Homeಅಂತರಾಷ್ಟ್ರೀಯಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

ಕೊರೊನಾ ನಂತರ ಮತ್ತೆ ಜಾಗತಿಕ ಮಾಲಿನ್ಯ ಮಟ್ಟದಲ್ಲಿ ಏರಿಕೆ: ಅಧ್ಯಯನ ವರದಿ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ಸಾರಿಗೆ ಕ್ಷೇತ್ರ ಸ್ಥಗಿತಗೊಂಡಿದ್ದರಿಂದ ಇಳಿಕೆಯಾಗಿದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯು ಇದೀಗ ಮತ್ತೆ ಹೆಚ್ಚುತ್ತಿದೆ. ಮತ್ತೆ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆಯಲ್ಲಿ ಚೀನಾದ ಪಾತ್ರ ಹೆಚ್ಚಿದೆ ಎಂದು ಹೊಸ ವೈಜ್ಞಾನಿಕ ಅಧ್ಯಯನವು ಹೇಳಿದೆ.

ಹವಾಮಾನ ಬದಲಾವಣೆಗೆ ಕಾರಣವಾಗುವ ಹೀಟ್‌-ಟ್ರ್ಯಾಪಿಂಗ್ ಅನಿಲಗಳನ್ನು ಪತ್ತೆಹಚ್ಚುವ ವಿಜ್ಞಾನಿಗಳ ಗುಂಪು ಅಧ್ಯಯನ ನಡೆಸಿದ್ದು, ಈ ವರ್ಷದ ಮೊದಲ ಒಂಬತ್ತು ತಿಂಗಳುಗಳಲ್ಲಿನ ಹೊರಸೂಸುವಿಕೆಯು 2019 ರ ಮಟ್ಟಕ್ಕಿಂತ ಸ್ವಲ್ಪ ಮಾತ್ರವೇ ಕಡಿಮೆ ಇದೆ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಲಾಕ್‌ಡೌನ್‌ಗೂ ಮುಂಚಿತವಾಗಿ ಇದ್ದ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆಯ ಪ್ರಮಾಣ 36.7 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಹೋಲಿಸಿದರೆ 2021 ರಲ್ಲಿ ಪ್ರಪಂಚವು 36.4 ಶತಕೋಟಿ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಅನ್ನು ಹೊರಹಾಕಿದೆ ಎಂದು ಅವರು ಅಂದಾಜಿಸಿದ್ದಾರೆ.

ಕಳೆದ ವರ್ಷ ಕೊರೊನಾ ಅಲೆಯು ಉತ್ತುಂಗದಲ್ಲಿದ್ದಾಗ, ಹೊರಸೂಸುವಿಕೆಯು 34.8 ಶತಕೋಟಿ ಮೆಟ್ರಿಕ್ ಟನ್‌ಗಳಿಗೆ ಕಡಿಮೆಯಾಗಿತ್ತು. ಆದರೆ, ಇದೀಗ ಗ್ಲೋಬಲ್ ಕಾರ್ಬನ್ ಪ್ರಾಜೆಕ್ಟ್‌ನ ನವೀಕರಿಸಿದ ಲೆಕ್ಕಾಚಾರಗಳ ಪ್ರಕಾರ ಈ ವರ್ಷ ಇಂಗಾಲ ಹೊರಸೂಸುವಿಕೆಯ ಪ್ರಮಾಣ ಶೇ. 4.9% ಏರಿಕೆಯಾಗಿದೆ.

“ಹೆಚ್ಚಿನ ದೇಶಗಳು ಕೊರೊನಾ ವೈರಸ್‌ ಪತ್ತೆಯಾಗುವುದಕ್ಕೂ ಮೊದಲಿದ್ದ ಪ್ರವೃತ್ತಿಗೆ ಹಿಂತಿರುಗಿವೆ. ಆ ಎಲ್ಲಾ ದೇಶಗಳಲ್ಲಿಯೂ ಇಂಗಾಲ ಹೊರಸೂಸುವಿಕೆ ಮತ್ತೆ ಹೆಚ್ಚಾಗಿದೆ. ಈ ಪೈಕಿ, ಚೀನಾದಲ್ಲಿನ ಮಾಲಿನ್ಯ ಹೆಚ್ಚಳವು ವಿಶ್ವಾದ್ಯಂತ ಅಂಕಿಅಂಶಗಳು 2019 ರ ಮಾಲಿನ್ಯ ಮಟ್ಟಕ್ಕೆ ಹಿಂದಿರುಗಲು ಹೆಚ್ಚಿನ ಕಾರಣವಾಗಿದೆ” ಎಂದು ಯುನೈಟೆಡ್ ಕಿಂಗ್‌ಡಂನ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ, ಅಧ್ಯಯನ ಸಹ-ಲೇಖಕ ಕೊರಿನ್ನೆ ಲೆಕ್ವೆರ್ ಹೇಳಿದ್ದಾರೆ.

ಭಾರತದಿಂದ ಇಟಲಿಯವರೆಗಿನ ನಗರಗಳಲ್ಲಿ 2020ರ ಅವಧಿಯಲ್ಲಿ ನಾಟಕೀಯವಾಗಿ ಇಂಗಾಲದ ಮಾಲಿನ್ಯವನ್ನು ಕಡಿಮೆಯಾಗುವುದರ ಜೊತೆಗೆ ಶುದ್ದ ಗಾಳಿ ಹೆಚ್ಚುವಂತೆ ಮಾಡುವಲ್ಲಿ ಜಗತ್ತು ಸರಿಯಾದ ಹಾದಿಯಲ್ಲಿದೆ ಎಂದು ಕೆಲವರು ಭಾವಿಸಿರಬಹುದು, ಆದರೆ ವಿಜ್ಞಾನಿಗಳು ಅದು ನಿಜವಲ್ಲ ಎಂದು ಹೇಳಿದ್ದಾರೆ.

