Homeಮುಖಪುಟಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

ಪೆಟ್ರೋಲ್ ಬೆಲೆಯಲ್ಲಿ 10 ರೂ ಕಡಿತಗೊಳಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಕರ್ನಾಟಕವು ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಪೆಟ್ರೊಲ್‌ ಮತ್ತು ಡೀಸೆಲ್‌ ಮೇಲಿನ ಸುಂಕವನ್ನು 7 ರೂವರೆಗೆ ಕಡಿಮೆಗೊಳಿಸಿದ್ದರ ಬೆನ್ನಲ್ಲೆ ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ ಸರ್ಕಾರವು ಲೀಟರ್ ಪೆಟ್ರೊಲ್‌ಗೆ 10 ರೂ ಹಾಗೂ ಡೀಸೆಲ್‌ಗೆ 5 ರೂ ಕಡಿತಗೊಳಿಸಿದೆ.

‘ಪಂಜಾಬ್‌ನಲ್ಲಿ ಪೆಟ್ರೊಲ್‌ ಅಗ್ಗವಾಗಿದೆ. ದೆಹಲಿಗೆ ಹೋಲಿಸಿದರೆ ಪಂಜಾಬ್‌ನಲ್ಲಿ ಪೆಟ್ರೊಲ್‌ ಬೆಲೆ ಈಗ 9 ರೂ ಕಡಿಮೆಯಾಗಿದೆ’ ಎಂದಿರುವ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ’ಪಂಜಾಬ್‌ನಲ್ಲಿ ಪೆಟ್ರೋಲ್ ಬೆಲೆಯನ್ನು ₹ 10 ಮತ್ತು ಡೀಸೆಲ್‌ಗೆ ₹ 5 ಕಡಿತಗೊಳಿಸಲಾಗುವುದು. ಕಳೆದ 70 ವರ್ಷಗಳಲ್ಲಿ ಇದು ಸಂಭವಿಸಿಲ್ಲ’ ಎಂದು ತಿಳಿಸಿದ್ದಾರೆ.

ಕಳೆದ ವಾರವಷ್ಟೆ ಪ್ರತಿದಿನ 35 ಪೈಸೆಗಳಂತೆ ಆರು ದಿನಗಳ ಕಾಲ ಸತತವಾಗಿ ಪೆಟ್ರೋಲ್‌ ಬೆಲೆ ಏರಿಕೆಯಾಗಿತ್ತು. 2020ರ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪೆಟ್ರೊಲ್‌ ಬೆಲೆ  86.47 ರೂ ಆಗಿತ್ತು. ಒಂದು ವರ್ಷದ ಅವಧಿಯಲ್ಲಿ ಅದು 113 ರೂ ತಲುಪಿತ್ತು. ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 30 ರೂಗಳಷ್ಟು ಬೆಲೆ ಏರಿಕೆಯಾಗಿದೆ.

ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 10 ರಾಜ್ಯಗಳು ಮತ್ತು ಇತರ ಎರಡು ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ.

ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್, ಹರಿಯಾಣ ಉತ್ತರಖಂಡ, ಬಿಹಾರ ಮತ್ತು ಓರಿಸ್ಸಾ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಹರಿಯಾಣ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಬಿಹಾರ

ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್‌ರವರು ಲೀಟರ್ ಪೆಟ್ರೋಲ್ ಮೇಲೆ 3.20 ರೂ ಮತ್ತು ಡೀಸೆಲ್ ಮೇಲೆ 3.90ರೂ ವ್ಯಾಟ್ ಕಡಿತ ಮಾಡಿದ್ದಾರೆ.

ಓರಿಸ್ಸಾ

ಓರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 3 ರೂ ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರವು ಆಗಸ್ಟ್ 6 ರಂದೇ ಲೀಟರ್‌ ಪೆಟ್ರೋಲ್ ಮೇಲೆ ತಲಾ 3 ರೂ ತೆರಿಗೆ ಕಡಿತ ಘೋಷಿಸಿತ್ತು.

ಈ ಬೆಲೆ ಇಳಿಕೆಯಿಂದ ದೊಡ್ಡ ಮಟ್ಟದ ಪ್ರಯೋಜನವಿಲ್ಲ. ಕಳೆದ ಒಂದು ವರ್ಷದಿಂದ ಪ್ರತಿ ಲೀಟರ್ ಮೇಲೆ ನಿರಂತರವಾಗಿ 35 – 40 ರೂಗಳಷ್ಟು ಬೆಲೆ ಏರಿಕೆ ಮಾಡಲಾಗಿದೆ. ಅಲ್ಲದೇ ಅಂತರಾಷ್ಟ್ರೀಯ ಕಚ್ಛಾ ತೈಲದ ಬೆಲೆಯೂ ಇಳಿಕೆಯಾಗಿದೆ. ಹಾಗಾಗಿ ಸಣ್ಣ ಮಟ್ಟದ ಬೆಲೆ ಇಳಿಕೆಗಿಂತ ದೊಡ್ಡ ಮಟ್ಟದ ಬೆಲೆ ಇಳಿಕೆಯಾಗಬೇಕೆಂದು ಹಲವಾರು ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...