Homeಮುಖಪುಟಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

ಟಿಎಂಸಿಯ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಸಚಿವ ಸುಬ್ರತ ಮುಖರ್ಜಿ ನಿಧನ

25ನೇ ವಯಸ್ಸಿನಲ್ಲಿಯೇ ಕಾಂಗ್ರೆಸ್‌ ಶಾಸಕರಾಗಿದ್ದ ಸುಬ್ರತ ಮುಖರ್ಜಿಯವರು ಪಶ್ಚಿಮ ಬಂಗಾಳದ ನಾಡಿ ಮಿಡಿತವನ್ನು ಬಲ್ಲವರಾಗಿದ್ದರು. ಐದು ದಶಕಗಳ ಕಾಲ ರಾಜಕೀಯ ಜೀವನದಲ್ಲಿದ್ದ ಮುಖರ್ಜಿಯವರು ಮಮತಾ ಬ್ಯಾನರ್ಜಿಯವರ ರಾಜಕೀಯ ಮಾರ್ಗದರ್ಶಿಯೂ ಹೌದು.

- Advertisement -
- Advertisement -

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಟಿಎಂಸಿ ನಾಯಕ, ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಸುಬ್ರತ ಮುಖರ್ಜಿ (75) ಅವರು ಗುರುವಾರ ನಿಧನರಾಗಿದ್ದಾರೆ.

ಮಮತಾ ಬ್ಯಾನರ್ಜಿಯವರು ಕೊಲ್ಕತ್ತದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ವಿಷಯವನ್ನು ತಿಳಿಸಿದ್ದಾರೆ. “ಸುಬ್ರತಾ ಮುಖರ್ಜಿಯವರು ನಮ್ಮೊಂದಿಗೆ ಇನ್ನಿರುವುದಿಲ್ಲ ಎಂಬುದನ್ನು ನಂಬಲೂ ಆಗುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಮಹಾನ್ ನಾಯಕ. ಇದು ನನಗಾದ ವೈಯಕ್ತಿಕ ನಷ್ಟ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ವಾರ ಐಸಿಯುಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸುಬ್ರತ ಮುಖರ್ಜಿ

1946ರಲ್ಲಿ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜನಿಸಿದ ಮುಖರ್ಜಿ ಸುಬ್ರತ ಅವರು ಐವರು ಒಡಹುಟ್ಟಿದವರಲ್ಲಿ ಹಿರಿಯವರಾಗಿದ್ದರು. ಬಂಗಾಳದ ರಾಜಕೀಯದಲ್ಲಿ ನಿಷ್ಠಾವಂತರಾಗಿದ್ದರು. ಅವರ ರಾಜಕೀಯ ಜೀವನ ವಿದ್ಯಾರ್ಥಿ ದಿಸೆಯಲ್ಲಿಯೇ ಆರಂಭವಾಯಿತು. 1960ರ ದಶಕದಲ್ಲಿ ಆರಂಭವಾಗಿ ಐದು ದಶಕಗಳಿಗೂ ಹೆಚ್ಚು ಕಾಲ ಅವರು ರಾಜಕೀಯದಲ್ಲಿದ್ದರು.

ಇದನ್ನೂ ಓದಿರಿ: ಭ್ರಷ್ಟ, ಕೋಮುವಾದಿ ಬಿಜೆಪಿ ಸೋಲಿಸೋಣ: ಮಮತಾ ಬ್ಯಾನರ್ಜಿ ಜೊತೆ ಮೈತ್ರಿಗೆ ಮುಂದಾದ ಗೋವಾ ಫಾರ್ವಾಡ್ ಪಾರ್ಟಿ

