Homeಚಳವಳಿಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ -...

ಜಾತಿ ತಾರತಮ್ಯ ಆರೋಪ: ದಲಿತ ವಿದ್ಯಾರ್ಥಿನಿಗೆ 10 ವರ್ಷ ಕಳೆದರೂ ಸಿಗದ ಪಿಎಚ್‌ಡಿ ಪದವಿ – ಉಪವಾಸ ಸತ್ಯಾಗ್ರಹ

ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು.

- Advertisement -
- Advertisement -

ದೀಪಾ ಕೆ ಮೋಹನನ್ ಎಂಬ ದಲಿತ ಸಂಶೋಧನಾ ವಿದ್ಯಾರ್ಥಿಯೊರ್ವರು ತನ್ನ ಜಾತಿ ಕಾರಣಕ್ಕೆ 10 ವರ್ಷವಾದರೂ ತನ್ನ ಪಿಎಚ್‌ಡಿ ಪೂರ್ಣಗೊಳಿಸಲು ವಿಶ್ವವಿದ್ಯಾಲಯ ನಿರಾಕರಿಸುತ್ತಿದೆ ಎಂದು ಆರೋಪಿಸಿ ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂಟರ್ನ್ಯಾಷನಲ್ ಮತ್ತು ಇಂಟರ್ ಯೂನಿವರ್ಸಿಟಿ ಸೆಂಟರ್ ಫಾರ್ ನ್ಯಾನೊಸೈನ್ಸ್ ಮತ್ತು ನ್ಯಾನೊಟೆಕ್ನಾಲಜಿ (IIUCNN) ವಿಭಾಗದ ನಿರ್ದೇಶಕರಾದ ನಂದಕುಮಾರ್ ಕಲರಿಕಲ್ ಜಾತಿ ತಾರತಮ್ಯವೆಸಗಿ ತನ್ನ ಪಿಎಚ್‌ಡಿ ಪದವಿಗೆ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ನಡೆಯುತ್ತಿರುವ ಅವರ ಉಪವಾಸ ಸತ್ಯಾಗ್ರಹ ಇಂದಿಗೆ ಏಳನೇ ದಿನಕ್ಕೆ ತಲುಪಿದೆ.

ಈ ವಿಷಯದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಧ್ಯಪ್ರವೇಶಿಸಿ ದಲಿತ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಬೇಕು, ಇದು ಇನ್ನೊಂದು ರೋಹಿತ್ ವೇಮುಲಾ ಪ್ರಕರಣ ಆಗದಂತೆ ತಡೆಯಬೇಕು ಎಂದು ನೂರಾರು ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಮೆಡಿಕಲ್ ಮೈಕ್ರೋಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರುವ ದೀಪಾ, ನಂತರ 2011 ರಲ್ಲಿ MG ಯುನಿವರ್ಸಿಟಿ (MGU) ಗೆ ಸೇರಿದರು. ಬಳಿಕ, ತಾವು ಯೂನಿವರ್ಸಿಟಿಗೆ ಸೇರಿದ ಮೊದಲ ವರ್ಷದಿಂದಲೂ ನಂದಕುಮಾರ್ ಕಲರಿಕಲ್ ಅವರು ದಲಿತೆ ಎಂಬ ಕಾರಣಕ್ಕೆ ತನ್ನ ಶಿಕ್ಷಣಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ.

