Homeಮುಖಪುಟಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಇನ್ನೆಂದೂ ಆಗಿರದಷ್ಟು ಬಡತನ ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಹೆಚ್ಚಳ: ಅಧ್ಯಯನ

ಕೋವಿಡ್‌ ಬಿಕ್ಕಟ್ಟಿನವರೆಗಿನ ಅಂಕಿ-ಅಂಶಗಳನ್ನು ಮಾತ್ರ ಅಧ್ಯಯನಕ್ಕೆ ಬಳಸಲಾಗಿದೆ. ಕೋವಿಡ್‌ ನಂತರದ ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿರುವ ಸಾಧ್ಯತೆ ಹೆಚ್ಚಿದೆ.

- Advertisement -
- Advertisement -

ಕಳೆದ ಕೆಲವು ತ್ರೈಮಾಸಿಕಗಳಲ್ಲಿ ಭಾರತದಲ್ಲಿ ನಿರುದ್ಯೋಗ ಅಂಕಿಅಂಶಗಳು ಸ್ಥಿರವಾಗಿ ಏರುತ್ತಿವೆ. ಭಾರತದ ಬಡವರ ಸಂಖ್ಯೆಯಲ್ಲಿ ಆಘಾತಕಾರಿ ಹೆಚ್ಚಳವಾಗಿರುವುದನ್ನು ಹೊರ ಹಾಕಿರುವ ಅಧ್ಯಯನದ ಕುರಿತು ‘ದಿ ವೈರ್‌’ ಜಾಲತಾಣ ವರದಿ ಮಾಡಿದೆ.

ಜರ್ಮನಿಯ ಬಾನ್‌ನಲ್ಲಿರುವ IZA ಕಾರ್ಮಿಕ ಅರ್ಥಶಾಸ್ತ್ರ ಸಂಸ್ಥೆಯ ಸಂಶೋಧಕ ಪ್ರೊ.ಸಂತೋಷ್ ಮೆಹ್ರೋತ್ರಾ ಮತ್ತು ಅವರ ಸಹೋದ್ಯೋಗಿ ಜಜಾತಿ ಕೇಶಾರಿ ಪರಿದಾ ಅವರ ಇತ್ತೀಚಿನ ಅಧ್ಯಯನವು ಈ ಸಂಗತಿಯನ್ನು ಬಿಚ್ಚಿಟ್ಟಿದೆ.

ಕಳೆದ ಎಂಟು ವರ್ಷಗಳಲ್ಲಿ (2020ರವರೆಗೆ) ದೇಶದಲ್ಲಿ ಹೆಚ್ಚಾಗಿರುವ ಬಡತನ ಪ್ರಮಾಣವನ್ನು ಅಧ್ಯಯನ ಬಹಿರಂಗಪಡಿಸಿದ್ದು, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ 7 ಕೋಟಿ 60 ಲಕ್ಷ ಹೆಚ್ಚಾಗಿದ್ದಾರೆ. ಭಾರತದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಬಡವರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.

ಈ ದತ್ತಾಂಶವು ಕೋವಿಡ್‌-19 ಬಿಕ್ಕಟ್ಟು ಆರಂಭವಾಗುವವರೆಗೆ ಮಾತ್ರ ಇರುವುದು ಮತ್ತೊಂದು ಆಘಾತಕಾರಿ ಸಂಗತಿ. ಅಂದರೆ ಬಡತನ ರೇಖೆಯ ಕೆಳಗಿನ ಜನರ ಆಘಾತಕಾರಿ ಏರಿಕೆಯು ಸಾಂಕ್ರಾಮಿಕ ರೋಗವು ಬರುವ ಮೊದಲು ಆಗಿದೆ. ಲಾಕ್‌ಡೌನ್‌, ಕೋವಿಡ್‌ ಸಂದರ್ಭದಲ್ಲಿ ಗಣನೀಯವಾಗಿ ಉದ್ಯೋಗ ಕಡಿತವಾಗಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ಸ್ಪಷ್ಟ.

