಿಕ್‌ ಜಗತ್ತಿಗೆ ಸವಾಲಾಗಿದ್ದಾರೆ. ಅಖಿಲೇಶ್‌ ಐಎಸ್‌ಐನಿಂದ ಪ್ರೋತ್ಸಾಹ ಮತ್ತು ಸಲಹೆ ಪಡೆಯುತ್ತಿದ್ದಾರೆ. ಇದರಿಂದ ಅವರಿಗೆ ಆರ್ಥಿಕ ಬೆಂಬಲವೂ ಸಿಗುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕ ಶುಕ್ಲಾ ಹೇಳಿದ್ದಾರೆ.

ಭಾನುವಾರ ಹರ್ದೋಯಿಯಲ್ಲಿ ಮಾಡಿದ ಭಾಷಣದಲ್ಲಿ ಯಾದವ್‌ ಅವರು ಮಹಾತ್ಮ ಗಾಂಧಿ, ಸರ್ದಾರ್‌ ವಲ್ಲಭಬಾಯಿ ಪಟೇಲ್‌, ಜವಾಹರ್‌ಲಾಲ್‌ ನೆರು ಮತ್ತು ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್‌ ಅಲಿ ಜಿನ್ನಾ ಅವರು ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ನಾಯಕರು ಮಾತನಾಡಿದ್ದರು. ಇದರ ಬೆನ್ನಲ್ಲೆ ಶುಕ್ಲಾ ಅಖಿಲೇಶ್ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮುಸ್ಲಿಮರನ್ನು ಓಲೈಸಲು ಯಾದವ್‌ ಅವರು ನಮಾಜ್‌ ಮತ್ತು ಉಪವಾಸ ಆಚರಿಸಿದರು. ಮುಸ್ಲಿಮರ ಮತಗಳನ್ನು ಪಡೆಯಲು ಅವರು ‘ಮತಾಂತರ’ ಮತ್ತು ‘ಖತ್ನಾ’ ವನ್ನು ಆಚರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಐಎಸ್‌ಐ ನಿರ್ದೇಶನದ ಮೇರೆಗೆ ಯಾದವ್‌, ಜಿನ್ನಾ ಅವರನ್ನು ವೈಭವೀಕರಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ತಾಲಿಬಾನ್‌ಗೆ ಬೇಕಾದಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಶುಕ್ಲಾ ಆರೋಪಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರನ್ನು ಜಿನ್ನಾ ಅವರೊಂದಿಗೆ ಹೋಲಿಸಿರುವುದು ಖಂಡನೀಯ ಮತ್ತು ಅವರು ಅದಕ್ಕಾಗಿ ಪಶ್ಚಾತ್ತಾಪ ಪಡಬೇಕು ಎಂದಿದ್ದಾರೆ.

ಹರ್ದೋಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಅವರು, ’ಸರ್ದಾರ್‌ ಪಟೇಲ್‌, ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು ಮತ್ತು ಜಿನ್ನಾ ಒಂದೇ ಸಂಸ್ಥೆಯಲ್ಲಿ ಕಲಿತು ಬ್ಯಾರಿಸ್ಟರ್‌ಗಳಾದರು. ಅವರು ಭಾರತ ಸ್ವಾತಂತ್ಯ್ರ ಪಡೆಯಲು ಸಹಾಯ ಮಾಡಿದರು’ ಎಂದು ತಿಳಿಸಿದ್ದರು.

1948ರಲ್ಲಿ ಗೃಹ ಸಚಿವರಾಗಿದ್ದ ಪಟೇಲ್‌ ಅವರು ಗಾಂಧಿಯವರ ಹತ್ಯೆಯ ನಂತರ ಸ್ವಯಂಸೇವಕ ಸಂಘದ ಮೇಲೆ ವಿಧಿಸಿದ್ದ ನಿಷೇಧದ ಬಗ್ಗೆಯೂ ಯಾದವ್‌ ಉಲ್ಲೇಖಿಸಿದ್ದರು.


ಇದನ್ನೂ ಓದಿ: ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...