Homeಮುಖಪುಟಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟ ಪ್ರಕರಣ: ಶಿಕ್ಷೆ ಎತ್ತಿಹಿಡಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ವ್ಯಕ್ತಿಯೊಬ್ಬ 10 ವರ್ಷದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಪ್ರಕರಣದಲ್ಲಿ, ‘ಇದು ಆಕಸ್ಮಿಕ ಸ್ಪರ್ಶ’ ಎಂಬ ಆರೋಪಿಯ ವಾದವನ್ನು ತಳ್ಳಿ ಹಾಕಿರುವ ದೆಹಲಿ ಹೈಕೋರ್ಟ್‌, ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಿದ್ದು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ಇದರೊಂದಿಗೆ ನ್ಯಾಯಾಲಯವು ಅಪರಾಧಿಯ ಶಿಕ್ಷೆಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಸಿದೆ.

ಶಾಲೆಯತ್ತ ನಡೆದು ಹೋಗುತ್ತಿದ್ದ ಬಾಲಕಿಗೆ ಬಲವಂತವಾಗಿ ಮುತ್ತು ಕೊಟ್ಟಿದ್ದ ಘಟನೆ 2017ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಸೆಪ್ಟೆಂಬರ್‌ 2019ರಲ್ಲಿ ತೀರ್ಪು ನೀಡಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೊ) ಸೆಕ್ಷನ್‌ 10 (ಉಲ್ಬಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮುಕ್ತಾ ಗುಪ್ತಾ ಅವರು ಪ್ರಾಸಿಕ್ಯೂಷನ್‌, ಅನುಮಾನಗಳನ್ನು ಮೀರಿ ಸಾಕ್ಷಿಯನ್ನು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು. ಆರೋಪಿ ಸ್ಥಳದಲ್ಲಿ ಇದ್ದಾನೆ ಎಂಬುದು ನಿರ್ವಿವಾದ ಎಂದಿರುವ ನ್ಯಾಯಾಲಯ, ಆತನ ಕೈ ಆಕಸ್ಮಿಕವಾಗಿ ಬಲಿಪಶುವಿಗೆ ತಾಗಿದೆಯೇ ಅಥವಾ ಸಂತ್ರಸ್ತೆ ಆರೋಪಿಸಿದಂತೆ ಘಟನೆ ನಡೆದಿದೆಯೇ ಎಂಬುದು ಮಾತ್ರ ಸಮಸ್ಯೆಯಾಗಿ ಉಳಿದಿದೆ ಎಂದು ಹೇಳಿದೆ.

ಈ ಘಟನೆ ನಡೆದಿದ್ದ ಸಂದರ್ಭದಲ್ಲಿ ಬಾಲಕಿಯ ತಂದೆ ಅವಳಿಂದ ಕೇವಲ 10-15 ಹೆಜ್ಜೆಗಳ ಹಿಂದೆ ಇದ್ದರು. ಶಾಲೆಗೆ ಹೋಗುವ ರಸ್ತೆಯ ತಿರುವಿನಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಯೇ ಪ್ರಾಥಮಿಕ ಸಾಕ್ಷಿ ಎಂದು ವಕೀಲರು ದೃಢೀಕರಿಸಿದ್ದರು. ಈ ಘಟನೆ ನಂತರ ಸಂತ್ರಸ್ತೆಯನ್ನು ಪೊಲೀಸ್‌ ಠಾಣೆಗೆ ಕರೆದೊಯ್ದು ದೂರು ನಿಡಲಾಯಿತು. ಮರುದಿನವೇ ಸೆಕ್ಷನ್‌ 164 ರಡಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿದ್ದರಿಂದ, ಸಾಕ್ಷ್ಯಾಧಾರಗಳನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯ ಹೇಳಿದೆ.

ಇಂತಹ ಅಪರಾಧಗಳಿಗೆ ಸೂಚಿಸಲಾದ ಕನಿಷ್ಟ ಶಿಕ್ಷೆ ಐದು ವರ್ಷ ಮತ್ತು ಗರಿಷ್ಠ ಏಳು ವರ್ಷಗಳು ಎಂದಿರುವ ನ್ಯಾಯಾಲಯವು, ’ಅಪೀಲುದಾರರು ಈ ಹಿಂದೆ ಯಾವುದೇ ಪ್ರಕರಣಗಳನ್ನು ಒಳಗೊಂಡಿಲ್ಲ. ವಿಚಾರಣೆ ಸಮಯದಲ್ಲಿ ಮತ್ತು ಮೇಲ್ಮನವಿ ವಿಚಾರಣೆ ನಡೆಯುವಾಗಲು, ನಿರಂತರ ಸೆರೆವಾಸದಲ್ಲಿದ್ದರು’ ಎಂದಿರುವ ನ್ಯಾಯಮೂರ್ತಿ ಗುಪ್ತಾ ಅವರು ಶಿಕ್ಷೆಯನ್ನು ಒಂದು ವರ್ಷ ಕಡಿಮೆಗೊಳಿಸಿದರು.