1967ರಲ್ಲಿ ಬಂಗಬಾಸಿ ಕಾಲೇಜಿನ ವಿದ್ಯಾರ್ಥಿ ನಾಯಕರಾಗಿ ರಾಜಕೀಯಕ್ಕೆ ಕಾಲಿಟ್ಟರು. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖರ್ಜಿ ಅವರು ತಮ್ಮ ಸಂಘಟನಾ ಕೌಶಲ ಮತ್ತು ಪ್ರಖರ ಭಾಷಣಗಳಿಂದ ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರಾಗಿ ಹೊಮ್ಮಿದರು. ಕೇಂದ್ರ ಸಚಿವರಾಗಿದ್ದ ಪ್ರಿಯಾ ರಂಜನ್ ದಾಸ್ಮುನ್ಸಿ ಮತ್ತು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರ ಅವರೊಂದಿಗೆ ಮುಖರ್ಜಿಯವರ ಹೆಸರು ಪ್ರವರ್ಧಮಾನಕ್ಕೆ ಬಂತು. ದಾಸ್ಮುನ್ಸಿ ಮತ್ತು ಮಿತ್ರಾ ಕ್ರಮವಾಗಿ 2017 ಮತ್ತು 2020ರಲ್ಲಿ ನಿಧನರಾಗಿದ್ದಾರೆ.

ದಾಸ್ಮುನ್ಸಿ ಅವರೊಂದಿಗೆ ಪಕ್ಷವನ್ನು ಕಟ್ಟಿದ ಮುಖರ್ಜಿಯವರು ಪಶ್ಚಿಮ ಬಂಗಾಳದ ಆಳ ಅಗಲವನ್ನು ಅರಿತವರಾಗಿದ್ದರು. ಸೈದ್ಧಾಂತಿಕ ವಿರೋಧಿಗಳಾಗಿದ್ದ ನಕ್ಸಲ್‌ ಹಾಗೂ ಎಡಪಂಥೀಯ  ವಿಚಾರಧಾರೆವರೊಂದಿಗೆ ಸೆಣಸಾಡಿಸಿದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರೂ ಮುಖರ್ಜಿಯವರ ಸಂಘಟನಾ ಕೌಶಲವನ್ನು ಹಾಡಿ ಹೊಗಳಿದರು.

1971ರಲ್ಲಿ 25ನೇ ವಯಸ್ಸಿನಲ್ಲಿಯೇ ಬ್ಯಾಲಿಗುಂಜ್ ಕ್ಷೇತ್ರದಿಂದ ಸ್ಪರ್ಧಿಸಿದ ಬ್ಯಾನರ್ಜಿಯವರು ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾದರು. ಅತ್ಯಂತ ಕಿರಿಯ ಶಾಸಕ ಎಂದೂ ಖ್ಯಾತರಾದರು. 1972ರಲ್ಲಿ ಸಚಿವರಾಗುವ ಮೂಲಕ ಮುಖರ್ಜಿಯವರ ರಾಜಕೀಯ ಜೀವನ ಮತ್ತೊಂದು ಘಟ್ಟವನ್ನು ಮುಟ್ಟಿತು.

ಸಿದ್ಧಾರ್ಥ ಶಂಕರ್‌ ರಾಯ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತ್ತು. ಕ್ಯಾಬಿನೇಟ್‌‌ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲೇ ಸಚಿರಾದ ಹೆಗ್ಗಳಿಕೆಗೆ ಸುಬ್ರತ ಪಾತ್ರರಾದರು. ಮಾಹಿತಿ ಮತ್ತು ಸಂಸ್ಕೃತಿ ಸಚಿವರಾಗಿ ಗಮನ ಸೆಳೆದರು. 1975-77ರ ಕಾಲಘಟ್ಟದಲ್ಲಿ ತುರ್ತುಪರಿಸ್ಥಿತಿ ಜಾರಿಯಾಗಿ ಪತ್ರಿಕಾ ಸ್ವತಂತ್ರವನ್ನು ಕಿತ್ತುಕೊಂಡಾಗ ತನ್ನದೇ ಪಕ್ಷವನ್ನು ಟೀಕಿಸಿದ್ದರು.