“ಪ್ರಪಂಚವು ಜಾಗತಿಕ ತಾಪಮಾನ ಏರಿಕೆಯನ್ನು ಕೈಗಾರಿಕೆಗಳ ಉದಯಕ್ಕೂ ಮೊದಲಿದ್ದ 1.5 ಡಿಗ್ರಿ ಸೆಲ್ಸಿಯಸ್ (2.7 ಡಿಗ್ರಿ ಫ್ಯಾರನ್‌ಹೀಟ್) ಗೆ ಮಿತಿಗೊಳಿಸುವ ಉದ್ದೇಶವನ್ನು ಹೊಂದಿದ್ದರೆ, ಅದನ್ನು ತ್ವರಿತವಾಗಿ ಆರಂಭಿಸಬೇಕು. ಪ್ರಸ್ತುತ ಹೊರಸೂಸುವಿಕೆಯ ಮಟ್ಟವನ್ನು ಗಮನಿದರೆ ಕೇವಲ 11 ವರ್ಷಗಳು ಮಾತ್ರ ಉಳಿದಿವೆ” ಎಂದು ಅಧ್ಯಯನ ವರದಿ ಹೇಳಿದೆ.

1800ರ ದಶಕದ ಅಂತ್ಯದಿಂದ ಪ್ರಪಂಚವು 1.1 ಡಿಗ್ರಿ ಸೆಲ್ಸಿಯಸ್ (2 ಡಿಗ್ರಿ ಫ್ಯಾರನ್‌ಹೀಟ್) ಅನ್ನು ಹೊಂದಿತ್ತು.

“ಇಂಗಾಲದ ಹೊರಸೂಸುವಿಕೆ ಸಂಖ್ಯೆಗಳು ತೋರಿಸುವುದೇನೆಂದರೆ, ಹೊರಸೂಸುವಿಕೆಗಳು (COVID-19 ಸಮಯದಲ್ಲಿ) ಈಗ ಮೂಲತಃ ಸಮತಟ್ಟಾಗಿದೆ ಅಥವಾ ಕಡಿಮೆಯಾಗಿದೆ. ಅದು ಒಳ್ಳೆಯ ಸುದ್ದಿ. ಅದರೆ, ಕೆಟ್ಟ ಸುದ್ದಿ ಎಂದರೆ ಅದು ಸಾಕಾಗುವುದಿಲ್ಲ. ನಾವು ಹೊರಸೂಸುವಿಕೆಯನ್ನು ಇಳಿಸಲು ಪ್ರಾರಂಭಿಸಬೇಕು” ಎಂದು ವರದಿಯ ಭಾಗವಾಗದ ಪೆನ್ಸಿಲ್ವೇನಿಯಾ ಸ್ಟೇಟ್ ಯೂನಿವರ್ಸಿಟಿ ಹವಾಮಾನ ವಿಜ್ಞಾನಿ ಮೈಕೆಲ್ ಮನ್ ಹೇಳಿದ್ದಾರೆ.

2019 ಕ್ಕೆ ಹೋಲಿಸಿದರೆ 2021 ರಲ್ಲಿ ಚೀನಾದಲ್ಲಿ ಹೊರಸೂಸುವಿಕೆ 7% ಹೆಚ್ಚಾಗಿದೆ. ಅದೇ ರೀತಿ, ಭಾರತದ ಹೊರಸೂಸುವಿಕೆ 3% ಹೆಚ್ಚಾಗಿದೆ ಎಂದು ಅಧ್ಯಯನ ಹೇಳಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ಪ್ರಪಂಚದ ಉಳಿದ ಭಾಗಗಳು 2019ಕ್ಕೆ ಹೋಲಿಸಿದರೆ, ಈ ವರ್ಷ ಕಡಿಮೆ ಮಾಲಿನ್ಯವನ್ನು ಹೊಂದಿವೆ.

ಚೀನಾದ ಮಾಲಿನ್ಯ ಜಿಗಿತಕ್ಕೆ ಹೆಚ್ಚಾಗಿ ಕಲ್ಲಿದ್ದಲು ಮತ್ತು ನೈಸರ್ಗಿಕ ಅನಿಲವನ್ನು ಸುಡುವುದರಿಂದ ಮತ್ತು ಲಾಕ್‌ಡೌನ್‌ನಿಂದ ಚೇತರಿಸಿಕೊಳ್ಳಲು ಬೃಹತ್ ಆರ್ಥಿಕ ಪ್ರಚೋದನೆಯೇ ಕಾರಣವಾಗಿದೆ ಎಂದು ಲೆಕ್ವೆರ್ ಹೇಳಿದ್ದಾರೆ.

ಅಂಕಿಅಂಶಗಳು ವಿದ್ಯುತ್ ಬಳಕೆ, ಪ್ರಯಾಣ, ಕೈಗಾರಿಕಾ ಉತ್ಪಾದನೆ ಮತ್ತು ಇತರ ಅಂಶಗಳ ಮೇಲೆ ಸರ್ಕಾರಗಳ ಡೇಟಾವನ್ನು ಆಧರಿಸಿವೆ. ಈ ವರ್ಷ ಹೊರಸೂಸುವಿಕೆಯು ಪ್ರತಿ ಸೆಕೆಂಡಿಗೆ ಸರಾಸರಿ 115 ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಗಾಳಿಯನ್ನು ಸೇರುತ್ತಿದೆ.

ಆಧಾರ: ಇಂಡಿಯನ್ ಎಕ್ಸ್‌ಪ್ರೆಸ್


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...