ದೀಪಾ ಅವರು ಇನ್ಸ್ಟಿಟ್ಯೂಟ್‌ನಲ್ಲಿ ಸಂಶೋಧನೆ ಪ್ರಾರಂಭಿಸಿದಾಗ ಜಂಟಿ ನಿರ್ದೇಶಕರಾಗಿದ್ದ ಮತ್ತು ಈಗ IIUCNN ನಲ್ಲಿ ನಿರ್ದೇಶಕರಾಗಿರುವ ನಂದಕುಮಾರ್ ಆಕೆ ಲ್ಯಾಬ್‌ಗೆ ಪ್ರವೇಶಿಸುವುದನ್ನು, ಲ್ಯಾಬ್‌ನಲ್ಲಿ ಕೆಮಿಕಲ್‌ಗಳು ಮತ್ತು ಪಾಲಿಮರ್‌ಗಳನ್ನು ಬಳಸುವುದನ್ನು ನಿರಾಕರಿಸಿದ್ದರು. ಕೂರಲು ಕುರ್ಚಿ ಸಹ ನೀಡುತ್ತಿರಲಿಲ್ಲ ಮಾತ್ರವಲ್ಲದೆ ಅವರಿಗೆ ಬರುವ ಸ್ಟೈಫಂಡ್ ಅನ್ನು ಕೂಡ ತಡೆಹಿಡಿಯಲು ಮುಂದಾಗಿದ್ದರು ಎನ್ನಲಾಗಿದೆ.

ಒಮ್ಮೆ ತಾನು ಲ್ಯಾಬ್‌ನಲ್ಲಿ ಏಕಾಂಗಿಯಾಗಿದ್ದಾಗ, ತನ್ನನ್ನು ಕೂಡಿ ಹಾಕಿದ್ದರು. ತನ್ನ ಬ್ಯಾಚ್‌ನಲ್ಲಿರುವ ಏಕೈಕ ದಲಿತ ಸ್ಕಾಲರ್‌ ಆಗಿರುವ ತನ್ನೊಂದಿಗೆ ಅಸಭ್ಯವಾಗಿ ಮತ್ತು ನಿಂದನೀಯವಾಗಿ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಪಿಎಚ್‌ಡಿ ಪಡೆಯದಂತೆ ತಡೆಯಲು ಎಲ್ಲಾ ರೀತಿಯಲ್ಲೂ ಯತ್ನಿಸುತ್ತಿದ್ದಾರೆ ಎಂದು ದೀಪಾ ಆರೋಪಿಸಿದ್ದಾರೆ.

“ನಾನು ಈಗಾಗಲೇ ಎಂಫಿಲ್ ಅನ್ನು ಪಡೆದಿದ್ದೇನೆ. 2015 ರ ವೇಳೆಗೆ ನನ್ನ ಪಿಎಚ್‌ಡಿಯನ್ನು ಸಮರ್ಪಕವಾಗಿ ಮುಗಿಸಬಹುದಿತ್ತು. ಆದರೆ, 2021 ಕೊನೆಗೊಳ್ಳುತ್ತಿದೆ. ಪಿಎಚ್‌ಡಿ ಮುಗಿಸಲು ನಾನು ಇನ್ನೂ ಕಷ್ಟಪಡುತ್ತಿದ್ದೇನೆ. ನನ್ನ ನ್ಯಾನೊಮೆಡಿಸಿನ್ ಯೋಜನೆಗಾಗಿ ನಾನು ಸಂಶ್ಲೇಷಣೆಯನ್ನು ಮಾಡಿದ್ದೇನೆ. ನಾನು ಸ್ಕ್ಯಾಫೋಲ್ಡ್ ಅನ್ನು ಅಭಿವೃದ್ಧಿಪಡಿಸಿದ್ದೇನೆ ಮತ್ತು ಅದನ್ನು ಆಪ್ಟಿಮೈಸ್ ಮಾಡಿದ್ದೇನೆ. ಆದರೆ ನಂದಕುಮಾರ್‌ನಿಂದಾಗಿ ನನಗೆ ಇನ್ನೂ ಪಿಎಚ್‌ಡಿ ಮುಗಿಸಲು ಸಾಧ್ಯವಾಗಿಲ್ಲ” ಎಂದು ದೀಪಾ ಹೇಳಿದ್ದಾರೆ.