1977ರಲ್ಲಿ ಚುನಾವಣೆಯಲ್ಲಿ ಸೋತರೂ ಪಕ್ಷದಲ್ಲಿ ಅವರ ಕ್ಷಿಪ್ರ ಬೆಳವಣಿಗೆಯನ್

ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. 1982ರ ಚುನಾವಣೆಯಲ್ಲಿ ಜೋರಬಗನ್ ಕ್ಷೇತ್ರದಿಂದ ಅವರು ಮತ್ತೆ ವಿಧಾನಸಭೆಗೆ ಆಯ್ಕೆಯಾದರು. ತಮ್ಮ ಜೀವನದ ಕೊನೆಯ ದಿನದವರೆಗೂ ಬ್ಯಾಲಿಗುಂಗೆ ಕ್ಷೇತ್ರವನ್ನು ಅವರು ಪ್ರತಿನಿಧಿಸಿದರು.

ಇದನ್ನೂ ಓದಿರಿ: ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ರಾಜ್ಯದ ಹಿರಿಯ ರಾಜಕಾರಣಿಗಳ ಪ್ರಕಾರ, ಮುಖರ್ಜಿಯವರು 1970ರ ದಶಕದ ಉತ್ತರಾರ್ಧದಲ್ಲಿ ಮತ್ತು 1960ರ ದಶಕದ ಆರಂಭದಲ್ಲಿ ಛಾತ್ರ ಪರಿಷತ್ತಿನಲ್ಲಿ ಮಮತಾ ಬ್ಯಾನರ್ಜಿಯ ರಾಜಕೀಯ ಮಾರ್ಗದರ್ಶಕರಾಗಿದ್ದರು.

ಮುಖರ್ಜಿ ಅವರು 1984ರ ಸಂಸತ್ತಿನ ಚುನಾವಣೆಯಲ್ಲಿ ಜಾದವ್‌ಪುರ ಲೋಕಸಭಾ ಕ್ಷೇತ್ರದಿಂದ ಆಗಿನ ಸಿಪಿಐ(ಎಂ) ನಾಯಕ ಸೋಮನಾಥ್ ಚಟರ್ಜಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಬ್ಯಾನರ್ಜಿ ಹೆಸರನ್ನು ಪ್ರಸ್ತಾಪಿಸಿದ್ದರು. ಬ್ಯಾನರ್ಜಿಯವರು ಚಟರ್ಜಿಯನ್ನು ಸೋಲಿಸಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯಾಗಿ ಹೊಮ್ಮಿದರು.

1999ರಲ್ಲಿ ಹೊಸದಾಗಿ ರೂಪುಗೊಂಡ ಟಿಎಂಸಿಗೆ ಮುಖರ್ಜಿ ಬಂದರು. ಆದರೆ ಅವರು ಚೌರಂಗೀ ಕ್ಷೇತ್ರದಿಂದ ಕಾಂಗ್ರೆಸ್‌ನ ಶಾಸಕರಾಗಿದ್ದರು. 2005ರಲ್ಲಿ, ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಅವರು ಟಿಎಂಸಿ ತೊರೆದು ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮುಖರ್ಜಿಯವರ ನಿರ್ಗಮನವು ಟಿಎಂಸಿಗೆ ಭಾರೀ ಹೊಡೆತವನ್ನು ನೀಡಿತು. ಇದು 2005ರ ಕೆಎಂಸಿ ಚುನಾವಣೆಯಲ್ಲಿ ಸೋಲಿಗೆ ಕಾರಣವಾಯಿತು. ಮಮತಾ ಬ್ಯಾನರ್ಜಿಯವರು ಮುಖರ್ಜಿಯವರನ್ನು ‘ಕಲ್ಲಂಗಡಿ’ ಎಂದು ಅಡ್ಡ ಹೆಸರು ಇಟ್ಟು ಟೀಕಿಸಿದರು.