ದಿ ವೈರ್‌ನ ಪತ್ರಕರ್ತರಾದ ಮಿತಾಲಿ ಮುಖರ್ಜಿಯವರು ಸಂತೋಷ್ ಮೆಹ್ರೋತ್ರಾ  ಅವರ ವಿಡಿಯೊ ಸಂದರ್ಶನ ನಡೆಸಿದ್ದು, ಈ ಮಾಹಿತಿಯನ್ನು ಸಂತೋಷ್‌ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಬಡತನ ಹೆಚ್ಚಳಕ್ಕೆ ಕಾರಣಗಳನ್ನು ತಿಳಿಸಿದ್ದಾರೆ.

ಹಿರಿಯ ಅರ್ಥಶಾಸ್ತ್ರಜ್ಞ ಸುರೇಶ್‌ ತೆಂಡೂಲ್ಕರ್‌‌ ಹಾಕಿಕೊಟ್ಟ ಮೆಥಡಾಲಜಿ ಆಧರಿಸಿ, ಭಾರತ ಸರ್ಕಾರದ ನ್ಯಾಷನಲ್‌ ಸ್ಯಾಪಲ್‌ ಸರ್ವೇ ಆಫೀಸ್‌‌ (ಎನ್‌ಎಸ್‌ಎಸ್‌ಒ) ಅಂಕಿ-ಅಂಶಗಳ ಆಧಾರದಲ್ಲಿ ಅಧ್ಯಯನ ಮಾಡಲಾಗಿದೆ.

ನೋಟು ಅಮಾನೀಕರಣದಿಂದಾಗಿ ಅಸಂಘಟಿತ ವಲಯದಲ್ಲಿನ ಬಹುಸಂಖ್ಯೆಯ ಜನರು ಸಮಸ್ಯೆಗೆ ಸಿಲುಕಿದರು. ಆರ್ಥಿಕತೆ ಕುಸಿದು, ಜೀವನಾಗತ್ಯತೆಗಳನ್ನೂ ಪೂರೈಸಿಕೊಳ್ಳಲು ಆಗಲಿಲ್ಲ. ಉದ್ಯೋಗಗಳು ಗಣನೀಯವಾಗಿ ಕಡಿಮೆಯಾಗಿದ್ದು ಈ ಬಡತನ ಹೆಚ್ಚಳಕ್ಕೆ ಕಾರಣ. ಉದ್ಯೋಗ ಕಳೆದುಕೊಂಡಿದ್ದರಿಂದ ಜನರ ಖರೀದಿ ಸಾಮರ್ಥ್ಯ ಕುಸಿಯಿತು. ಇದರ ಆಧಾರದಲ್ಲಿ ಸಮೀಕ್ಷೆ ಮಾಡಲಾಗಿದೆ ಎಂದು ಪ್ರೊ.ಸಂತೋಷ್ ಮೆಹ್ರೋತ್ರಾ ತಿಳಿಸಿದ್ದಾರೆ.

2004- 2011 ಕಾಲಾವಧಿಯಲ್ಲಿ ಶೇ. 37 ಜನರು ಕೃಷಿಯನ್ನು ತೊರೆದರು. ಕೃಷಿಯೇತರ ಕ್ಷೇತ್ರ ಬೆಳೆಯಿತು. ಆದರೆ 2012ರ ಬಳಿಕ ಪ್ರತಿವರ್ಷ ಸುಮಾರು 7.5 ಮಿಲಿಯನ್‌ ಕೃಷಿಯೇತರ ಉದ್ಯೋಗಳು ನಷ್ಟವಾಗುತ್ತ ಬಂದವು ಎಂದು ವಿವರಿಸಿದ್ದಾರೆ.

(ಪ್ರೊ.ಸಂತೋಷ್‌ ಮೆಹ್ರೊತ್ರಾ ಅವರ ಪೂರ್ಣ ಸಂದರ್ಶನವನ್ನು ‘ದಿ ವೈರ್‌‌’ ಯೂಟ್ಯೂಬ್‌ ಚಾನೆಲ್‌ನಲ್ಲಿ ನೋಡಬಹುದು)


ಇದನ್ನೂ ಓದಿರಿ: ನೋಟು ರದ್ಧತಿಗೆ ಐದು ವರ್ಷ: ನಗದು ಬಳಕೆ ಕಡಿಮೆಯಾಯಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...