ತನ್ನ ಸಂಶೋಧನಾ ಮಾರ್ಗದರ್ಶಿಯನ್ನು ಬದಲಾಯಿಸಬೇಕು, ಎಲ್ಲಾ ಇತರ ಪಿಎಚ್‌ಡಿ ವಿದ್ಯಾರ್ಥಿಗಳಂತೆ ಆಕೆಗೆ ತನ್ನ ಸಂಶೋಧನೆಯನ್ನು ಪೂರ್ಣಗೊಳಿಸಲು ಸಾಮಗ್ರಿಗಳನ್ನು ಒದಗಿಸಬೇಕು ಮತ್ತು ನನ್ನ ವಿದ್ಯಾಭ್ಯಾಸಕ್ಕೆ ಅಡ್ಡಿಯಾದ ನಂದಕುಮಾರ್ ಕಲರಿಕಲ್ ಅವರನ್ನು ಸಂಸ್ಥೆಯಿಂದ ತೆಗೆದುಹಾಕಬೇಕು ಎಂಬ ಮೂರು ಹಕ್ಕೊತ್ತಾಯಗಳನ್ನಿಟ್ಟು ಅಕ್ಟೋಬರ್ 29 ರಿಂದ ದೀಪಾ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ

ನವೆಂಬರ್ 1 ರಂದು ವಿಶ್ವವಿದ್ಯಾನಿಲಯವು ದೀಪಾರೊಂದಿಗೆ ಸಭೆ ನಡೆಸಿ ಅವರ ಮೊದಲ ಎರಡು ಬೇಡಿಕೆಗಳನ್ನು ಪೂರೈಸಲು ಒಪ್ಪಿಕೊಂಡದೆ. ಆದರೆ ತಾಂತ್ರಿಕ ಕಾರಣಗಳಿಂದ ನಂದಕುಮಾರ್ ಅವರನ್ನು IIUCNN ನಿಂದ ತೆಗೆದುಹಾಕಲು ನಿರಾಕರಿಸಿದೆ.

ದೀಪಾ ಅವರು 2015ರಲ್ಲಿ ನಂದಕುಮಾರ್ ವಿರುದ್ಧ ಜಾತಿ ತಾರತಮ್ಯದ ದೂರು ಸಲ್ಲಿಸಿದ್ದರು. ಆಗ ವಿಶ್ವವಿದ್ಯಾನಿಲಯವು ಆರೋಪಗಳನ್ನು ಪರಿಶೀಲಿಸಲು ಎನ್ ಜಯಕುಮಾರ್ ಮತ್ತು ಕೆಎಸ್ ಇಂದು ಅವರ ದ್ವಿಸದಸ್ಯ ಸಮಿತಿಯನ್ನು ರಚಿಸಿತ್ತು. ಸಮಿತಿಯು ದೀಪಾ ಅವರ ಆರೋಪ ನಿಜವೆಂದು ವರದಿ ನೀಡಿತು. ಅಲ್ಲದೆ, ದೀಪಾ ಅವರ ಸಂಶೋಧನೆಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವಿಶ್ವವಿದ್ಯಾಲಯವು ಒದಗಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಅದರ ನಂತರವೂ ಏನೂ ಬದಲಾಗಿಲ್ಲ. ದೀಪಾ ದೂರು ನೀಡಲು ರಾಜ್ಯಪಾಲರನ್ನು ಭೇಟಿ ಮಾಡಲು ಯತ್ನಿಸಿದಾಗ ಅವರನ್ನು ಪೊಲೀಸರು ಬಂಧಿಸಿ ಎರಡು ದಿನಗಳ ಕಾಲ ಠಾಣೆಯಲ್ಲಿ ಇರಿಸಿದ್ದರು. ನಂದಕುಮಾರ್ ಕೇರಳದ ಸಿಪಿಐ(ಎಂ)ನ ಉನ್ನತ ನಾಯಕರ ನಿಕಟವರ್ತಿಯಾಗಿರುವುದು ಇದಕ್ಕೆ ಕಾರಣ ಎಂದು ದೀಪಾ ಈ ಹಿಂದೆ ಆರೋಪಿಸಿದ್ದರು. ಇದಕ್ಕಾಗಿಯೇ, ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ದಂತಹ ವಿದ್ಯಾರ್ಥಿ ಒಕ್ಕೂಟಗಳು ಸಹ ತನ್ನನ್ನು ಬೆಂಬಲಿಸಿಲ್ಲ ಎಂದು ದೀಪಾ ಹೇಳಿದ್ದಾರೆ.

