Homeಕರ್ನಾಟಕಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚದಂತೆ ಪ್ರಿಯಾಂಕ್‌ ಖರ್ಗೆ ಒತ್ತಾಯ

ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆ ಮುಚ್ಚದಂತೆ ಪ್ರಿಯಾಂಕ್‌ ಖರ್ಗೆ ಒತ್ತಾಯ

- Advertisement -
- Advertisement -

ಹಿಂದುಳಿದ ವರ್ಗಗಳ ಕ್ಷೇಮಾಭಿವೃದ್ಧಿಗಾಗಿ 29 ವರ್ಷಗಳ ಹಿಂದೆ ಆರಂಭವಾಗಿದ್ದ ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚದಂತೆ ಚಿತ್ತಾಪುರ ಶಾಸಕರಾದ ಪ್ರಿಯಾಂಕ್‌ ಖರ್ಗೆ ಒತ್ತಾಯಿಸಿದ್ದಾರೆ.

ಈ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ’ ಹಿಂದುಳಿದ ವರ್ಗಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ 1993ರಲ್ಲಿ ಡಿ. ದೇವರಾಜು ಅರಸು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಸಂಸ್ಥೆಯು ಹಿಂದುಳಿದ ಜನಾಂಗಗಳ ಬಗ್ಗೆ ಅಧ್ಯಯನ ನಡೆಸಿ ಕಾರ್ಯಗಾರವನ್ನು ನಡೆಸುತ್ತಿದೆ.  ಸಂಸ್ಥೆಯು ನಡೆಸುವ ಸಮೀಕ್ಷೆ ಹಾಗೂ ವರ್ಗಗಳ ಸ್ಥಿತಿಗತಿಯ ಅಧ್ಯಯನದ ವರದಿಯಿಂದ ಹಿಂದುಳಿದ ವರ್ಗಗಳ ಉನ್ನತಿಗೆ ಹೊಸ ಯೋಜನೆ ರೂಪಿಸಲು ಸರ್ಕಾರಕ್ಕೆ ಅನುಕೂಲವಾಗಿರುತ್ತದೆ’ ಎಂದಿದ್ದಾರೆ.

ಮುಂದುವರೆದು, ‘ಒಂದು ವೇಳೆ ಸಂಸ್ಥೆ ಮುಚ್ಚಿದ್ದಲ್ಲಿ ಹಿಂದುಳಿದ ಸಮುದಾಯಗಳ ಕುಲ ಶಾಸ್ತ್ರೀಯ ಅಧ್ಯಯನ ಮತ್ತು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿ, ಔದ್ಯೋಗಿಕ ಹಾಗೂ ಆರ್ಥೀಕ ಸ್ಥಿತಿಗತಿಗಳ ಅಧ್ಯಯನ ಮೇಲೆ ಪರಿಣಾಮ ಬೀರಲಿದ್ದು, ಸಮುದಾಯಗಳು ಸಬಲೀಕರಣಗೊಳ್ಳದೇ ಹಿಂದುಳಿಯಲು ಸರ್ಕಾರವೇ ನೇರ ಕಾರಣವಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಸ್ಥೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿರುವ ಪ್ರಿಯಾಂಕ್‌ ಖರ್ಗೆ, ‘ಸರ್ಕಾರವು ಈ ಸಂಸ್ಥೆಯನ್ನು ಬಳಸಿಕೊಂಡು ಹಿಂದುಳಿದ ವರ್ಗದ ಮಹಿಳೆಯರ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಾಮ ಮತ್ತು ಶೈಕ್ಷಣಿಕ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸುವ ಮೂಲಕ ನೂತನ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.

ಮೊನ್ನೆ ಉಪಚುನಾವಣೆ ಸಂದರ್ಭದಲ್ಲಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ್ದ ಮುಖ್ಯಮಂತ್ರಿಗಳು, ಇಂದು ಅದೇ ಕಂಬಳಿಯ ಮರೆಯಲ್ಲಿ 29 ವರ್ಷಗಳ ಹಿಂದೆ ಸ್ಥಾಪಿಸಿದ್ದ “ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನೇ” ಮುಚ್ಚಲು ಮುಂದಾಗಿದ್ದಾರೆ. ಬಹುಶಃ ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಈ ಕೊಡುಗೆ ನೀಡಿದ್ದಾರೆ ಎನಿಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಹಿಂದುತ್ವದಿಂದ ಬಂಧುತ್ವದೆಡೆಗೆ…: ಸುನಿಲ್ ಬಜಿಲಕೇರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...