ಸಾರ್ವಜನಿಕವಾಗಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಮುಖರ್ಜಿಯವರು, ಸಿಪಿಐ(ಎಂ) ಜೊತೆ ಕೈಜೋಡಿಸಿದ್ದರು. ಎಡರಂಗದ ಆಡಳಿತದ ತೀವ್ರ ವಿಮರ್ಶಕರಲ್ಲಿ ಒಬ್ಬರಾಗಿದ್ದರೂ ಮುಖರ್ಜಿ ಅವರು ಆಗಿನ ಮುಖ್ಯಮಂತ್ರಿ ಜ್ಯೋತಿ ಬಸು ಸೇರಿದಂತೆ ಸಿಪಿಐ(ಎಂ) ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು. ನಂತರ ಅವರು 2005ರಲ್ಲಿ ಕಾಂಗ್ರೆಸ್‌ಗೆ ಮರಳಿದರು. 2010ರ ಕೆಎಂಸಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಟಿಎಂಸಿಗೆ ಸೇರಿದರು.

“ಸುಬ್ರತಾ ಮುಖರ್ಜಿ ಅವರು ಸಮರ್ಥ ಸಂಘಟಕರು ಮತ್ತು ನಿರ್ವಾಹಕರು ಮಾತ್ರವಲ್ಲದೆ ತಳಮಟ್ಟದ ಕಾರ್ಯಕರ್ತರೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದ್ದರು. ಬಹುಶಃ, ಅವರು ಯಾವಾಗಲೂ ಗೆಲ್ಲುವ ಕಡೆ ಇರಲು ಇದೇ ಕಾರಣವಾಗಿರಬಹುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಪ್ರದೀಪ್ ಭಟ್ಟಾಚಾರ್ಯ ಹೇಳಿದ್ದಾರೆ.

2011ರಲ್ಲಿ ಮುಖರ್ಜಿಯವರು ಟಿಎಂಸಿ ಅಭ್ಯರ್ಥಿಯಾಗಿ ಬ್ಯಾಲಿಗುಂಗೆ ಕ್ಷೇತ್ರದಿಂದ ಆಯ್ಕೆಯಾದರು. ಅವರಿಗೆ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಸ್ತುವಾರಿ ನೀಡಲಾಯಿತು. ಅವರ ಅಧಿಕಾರಾವಧಿಯಲ್ಲಿ, ಪಶ್ಚಿಮ ಬಂಗಾಳವು MGNREGA ಯೋಜನೆಯ ಅನುಷ್ಠಾನದಲ್ಲಿ ಉನ್ನತ-ಕಾರ್ಯನಿರ್ವಹಣೆಯ ರಾಜ್ಯಗಳಲ್ಲಿ ಒಂದಾಗಿ ಪ್ರಶಸ್ತಿಗಳನ್ನು ಗಳಿಸಿತು.

2016ರ ಅಸೆಂಬ್ಲಿ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ, ಮುಖರ್ಜಿಯವರ ಹೆಸರು ನಾರದ ಸ್ಟಿಂಗ್ ಟೇಪ್ ಪ್ರಕರಣದಲ್ಲಿ ಇತರ ಕೆಲವು ಟಿಎಂಸಿ ನಾಯಕರೊಂದಿಗೆ ಕೇಳಿ ಬಂದಿತು. ತಮ್ಮ ಮೇಲಿನ ಆರೋಪವನ್ನು ಮುಖರ್ಜಿ ನಿರಾಕರಿಸಿದರು. ಈ ಆರೋಪ “ರಾಜಕೀಯ ಪಿತೂರಿ” ಎಂದು ಕರೆದರು.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೂರು ಭಾರಿ ಸೋಲನ್ನೂ ಸುಬ್ರತ ಮುಖರ್ಜಿ ಕಂಡಿದ್ದರು. ವಾಯುವ್ಯ ಕಲ್ಕತ್ತ ಕ್ಷೇತ್ರದಲ್ಲಿ 2004ರಲ್ಲಿ, ಬಂಕುರ ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಸ್ಪರ್ಧಿಸಿ ಸೋಲುಂಡಿದ್ದರು.


ಇದನ್ನೂ ಓದಿರಿ: ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...