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 2016ರಲ್ಲಿ ನಂದಕುಮಾರ್ ವಿರುದ್ಧ ದೀಪಾ ಪೊಲೀಸ್ ದೂರು ದಾಖಲಿಸಿದ್ದರು. ತದನಂತರ, ಆತ ನನ್ನ ವಿರುದ್ಧ ಹೆಚ್ಚು ಸೇಡು ತೀರಿಸಿಕೊಂಡರು. ಅವರು ನನ್ನನ್ನು IIUCNN ನಿಂದ ವಜಾಗೊಳಿಸುವಂತೆ ಹಲವು ಬಾರಿ ವಿಶ್ವವಿದ್ಯಾಲಯಕ್ಕೆ ಪತ್ರಗಳನ್ನು ಬರೆದಿದ್ದಾರೆ. ಅಧ್ಯಯನ ಕೇಂದ್ರದಲ್ಲಿ ಎಲ್ಲವನ್ನೂ ನಿರ್ಧರಿಸುವವರು ಅವರೇ. ವಿಸಿ ಅವರನ್ನು ರಕ್ಷಿಸುತ್ತಿರುವುದರಿಂದ ನಾನು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದೇನೆ” ಎಂದು ದೀಪಾ ಹೇಳಿದ್ದಾರೆ.

“ನಾನು ರಕ್ತಹೀನತೆಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದೇನೆ ಮತ್ತು ನನಗೆ ಹುಟ್ಟಿನಿಂದಲೂ ವಿಎಸ್‌ಡಿ (ವೆಂಟ್ರಿಕ್ಯುಲರ್ ಸೆಪ್ಟಲ್ ಡಿಫೆಕ್ಟ್) ಸಮಸ್ಯೆ ಇದೆ. ಹಾಗಾಗಿ ನಾನು ಈ ಉಪವಾಸ ಸತ್ಯಾಗ್ರಹದಲ್ಲಿ ಪ್ರಾಣ ಕಳೆದುಕೊಂಡರೆ ಅದಕ್ಕೆ ಕಾರಣ ನಂದಕುಮಾರ್ ಕಲರಿಕಲ್, ವಿ.ಸಿ.ಸಾಬು ಥಾಮಸ್, ಸಂಶೋಧನಾ ಮಾರ್ಗದರ್ಶಕ ಡಾ.ರಾಧಾಕೃಷ್ಣನ್ ಇ.ಕೆ ಮತ್ತು ಈ ಸರ್ಕಾರ” ಎಂದು ಅವರು ಅಕ್ಟೋಬರ್ 31 ರಂದು ತಮ್ಮ ಫೇಸ್‌ಬುಕ್‌ನಲ್ಲಿ ಬಹಿರಂಗ ಪತ್ರ ಬರೆದಿದ್ದಾರೆ.

“ರೋಹಿತ್ ವೇಮುಲ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನನಗೆ ಈ ಪರಿಸ್ಥಿತಿಯಲ್ಲಿ ಅರ್ಥವಾಗುತ್ತದೆ. ಆದರೆ, ನ್ಯಾಯಕ್ಕಾಗಿ ಹೋರಾಡದೆ ನಾನು ಪ್ರತಿಭಟನೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ನನ್ನ ಜನರಿಗಾಗಿ ಹೋರಾಡಬೇಕು. ಸೋತ ಅನೇಕರಿಗಾಗಿ ನಾನು ಇಲ್ಲಿ ಗೆಲ್ಲಬೇಕು” ಎಂದೂ ಅವರು ಬರೆದಿದ್ದಾರೆ.

ಭೀಮ್ ಆರ್ಮಿ ಕೇರಳ, ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಮತ್ತು ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ​​ಸೇರಿದಂತೆ ಹಲವು ಸಂಘಟನೆಗಳು ದೀಪಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿವೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...