ಪೊಲೀಸರ ಪ್ರಕಾರ, ಶಾಲೆಗೆ ಹೋಗುತ್ತಿದ್ದ 5ನೇ ತರಗತಿಯ ವಿದ್ಯಾರ್ಥಿನಿಯನ್ನು ಇದ್ದಕ್ಕಿದ್ದಂತೆ ಹಿಡಿದುಕೊಂಡು, ಅವಳ ಕೆನ್ನೆಗೆ ಬಲವಂತವಾಗಿ ಚುಂಬಿಸಿದ್ದನು. ಬಾಲಕಿಯು ಕಿರುಚಿಕೊಂಡಾಗ ಸ್ಥಳಕ್ಕೆ ಧಾವಿಸಿದ ಬಾಲಕಿಯ ತಂದೆ, ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಥಳಿಸಿದ್ದಾರೆ’ ಎಂದು ವಕೀಲರು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದರು.

ಆರೋಪಿಯು ಶಿಕ್ಷೆಗೆ ಒಳಗಾಗುವ ಮೊದಲು, ‘ತಾನು  ಶಾಲಾ ಮಾರ್ಗದ ಮೂಲಕ ಹಾದು ಹೋಗುತ್ತಿದ್ದಾಗ, ಬಾಲಕಿಯು ವಿರುದ್ಧ ದಿಕ್ಕಿನಿಂದ ಬರುತ್ತಿದ್ದಳು. ಆ ಸಮಯದಲ್ಲಿ ಆಕಸ್ಮಿಕವಾಗಿ ನನ್ನ ಕೈ ಬಾಲಕಿಗೆ ತಗುಲಿತ್ತು. ಅದಕ್ಕಾಗಿ ತಕ್ಷಣವೇ ಆಕೆಯ ತಂದೆಗೆ ಕ್ಷಮೆಯಾಚಿಸಿದೆ. ಆದರೆ ಬಾಲಕಿಯ ತಂದೆ ಕ್ಷಮಾಪಣೆ ಸ್ವೀಕರಿಸದೇ ಥಳಿಸಲು ಆರಂಭಿಸಿದರು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದನು.

(ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲಿನ ಹಿಂಸಾಚಾರಗಳು ಹೆಚ್ಚುತ್ತಿವೆ. ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮಹಿಳಾ ಮತ್ತು ಪ್ರಜ್ಞಾವಂತ ಸಂಘಟನೆಗಳ ಹೋರಾಟದಿಂದ ಹಲವಾರು ಕಾನೂನು ಬದಲಾವಣೆಗಳು ಬಂದಿವೆ. ಈ ಪ್ರಕರಣಗಳಲ್ಲಿ ಆರೋಪಿಗೆ ಗರಿಷ್ಟ ಶಿಕ್ಷೆಯ ಸಂಭವವಿದೆ. 18 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಪೋಕ್ಸೊ ಅಡಿಯಲ್ಲಿ ಬರುತ್ತದೆ. ಆಗ ಅಪರಾಧ ನಡೆದಿಲ್ಲ ಎಂದು ಸಾಬೀತುಪಡಿಸುವ ಹೊಣೆ ಆರೋಪಿಯ ಮೇಲಿರುತ್ತದೆ. ಲೈಂಗಿಕ ಹಿಂಸೆ, ಅತ್ಯಾಚಾರದ ವಿರುದ್ಧ ದನಿಯೆತ್ತೋಣ. ಆರೋಗ್ಯಕರ ಸಮಾಜ ನಮ್ಮದಾಗಿಸಿಕೊಳ್ಳೋಣ)


ಇದನ್ನೂ ಓದಿ: ರಾಜಸ್ಥಾನ: ಮಗುವಿನ ಮೇಲೆ ಅತ್ಯಾಚಾರ, ಹತ್ಯೆ; ಅಪರಾಧಿಗೆ 24 ದಿನಗಳಲ್ಲಿ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...