Homeಚಳವಳಿಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

ಲಖಿಂಪುರ್ ಖೇರಿ ಹತ್ಯಾಕಾಂಡ: ಯುಪಿ ಸರ್ಕಾರದ ಬಗ್ಗೆ ಅಸಮಾಧಾನ, ಸ್ವತಂತ್ರ ಮೇಲ್ವಿಚಾರಣೆಗೆ ಸುಪ್ರೀಂ ಒಲವು

’ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ’-ಸುಪ್ರೀಂಕೋರ್ಟ್

- Advertisement -
- Advertisement -

ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ನಡೆದ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ವರದಿ ಬಗ್ಗೆ ನಾವು ನಿರೀಕ್ಷಿಸಿದಂತೆ ತನಿಖೆ ನಡೆದಿಲ್ಲ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದಲ್ಲಿ ಸ್ವತಂತ್ರ ಮೇಲ್ವಿಚಾರಣೆಗೆ ಆದೇಶಿಸುವುದಾಗಿ ತಿಳಿಸಿರುವ ನ್ಯಾಯಪೀಠವು, ರಾಜಕೀಯ ಆಟಗಳು ಇದರಲ್ಲಿ ಬೇಡ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ ನಡೆಸಲಿ ಎಂದು ಹೇಳಿದೆ. ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

“ಎರಡು ಎಫ್‌ಐಆರ್‌ಗಳ ಸಾಕ್ಷ್ಯಗಳನ್ನು ಪ್ರತ್ಯೇಕವಾಗಿ ದಾಖಲಿಸಬೇಕು. ಹೀಗಾಗಿ ದಿನನಿತ್ಯದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಬೇರೆ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ನಾವು ಒಲವು ತೋರುತ್ತೇವೆ. ನಿಮ್ಮ ರಾಜ್ಯ ಸರ್ಕಾರದ ನ್ಯಾಯಾಧೀಶರು ನಮಗೆ ಬೇಡ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾಯಮೂರ್ತಿ ರಂಜೀತ್ ಸಿಂಗ್ ಅಥವಾ ನ್ಯಾಯಮೂರ್ತಿ ರಾಕೇಶ್ ಕುಮಾರ್ ಬಗ್ಗೆ ಯೋಚಿಸುತ್ತೇವೆ” ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ತಿಳಿಸಿದೆ.

ಎಂಟು ಜನರ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅಕ್ಟೋಬರ್ 8 ರಂದು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಲಖಿಂಪುರ್‌ ಹತ್ಯಾಕಾಂಡದ ವರದಿ ವಿಳಂಬ: ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಕಳೆದ ಎರಡು ವಾರಗಳ ಹಿಂದೆ (ಅ.26) ಹತ್ಯಾಕಾಂಡ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಪ್ರಕರಣದಲ್ಲಿ ಕೇವಲ 23 ಪ್ರತ್ಯಕ್ಷದರ್ಶಿ ಸಾಕ್ಷಿಗಳು ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು. ಹೆಚ್ಚಿನ ಸಾಕ್ಷಿಗಳನ್ನು ಸಂಗ್ರಹಿಸಿ ಅವರಿಗೆ ರಕ್ಷಣೆ ನೀಡಿ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿತ್ತು. ಜೊತೆಗೆ  ಒಂದು ವೇಳೆ ಸಾಕ್ಷಿಗಳ ಹೇಳಿಕೆಗಳನ್ನು ಪಡೆಯಲು ನ್ಯಾಯಾಂಗ ಅಧಿಕಾರಿಗಳ ಕೊರತೆಯಿದ್ದಲ್ಲಿ ಹತ್ತಿರದ ಜಿಲ್ಲೆಗಳ ನ್ಯಾಯಾಧೀಶರು ಸಿಬ್ಬಂದಿಯನ್ನು ಒದಗಿಸುವಂತೆ ನಿರ್ದೇಶನ ನೀಡಿತ್ತು.
ಲಖಿಂಪುರ್‌
PC: PTI
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ, ಒಕ್ಕೂಟ ಸರ್ಕಾರದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರ ಗುಂಪು, ಯುಪಿಯ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ಪ್ರತಿಭಟನೆ ನಡೆಸಿ ವಾಪಾಸಾಗುತ್ತಿದ್ದರು. ಆಗ ಏಕಾಏಕಿ ಅವರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಮತ್ತು ಆತನ ಬೆಂಬಲಿಗರು ಕಾರು ಹರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆಯಲ್ಲಿ ನಾಲ್ಕು ರೈತರು ಮೃತಪಟ್ಟರೆ ಹಲವರು ಗಾಯಗೊಂಡಿದ್ದರು. ಆ ನಂತರ ನಡೆದ ಹಿಂಸಾಚಾರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಹತ್ಯೆಯಾಗಿದ್ದರು. ಇದುವರೆಗೆ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ.
ಘಟನೆಯ ಕುರಿತು ಸಿಬಿಐ ಒಳಗೊಂಡ ಉನ್ನತ ಮಟ್ಟದ ನ್ಯಾಯಾಂಗ ತನಿಖೆಯನ್ನು ಕೋರಿ ಇಬ್ಬರು ವಕೀಲರು ಸಿಜೆಐಗೆ ಪತ್ರ ಬರೆದ ನಂತರ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ ಪ್ರಕರಣ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...